ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಂದೆ ನಿಧನ: ಯಡಿಯೂರಪ್ಪ ಸಂತಾಪ
ನವ ದೆಹಲಿ, ಏಪ್ರಿಲ್ 20: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪೂರ್ವಾಶ್ರಮದ ತಂದೆ ಆನಂದ್ ಸಿಂಗ್ ಬಿಶ್ತ್ (89) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 10:45ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅವರು ವಿಧಿವಶರಾಗಿದ್ದಾರೆ.
ಆನಂದ್ ಸಿಂಗ್ ಬಿಶ್ತ್ ಕಿಡ್ನಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮಾರ್ಚ್ 15 ರಂದು ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಬಗ್ಗೆ ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟ್ವೀಟ್ ಮಾಡಿ ''ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ಬೆಳಗ್ಗೆ ನಿಧನರಾಗಿದ್ದಾರೆ'' ಎಂದು ತಿಳಿಸಿದ್ದಾರೆ.

ನಿನ್ನೆ (ಭಾನುವಾರ) ಆನಂದ್ ಸಿಂಗ್ ಬಿಶ್ತ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಅವರು ಡಯಾಲಿಸಿಸ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಂದು ಬೆಳಗ್ಗೆ ಕೊನೆಯುಸಿರೆಳೆದರು.
I offer my deepest condolences to Uttar Pradesh Chief Minister Shri @myogiadityanath ji on the passing away of his father Shri Anand Singh Bisht ji. My prayers are with Shri Adithyanath ji and family members in their moment of grief.#OmShanti. pic.twitter.com/j4OtDjMZXf
— B.S. Yediyurappa (@BSYBJP) April 20, 2020
ಆನಂದ್ ಸಿಂಗ್ ಬಿಶ್ತ್ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ಖಾತೆಯಲ್ಲಿ ''ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ತಂದೆಯವರ ನಿಧನಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಶ್ರೀ ಆದಿತ್ಯನಾಥ್ ಜಿ ಮತ್ತು ಕುಟುಂಬ ಸದಸ್ಯರೊಂದಿಗೆ ಅವರ ದುಃಖದ ಕ್ಷಣದಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ.'' ಎಂದು ಬರೆದುಕೊಂಡಿದ್ದಾರೆ.












Click it and Unblock the Notifications