• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ಧ: ಮಾಯಾವತಿ

|

ಲಕ್ನೋ, ಸೆಪ್ಟೆಂಬರ್ 17: ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ಧ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ಈ ಮೂಲಕ 2019 ರ ಮಹಾಮೈತ್ರಿಕೂಟದ ಕನಸೂ ಭಗ್ನವಾಗುವ ಸೂಚನೆ ನೀಡಿದ್ದಾರೆ!

ಬಿಜೆಪಿಯ ಸೋಲಿಸುವ ಏಕೈಕ ಉದ್ದೇಶದಿಂದ ಎಲ್ಲ ರಾಜಿಗೂ ಸಿದ್ಧವಾಯ್ತೇ ಕಾಂಗ್ರೆಸ್

ಈ ವರ್ಷದ ಡಿಸೆಂಬರ್ ನಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಬಿಎಸ್ಪಿ ಮೈತ್ರಿ ಮಾಡಿಕೊಳ್ಳುವುದಾಗ ಹೇಳಿತ್ತು. ಆದರೆ ಸೀಟು ಹಂಚಿಕೆಯ ವಿಷಯದಲ್ಲಿ ಉಭಯ ಪಕ್ಷಗಳ ನಡುವೆ ಒಮ್ಮತ ಮೂಡದ ಕಾರಣ ಏಕಾಂಗಿಯಾಗಿಯೇ ಚುನಾವಣೆ ಎದುರಿಸುವುದಾಗಿ ಮಾಯಾವತಿ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಎಸ್ಪಿಗಳ ನಡುವೆ ಸೀಟು ಹಂಚಿಕೆಯ ವಿಚಾರದಲ್ಲಿ ಮಾತುಕತೆ ಮುಂದುವರಿದಿದ್ದು, ಅಕಸ್ಮಾತ್ ಮಾಯಾವತಿ ಅವರು ಕೇಳಿದಷ್ಟು ಸೀಟು ನೀಡಲು ಕಾಂಗ್ರೆಸ್ ಒಪ್ಪಿದ್ದೇ ಆದಲ್ಲಿ ಚುನಾವಣಾ ಪೂರ್ವ ಮೈತ್ರಿ ಸಾಧ್ಯವಿದೆ.

ಕಾಂಗ್ರೆಸ್-ಬಿಎಸ್ಪಿ ಮೈತ್ರಿ ಬಗ್ಗೆ ಮಾಯಾವತಿ ಏನಂತಾರೆ?

ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿಯೇ ಈ ಎರಡೂ ಪಕ್ಷಗಳು ಚುನಾವಣೆ ಎದುರಿಸಲು ಮುಂದಾದರೆ ಈ ಸನ್ನಿವೇಶದ ಲಾಭ ಬಿಜೆಪಿಗೆ ಆಗಲಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ. ಹಾಗೊಮ್ಮೆ ಆದರೆ ಅಲ್ಲದೆ 2019 ರ ಲೋಕಸಭಾ ಚುನಾವಣೆಯ ಬಹು ನಿರೀಕ್ಷಿತ ಮಹಾಮೈತ್ರಿಕೂಟ ಆರಂಭಕ್ಕೂ ಮುನ್ನವೇ ಮುರಿದುಬೀಳಬಹುದು.

English summary
Bahujan Samaj Party supremo Mayawati has raised the stakes in efforts to put up a united opposition front for the 2019 Lok Sabha elections. On Sunday, she said the BSP is prepared to fight the elections on its own if it is not offered seat sharing deals that it is satisfied with.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X