• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತನ್ನದೇ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ ಸಿಬಿಐ

|

ಘಾಜಿಯಾಬಾದ್,ಜನವರಿ 14: ಕೇಂದ್ರೀಯ ತನಿಖಾ ದಳ ತನ್ನದೇ ಅಧಿಕಾರಿಯ ಮನೆಯ ಮೇಲೆ ಇಂದು ದಾಳಿ ನಡೆಸಿದೆ.

ಈ ದಾಳಿಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಸಿಬಿಐ ಈ ವರೆಗೂ ಯಾವುದೇ ಮಾಹಿತಿಯನ್ನೂ ಬಿಟ್ಟುಕೊಟ್ಟಿಲ್ಲ. ಘಾಜಿಯಾಬಾದ್ ನ ಶಿವಾಲಿಕ್ ಅಪಾರ್ಟ್ಮೆಂಟ್ಸ್ ನಲ್ಲಿ 2-3 ಮಂದಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ; ಟಿಎಂಸಿ ನಾಯಕನ ಮನೆ ಮೇಲೆ ಸಿಬಿಐ ದಾಳಿ

ಭ್ರಷ್ಟಾಚಾರದ ಆರೋಪದ ಅಡಿಯಲ್ಲಿ ರೈಡ್ ಮಾಡಲಾಗಿರುವ ಅಧಿಕಾರಿಗಳ ಹೆಸರುಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿಲ್ಲ. ಆದರೆ ಓರ್ವ ಡಿವೈ.ಎಸ್ ಪಿ ಶ್ರೇಣಿಯ ಅಧಿಕಾರಿ ನಿವಾಸದ ಮೇಲೆ ದಾಳಿಯಾಗಿದೆ ಎಂದು ಐಎಎನ್ಎಸ್ ವರದಿ ಮೂಲಕ ತಿಳಿದುಬಂದಿದೆ.

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಘಾಜಿಯಾಬಾದ್ ನಲ್ಲಿರುವ ತನ್ನ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಅಧಿಕಾರಿಗಳಿಗೆ ಸಂಬಂಧಪಟ್ಟ ಜಾಗಗಳಲ್ಲಿ ತಪಾಸಣೆ ನಡೆಸಿದೆ.

English summary
The Central Bureau of Investigation (CBI) on Thursday morning carried out raids at the premises of its own officers in Ghaziabad here, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X