ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಚೋರ್ ಪಿಎಂ' ಎಂದು ಟೀಕಿಸಿದ ಗೌರಮ್ಮನ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್

|
Google Oneindia Kannada News

Recommended Video

ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ರಮ್ಯಾ, ಉತ್ತರ ಪ್ರದೇಶದಲ್ಲಿ ದೂರು ದಾಖಲು | Oneindia Kannada

ಲಖನೌ, ಸೆಪ್ಟೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಫೋಟೊವನ್ನು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರಫೇಲ್ ವಿವಾದದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಆರು ಸಂಗತಿಗಳುರಫೇಲ್ ವಿವಾದದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಆರು ಸಂಗತಿಗಳು

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ದ್ವೇಷ ಕಾರುವಂತಹ ಪೋಸ್ಟ್ ಅನ್ನು ರಮ್ಯಾ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಲಖನೌ ಮೂಲದ ಕಾರ್ಯಕರ್ತ ಮತ್ತು ವಕೀಲ ಸಯ್ಯದ್ ರಿಜ್ವಾನ್ ಅಹ್ಮದ್ ಅವರು ಗೊಮ್ಟಿನಗರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದರು.

ರಫೇಲ್ ಒಪ್ಪಂದ: ವಿವಾದದ ನಡುವೆ ಮರೆಯಾದ ಸೂಕ್ಷ್ಮ ಸತ್ಯಗಳುರಫೇಲ್ ಒಪ್ಪಂದ: ವಿವಾದದ ನಡುವೆ ಮರೆಯಾದ ಸೂಕ್ಷ್ಮ ಸತ್ಯಗಳು

ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 124 ಎ (ದೇಶದ್ರೋಹ) ಅಡಿಯಲ್ಲಿ ರಮ್ಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

case fir on ramya for hatred post against narendra modi uttar pradesh rafale deal

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಅನಿಲ್ ಅಂಬಾನಿಗೆ ನೆರವಾಗಲು ಲಾಬಿ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಅವರನ್ನು 'ಕಳ್ಳ' ಎಂದು ನಿಂದಿಸಿದ್ದರು.

ಯುವಜನರಿಂದ ಹಣ ಕದ್ದು, ಅಂಬಾನಿ ಕಿಸೆಗೆ ತುಂಬಿಸುವ ಚೌಕಿದಾರ: ರಾಹುಲ್ ಆರೋಪಯುವಜನರಿಂದ ಹಣ ಕದ್ದು, ಅಂಬಾನಿ ಕಿಸೆಗೆ ತುಂಬಿಸುವ ಚೌಕಿದಾರ: ರಾಹುಲ್ ಆರೋಪ

ಈ ಹೇಳಿಕೆಯನ್ನು ಬಳಸಿಕೊಂಡಿದ್ದ ರಮ್ಯಾ, ಮೋದಿ ಈ ಪ್ರಕರಣದ ಬಗ್ಗೆ ತುಟಿಬಿಚ್ಚುತ್ತಿಲ್ಲ ಎಂದು ಟ್ವಿಟ್ಟರ್‌ನಲ್ಲಿ ಟೀಕಿಸಿದ್ದರು. ಆದರೆ, ಅದಕ್ಕೆ ಬಳಸಿದ್ದ ಚಿತ್ರ ಆಕ್ಷೇಪಾರ್ಹವಾಗಿತ್ತು. ಈ ಬಗ್ಗೆ ಬಿಜೆಪಿ ಮತ್ತು ಮೋದಿ ಅಭಿಮಾನಿಗಳು ಟ್ವಿಟ್ಟರ್‌ನಲ್ಲಿಯೇ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

English summary
Rafale deal: FIR has been lodged against Ramya (Divya Spandana) for tweeting an offensive photograph of Prime Minister over Rafale deal controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X