ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಧೂಳೆಬ್ಬಿಸಲಿದ್ದಾರೆ ಪ್ರಿಯಾಂಕಾ ಗಾಂಧಿ

ವಾರಣಾಸಿ, ಮಾರ್ಚ್ 15: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ವಿಭಿನ್ನ ರೀತಿಯಲ್ಲಿ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಹೊಸ ಯೋಜನೆಯೊಂದನ್ನು ಹಾಕಿಕೊಂಡಿದೆ.

ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರವಾದ ವಾರಣಾಸಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರ ನಡೆಸಲಿದ್ದು, ಬೋಟ್ ರೈಡ್ ಮೂಲಕ ಅವರ ಪ್ರಚಾರ ಆರಂಭವಾಗಲಿದೆ.

ಪ್ರಿಯಾಂಕಾ ಗಾಂಧಿ ಅವರು ಮಾರ್ಚ್ 18-20 ರ ವರೆಗೆ ಉತ್ತರ ಪ್ರದೇಶದಲ್ಲೇ ವಾಸ್ತವ್ಯ ಹೂಡಲಿದ್ದು, ಈ ಮೂರು ದಿನ ಮೋದಿ ಕ್ಷೇತ್ರದಲ್ಲಿ ಧೂಳೆಬ್ಬಿಸಲಿದ್ದಾರೆ. ಮಾರ್ಚ್ 18 ರಂದು ಪ್ರಯಾಗ್ ರಾಜ್ ಕ್ಕೆ ಬೋಟ್ ಮೂಲಕ ಅವರು ಆಗಮಿಸಲಿದ್ದಾರೆ.

Congress Plans a boat ride for Priyanka Gandhi in Pm Modis Varanasi

ಈಗಾಗಲೇ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ ಪ್ರಿಯಾಂಕಾ ಬೋಟ್ ರೈಡ್ ಗಾಗಿ ಚುನಾವಣಾ ಆಯೋಗದ ಅನುಮತಿಯನ್ನು ಪಡೆದುಕೊಂಡಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ 47 ವರ್ಷ ವಯಸ್ಸಿನ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಗ್ರಪಂಕ್ತಿಯಲ್ಲಿದ್ದಾರೆ.

ಅವರು ಈ ಬಾರಿ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸದೆ ಕೇವಲ ಕಾಂಗ್ರೆಸ್ ನ ಪ್ರಚಾರಕರಾಗಿ ದುಡಿಯುತ್ತಾರೆ ಎಂಬ ಮಾತೂ ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+