ಪ್ರಿಯಾಂಕಾ ಹಾರ ಹಾಕಿದ ಶಾಸ್ತ್ರಿ ಪ್ರತಿಮೆ ಶುದ್ಧಗೊಳಿಸಿದ ಬಿಜೆಪಿ ಕಾರ್ಯಕರ್ತರು
ಲಕ್ನೋ, ಮಾರ್ಚ್ 21: ಉತ್ತರ ಪ್ರದೇಶದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಹೂವಿನ ಹಾರ ಹಾಕಿದ ಕೆಲವೇ ನಿಮಿಷಗಳಲ್ಲಿ ಬಿಜೆಪಿ ಕಾರ್ಯಕರ್ತರು ಅದನ್ನು 'ಶುದ್ಧ'ಗೊಳಿಸಿದ ಘಟನೆ ಬುಧವಾರ ನಡೆದಿದೆ.
ಶಾಸ್ತ್ರಿ ಅವರ ಪ್ರತಿಮೆಗೆ ಹೂವಿನ ಹಾರ ಹಾಕಿದ್ದ ಪ್ರಿಯಾಂಕಾ ಗಾಂಧಿ ಅಲ್ಲಿಂದ ತೆರಳಿದ ಕೂಡಲೇ ಬಿಜೆಪಿಯ ಕಾರ್ಯಕರ್ತರ ಗುಂಪೊಂದು ಪ್ರತಿಮೆಯನ್ನು ಗಂಗಾಜಲದಿಂದ ತೊಳೆದು ಶುದ್ಧೀಕರಿಸಿದೆ.
ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾಧ್ರಾ ಭ್ರಷ್ಟಾಚಾರ ಆರೋಪ ಹೊತ್ತಿದ್ದಾರೆ. ಅಂತಹ ವ್ಯಕ್ತಿಯ ಪತ್ನಿ ಶಾಸ್ತ್ರಿ ಅವರ ಪ್ರತಿಮೆಯನ್ನು ಮುಟ್ಟಲು ನಾವು ಬಿಡುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದರು.

'ನಾವು ಪ್ರತಿಮೆಯನ್ನು ಗಂಗಾಜಲದಿಂದ ಶುದ್ಧಗೊಳಿಸಿದ್ದೇವೆ. ಇದು ಭ್ರಷ್ಟ ಯುಪಿಎ ಸರ್ಕಾರದ ವಿರುದ್ಧದ ಪ್ರತಿಭಟನೆಯಾಗಿ ಮಾಡಿರುವುದು. ಅವರು ದೇಶವನ್ನು 70 ವರ್ಷಗಳ ಕಾಲ ಲೂಟಿ ಮಾಡಿದ್ದಾರೆ' ಎಂದು ಮತ್ತೊಬ್ಬ ಕಾರ್ಯಕರ್ತ ಆರೋಪಿಸಿದರು.
ವಾರಣಾಸಿಯ ರಾಮನಗರದ ಶಾಸ್ತ್ರಿ ಚೌಕದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಪ್ರಿಯಾಂಕಾ ಗಾಂಧಿ ಮಾಲಾರ್ಪಣೆ ಮಾಡಿದ್ದರು.
ಈ ಘಟನೆಗೆ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಲಾಲ್ ಬಹದ್ದೂರ್ ಶಾಸ್ತ್ರಿ ಒಬ್ಬ ಕಾಂಗ್ರೆಸ್ ನಾಯಕರಾಗಿದ್ದರು ಎಂಬುದನ್ನು ಮರೆಯಬೇಡಿ ಎಂದು ಹೇಳಿದೆ.
ಬೇರೆಯವರ ಆಸ್ತಿಯನ್ನು ತಮ್ಮದೆಂದು ಹೇಳಿಕೊಳ್ಳುವುದು ಬಿಜೆಪಿಯ ಹವ್ಯಾಸವಾಗಿಬಿಟ್ಟಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಟೀಕಿಸಿದ್ದಾರೆ.
'ಶಾಸ್ತ್ರಿಗೆ ಅವಮಾನ ಮಾಡಿದ ಪ್ರಿಯಾಂಕಾ'
मुंडी झुकाइएके सर झटकाइएके
— Chowkidar Smriti Z Irani (@smritiirani) 20 March 2019
गुमान में बिटिया भूल गई मरजाद
आपन गले की उतरन, पहनाए दीहिन
शास्त्री जी के अपमान पर ताली बजाएके, हाथ हिलाइएके
चल दीहलें कांग्रेस बिटिया तोहार pic.twitter.com/ndwT15Y8co
ಪ್ರಿಯಾಂಕಾ ಗಾಂಧಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.
ಬಳಕೆ ಮಾಡಿರುವ ಹೂವಿನ ಹಾರವನ್ನು ಪ್ರಿಯಾಂಕಾ ಶಾಸ್ತ್ರಿ ಅವರ ಪ್ರತಿಮೆಗೆ ಹಾಕಿದ್ದಾರೆ ಎನ್ನಲಾಗುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಸ್ಮೃತಿ ಇರಾನಿ, ಪ್ರಿಯಾಂಕಾ ವಿರುದ್ಧ ಹರಿಹಾಯ್ದಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications