Breaking: ಉತ್ತರ ಪ್ರದೇಶ:ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆ

ಲಕ್ನೋ, ಸೆ.20: ಪೂರ್ವ ಉತ್ತರ ಪ್ರದೇಶದ ಸಂತ ಕಬೀರ್ ನಗರದ ರಾಂಪುರ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕ ಮತ್ತು 15 ವರ್ಷದ ಬಾಲಕಿಯ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರು ಇಬ್ಬರನ್ನು ಹತ್ಯೆಗೈದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಯುವಕ ಮತ್ತು ಬಾಲಕಿ ನಡುವೆ ಸಂಬಂಧವಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಅವರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Bodies of 2 Teens Found Hanging From Tree in Uttar Pradesh

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದು ಸಂತ ಕಬೀರ್ ನಗರ ಎಸ್ಪಿ ಸೋನಮ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Bodies of 2 Teens Found Hanging From Tree in Uttar Pradesh

ಲಖಿಂಪುರ ಖೇರಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಅಪ್ರಾಪ್ತ ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+