ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಯೋಗಿ, ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿ ಬಂಧನ

|
Google Oneindia Kannada News

ನೋಯ್ಡಾ ಮಾರ್ಚ್ 16: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಸಿಎಂ ಮಾಯಾವತಿ ಅವರ ಆಕ್ಷೇಪಾರ್ಹ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದಾರೆ.

ಮಾರ್ಚ್ 13 ರಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ಮಾರ್ಫ್ ಮಾಡಿದ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಆರೋಪ ಅವರ ಮೇಲಿದೆ. ಈ ಪೋಸ್ಟ್‌ಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಪ್ರತಿಕ್ರಿಯೆಗಳು ಬಂದಿವೆ. ಇದರಿಂದ ಸ್ಥಳೀಯ ಜೇವರ್ ಪೊಲೀಸರು ಸ್ವತಃ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಯುಪಿ ಗೆಲುವಿನ ನಂತರ ಮೊದಲ ಬಾರಿ ಯೋಗಿ-ಮೋದಿ ಭೇಟಿ ಯುಪಿ ಗೆಲುವಿನ ನಂತರ ಮೊದಲ ಬಾರಿ ಯೋಗಿ-ಮೋದಿ ಭೇಟಿ

ಆರೋಪಿಯನ್ನು ಜೇವರ್ ಪೊಲೀಸ್ ಠಾಣಾ ವ್ಯಾಪ್ತಿಯ ದಯನಾಥಪುರ ಗ್ರಾಮದ ನಿವಾಸಿ ಅಮೀರ್ ಖಾನ್ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳವಾರ ಬೆಳಗ್ಗೆ ಸಬೌಟಾ ಅಂಡರ್‌ಪಾಸ್ ಬಳಿ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಜೇವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಉಮೇಶ್ ಬಹದ್ದೂರ್ ಅವರು ಖಾನ್ ಅವರು ದಿನಗೂಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಈತನ ಬಂಧನದ ಬಳಿಕ ಕಾರ್ಯವಿಧಾನದ ಪ್ರಕಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

CM Yogi, Mayawati Offensive Post: Person Arrested

ವಿಚಾರಣೆಯಲ್ಲಿ ಮಾರ್ಫ್ ಮಾಡಿದ ಚಿತ್ರವನ್ನು ಏಕೆ ಹಾಕಿದ್ದೇನೆ ಎಂದು ಅವರು ಪೊಲೀಸರೊಂದಿಗೆ ಹಂಚಿಕೊಂಡಿಲ್ಲ. ಟ್ವಿಟರ್ ಬಳಕೆದಾರರೊಬ್ಬರು ಈ ಸಮಸ್ಯೆಯನ್ನು ಹೈಲೈಟ್ ಮಾಡಿದ್ದರು. ಬಳಿಕ ಈ ವಿಷಯವನ್ನು ತನಿಖೆ ನಡೆಸಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ. ಟ್ವಿಟ್ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 152B (ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಪೀಡಿತ ಆರೋಪಗಳು ಮತ್ತು ಸಮರ್ಥನೆಗಳು), 505(2) (ಸಾರ್ವಜನಿಕ ಕಿಡಿಗೇಡಿತನ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 10ರಂದು ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಯುಪಿಯ 403 ವಿಧಾನಸಭೆ ಕ್ಷೇತ್ರಗಳಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 202 ಆಗಿತ್ತು. ಇದರಲ್ಲಿ ಬಿಜೆಪಿ 255 ಸ್ಥಾನಗಳನ್ನು ಪಡೆದು ಯುಪಿಯಲ್ಲಿ ಮತ್ತೆ ಕಮಲವನ್ನು ಅರಳಿಸಿದೆ. ಜೊತೆಗೆ ಸಮಾಜವಾದಿ ಪಕ್ಷ ಒಟ್ಟು 111 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 2 ಸ್ಥಾನಗಳನ್ನು ಪಡೆದು ಹೀನಾಯ ಸೋಲು ಕಂಡಿದೆ. ಇನ್ನೂ ಇತರೆ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳನ್ನು ಮಾತ್ರ ಪಡೆದುಕೊಂಡಿವೆ. ಈ ಬಾರಿ ಎಸ್‌ಪಿಗೆ ಕಾಂಗ್ರೆಸ್ ಹಾಗೂ ಬಿಎಸ್‌ಪಿ ಮತಗಳು ಸಿಕ್ಕಿವೆ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ. ಇನ್ನೂ ಮೊದಲ ಬಾರಿಗೆ ಸ್ಪರ್ಧಿಸಿದೆ ಗೋರಖ್‌ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯೋಗಿ ಆದಿತ್ಯನಾಥ್ ಹಾಗೂ ಕರ್ಹಾಲ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಬಹುಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ.

English summary
The Gautam Buddh Nagar police in Uttar Pradesh have arrested a 24-year-old man for allegedly posting an objectionable picture of Chief Minister Yogi Adityanath and former CM Mayawati on social media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X