ಪೌರತ್ವ ಪ್ರತಿಭಟನೆ; ಉತ್ತರಪ್ರದೇಶದಲ್ಲಿ 9 ಜನ ಸಾವು

ಲಕ್ನೋ, ಡಿಸೆಂಬರ್ 20: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ನಿನ್ನೆ ನಡೆದ ಪ್ರತಿಭಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಇಂದು ಐವರು ದುರ್ಮರಣಕ್ಕೀಡಾಗಿದ್ದಾರೆ. ಪ್ರತಿಭಟನಗೆಳು ನಡೆಯುವಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಚಕಮಕಿ ನಡೆದು ಈ ದುರ್ಘಟನೆ ಸಂಭವಿಸಿವೆ ಎಂದು ತಿಳಿದು ಬಂದಿದೆ. ಇಂದು ಮಿರತ್‌ನಲ್ಲಿ ಒಬ್ಬ ಸಾವನ್ನಪ್ಪಿ, 11 ಜನ ಗಾಯಗೊಂಡಿದ್ದಾರೆ. ಲಕ್ನೋ ಹಾಗೂ ಕಾನ್ಪುರದಲ್ಲಿ ತಲಾ ಇಬ್ಬರು ಮೃತಪಟ್ಟು, 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪ್ರತಿಭಟನೆಗಳು ಮುಂದುವರೆದಿದ್ದು, ಉತ್ತರಪ್ರದೇಶದಲ್ಲಿ ಡಿಸೆಂಬರ್ 21 ರವರೆಗೆ ಇಂಟರನೆಟ್ ಸ್ಥಗೀತಗೊಳಿಸಿ, ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ. ಅಲ್ಲಲ್ಲಿ ಪ್ರತಿಭಟನಾಕಾರರು ಪೊಲೀಸ್ ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ.

CAA Protest: Five People Killed In UP Death Toll Touches 9

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂಕೋರ್ಟ ನಿರಾಕರಿಸಿದ್ದು, ಈ ಕುರಿತು ಸಿಂಧುತ್ವ ಪ್ರಶ್ನಿಸಿ, ದೇಶದ ಕೆಲ ರಾಜಕೀಯ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಸುಪ್ರೀಂಕೋರ್ಟ ಗೆ ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಈ ಕುರಿತು ಜನೇವರಿ ಹೆಚ್ಚಿನ ವಿಚಾರಣೆಯನ್ನು ಜನೇವರಿ 22 ಕ್ಕೆ ಮುಂದೂಡಿದೆ. ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಖಂಡಿಸಿ ದೇಶಾದ್ಯಂತ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು 59 ಅರ್ಜಿಗಳು ಸಲ್ಲಿಕೆಯಾಗಿದ್ದವು. ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+