ಉತ್ತರಪ್ರದೇಶ ಚುನಾವಣೆ: ಕಾಂಗ್ರೆಸ್ ಮ್ಯಾರಥಾನ್ ವೇಳೆ ನೂಕುನುಗ್ಗಲು
ಲಕ್ನೋ ಜನವರಿ 4: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಇಂದು ಬೆಳಗ್ಗೆ ಪಕ್ಷದ ಚುನಾವಣಾ ಪ್ರಚಾರದ ಭಾಗವಾಗಿ ಆಯೋಜಿಸಿದ್ದ "ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ'' (ಮಹಿಳೆಯರು ಹೋರಾಡಬಹುದು)" ಮ್ಯಾರಥಾನ್‌ನಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ದೃಶ್ಯದಲ್ಲಿ ಮಹಿಳೆಯರು ಮಾಸ್ಕ್ ಹಾಕದಿರುವುದು ಕಂಡುಬಂದಿದೆ. ಯುಪಿಯ ಬರೇಲಿಯಲ್ಲಿ ನಡೆದ ಮ್ಯಾರಥಾನ್‌ನಲ್ಲಿ ನೂರಾರು ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರು ಮುಖವಾಡಗಳಿಲ್ಲದೆ ಭಾಗವಹಿಸಿರುವುದು ಕಂಡುಬಂದಿದೆ. ಹೆಚ್ಚುತ್ತಿರುವ COVID-19 ಪ್ರಕರಣಗಳ ಮಧ್ಯೆ ಮ್ಯಾರಥಾನ್‌ನಲ್ಲಿ ಭಾಗವಹಿಸಿರುವವರ ಬೃಹತ್ ಗುಂಪು ಮುಖವಾಡಗಳಿಲ್ಲದೆ ಓಡಾಡಿರುವುದು ಕಂಡುಬಂದಿದೆ.
ಮ್ಯಾರಥಾನ್ ಪ್ರಾರಂಭವಾದಾಗ ಮುಂಭಾಗದಲ್ಲಿದ್ದ ಕೆಲವು ಮಹಿಳೆಯರು ಮುಗ್ಗರಿಸಿ ನೆಲಕ್ಕೆ ಬಿದ್ದಿದ್ದಾರೆ. ಹಿಂದಿನಿಂದ ಹೆಚ್ಚಿನ ಜನಸಂದಣಿ ಮುಂಭಾಗದಲ್ಲಿದ್ದವರನ್ನು ಲೆಕ್ಕಿಸಿದ ಮುಂದೆ ಓಡಿ ಹೋಗಿದ್ದು ಕಂಡುಬಂದಿದೆ. ಇದರಿಂದ ನೂಕುನುಗ್ಗಲು ಆಗಿ ಮಹಿಳೆಯರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಪರಿಸ್ಥಿತಿಯು ಬಹುತೇಕ ಮಹಿಳೆಯರ ಕಾಲ್ತುಳಿತಕ್ಕೆ ಕಾರಣವಾಯಿತು. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಕಾಂಗ್ರೆಸ್ ನಾಯಕಿ ಮತ್ತು ಬರೇಲಿ ಮಾಜಿ ಮೇಯರ್ ಸುಪ್ರಿಯಾ ಅರೋನ್, ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. "ಇದು ತುಂಬಾ ಅಮಾನವೀಯ ವಿಷಯ. ಇವರಲ್ಲಿ ಕೆಲವರು ಶಾಲಾಮಕ್ಕಳು. ಆದರೆ ಇವರಿಂದ ಯಾವುದೇ ಕಾರಣಕ್ಕೂ ಯಾರಿಗಾದರೂ ಮನನೊಂದಿದ್ದರೆ, ಕಾಂಗ್ರೆಸ್ ಪರವಾಗಿ ನಾನು ಕ್ಷಮೆಯಾಚಿಸಲು ಬಯಸುತ್ತೇನೆ" ಎಂದು ಎಂಎಸ್ ಆರಾನ್ ಹೇಳಿದ್ದಾರೆ.
COVID-19 ಜೊತೆಗೆ ವೇಗವಾಗಿ ಹರಡುತ್ತಿರುವ Omicron ಮಧ್ಯೆ ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ ಚುನಾವಣೆ ಪ್ರಚಾರಗಳು ನಡೆದಿವೆ. ಅಲ್ಲಿ ರಾಜಕೀಯ ಪಕ್ಷಗಳು ರ್‍ಯಾಲಿಗಳನ್ನು ನಡೆಸುವುದನ್ನು ಮುಂದುವರೆಸಿವೆ. ಆದರೂ ಕಟ್ಟುನಿಟ್ಟಾದ COVID-19 ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಿ ಚುನಾವಣೆಗಳನ್ನು ನಡೆಸಬೇಕೆಂದು ರಾಜಕೀಯ ಪಕ್ಷಗಳು ಬಯಸುತ್ತವೆ ಎಂದು ಚುನಾವಣಾ ಆಯೋಗ ಹೇಳಿದೆ. ಉತ್ತರಪ್ರದೇಶದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದೆ. ಕಾಂಗ್ರೆಸ್ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ದೃಷ್ಟಿಯಿಂದ ಲಿಂಗ ಸಮಾನತೆಯತ್ತ ಗಮನ ಹರಿಸುತ್ತಿದೆ. ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಮತ್ತು ಉನ್ನಾವ್‌ನಲ್ಲಿನ ಪ್ರಕರಣ ಸೇರಿದಂತೆ ಕೆಲ ಪ್ರಕರಣಗಳು ದೇಶದಾದ್ಯಂತ ಆಕ್ರೋಶವನ್ನು ಕೆರಳಿಸಿತು. ಇವುಗಳನ್ನು ರಾಜಕೀಯ ಅಸ್ತ್ರವನ್ನಾಗಿಸಲು ನೋಡಲಾಗುತ್ತಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳೆದ ತಿಂಗಳು "ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ" ಚುನಾವಣಾ ಘೋಷಣೆಯನ್ನು ಮೊದಲು ಮಾಡಿದರು. ರಾಜಕೀಯವಾಗಿ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಬಿಜೆಪಿ ಕೂಡ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು 16 ಲಕ್ಷಕ್ಕೂ ಅಧಿಕ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 1,000 ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸುವ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ.

Shocking visuals from Bareilly, #UttarPradesh!!
— Priti Gandhi - प्रीति गांधी (@MrsGandhi) January 4, 2022
A stampede like situation has occurred at the Congress marathon. Several girls fell & have been hurt. Thankfully no lives were lost. Is it right to play with human lives to fulfill your political ambitions, @priyankagandhi ji?? pic.twitter.com/lkWXYrKDbw
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications