ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ಕಾಯ್ದೆಯ ಪ್ರಶ್ನೆಗೆ 'ಉತ್ತರ' ಸಿಗದೇ ಹೊತ್ತಿ ಉರಿದ 'ಪ್ರದೇಶ'!

|
Google Oneindia Kannada News

ಲಖನೌ, ಡಿಸೆಂಬರ್.20: ಸೌಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಉತ್ತರ ಪ್ರದೇಶದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಶಾಂತಿಯುತವಾಗಿ ಆರಂಭಗೊಂಡ ಹೋರಾಟ ಮಧ್ಯಾಹ್ನದ ನಂತರ ಹಿಂಸಾತ್ಮಕ ರೂಪ ಪಡೆದುಕೊಂಡಿದೆ.

ರಾಜ್ಯದ ಹಲವೆಡೆ ಪೊಲೀಸರ ಮೇಲೆಯೇ ಕಲ್ಲುತೂರಾಟ ನಡೆಸಲಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಕಲ್ಲುತೂರಾಟ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ.

ಫಿರೋಜ್ ಬಾದ್ ಹಿಂಸಾಚಾರದಲ್ಲಿ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ಹೋಗುವಂತೆ ಮಾಡಿದೆ. ಪೊಲೀಸರ ಕ್ರಮದಿಂದ ಕೆರಳಿದ ಪ್ರತಿಭಟನಾಕಾರರು 15ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವೆಡೆ ನಡೆದ ಕಲ್ಲುತೂರಾಟದಲ್ಲಿ ವಾಹನ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ.

ಬಿಹಾರದಲ್ಲಿ ನಡೆಯೋದಿಲ್ಲ ಸಿಎಎ ಮತ್ತು ಎನ್ಆರ್ ಸಿ ಆಟ -ನಿತೀಶ್ ಕುಮಾರ್ ಬಿಹಾರದಲ್ಲಿ ನಡೆಯೋದಿಲ್ಲ ಸಿಎಎ ಮತ್ತು ಎನ್ಆರ್ ಸಿ ಆಟ -ನಿತೀಶ್ ಕುಮಾರ್

ಲಖನೌ ಸೇರಿದಂತೆ ಬುಲಂದ್ ಶಾಹಿರ್, ಮೀರತ್, ಮುಜಾಫರ್ ನಗರ್, ಭದೋಹಿ, ಫಿರೋಜಾಬಾದ್, ಖಾನಪುರ್, ಬಹ್ರೈಚ್ ಮತ್ತು ಜುನ್ಪುರ್ ನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಸೆಕ್ಷನ್ 144 ನಿಷೇಧಾಜ್ಞೆ ನಡುವೆಯೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಪೊಲೀಸರ ಮೇಲೆಯೇ ಕಲ್ಲು ತೂರಿದ ಉದ್ರಿಕ್ತರು

ಉತ್ತರ ಪ್ರದೇಶದ ಹಲವೆಡೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಪ್ರತಿಭಟನಾಕಾರರು, ಮೀರತ್ ನಲ್ಲಿ ಪೊಲೀಸರ ಮೇಲೆಯೇ ಕಲ್ಲುತೂರಾಟ ನಡೆಸಿದ್ದಾರೆ.

Array

ಗೋರಖ್ ಪುರದಲ್ಲಿ ಗಂಡಾಗುಂಡಿ ಪ್ರತಿಭಟನೆ

ಇನ್ನು, ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ವಿಭಿನ್ನವಾಗಿ ಇರಲಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಪೊಲೀಸರ ಮೇಲೆ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸಿತು.

ಗುಜರಾತ್ ನಲ್ಲಿ ಪೊಲೀಸರ ಜೀಪ್ ಶೇಕ್, 3 ಸಾವಿರ ಮಂದಿ ವಿರುದ್ಧ ಎಫ್ಐಆರ್ಗುಜರಾತ್ ನಲ್ಲಿ ಪೊಲೀಸರ ಜೀಪ್ ಶೇಕ್, 3 ಸಾವಿರ ಮಂದಿ ವಿರುದ್ಧ ಎಫ್ಐಆರ್

Array

ಶಾಂತಿ ಕದಡಲು ಯತ್ನಿಸಿದ್ದದವರಿಗೆ ಲಾಠಿ ರುಚಿ

ಉತ್ತರ ಪ್ರದೇಶದಲ್ಲಿ ಒಂದು ಕಡೆ ಪೊಲೀಸರ ಮೇಲೆಯೇ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸುತ್ತಿದ್ದರೆ, ಇನ್ನೊಂದು ಕಡೆ ಶಾಂತಿ ಕದಡಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಬಹ್ರೈಚ್ ಬಳಿ ಉದ್ರಿಕ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ರಾಜ್ಯ ಗೃಹ ಸಚಿವರ ಸಂದೇಶಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ರಾಜ್ಯ ಗೃಹ ಸಚಿವರ ಸಂದೇಶ

ಬುಲಂದ್ ಶಾಹರ್ ನಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಇನ್ನು, ಬುಲಂದ್ ಶಾಹರ್ ಸಹ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಯಿಂದ ಹೊತ್ತಿ ಉರಿದಿದೆ. ಕೇಂದ್ರ ಸರ್ಕಾರ ಹಾಗೂ ಪೊಲೀಸರ ಕ್ರಮದಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು 15ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

ಉತ್ತರ ಪ್ರದೇಶದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ವದಂತಿಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಹಲವೆಡೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

English summary
Citizenship Amendment Act: Violence Fired Up 8 District Of Uttara Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X