ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ ಚುನಾವಣೆ 2022: ಕಾಂಗ್ರೆಸ್‌ಗೆ ಪ್ರಿಯಾಂಕಾ ನಾಯಕತ್ವ

|
Google Oneindia Kannada News

ಲಕ್ನೋ, ಸೆಪ್ಟೆಂಬರ್ 13: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸ್ಪರ್ಧೆ ನಡೆಸಲಿದೆ ಎಂದು ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ನಿರ್ಧರಿಸಿಲ್ಲ ಆದರೆ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಸಲ್ಮಾನ್ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದ್ದಾರೆ.

ಉಪ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಮೂಕಪ್ರೇಕ್ಷಕನಾದ ಕಾಂಗ್ರೆಸ್ಉಪ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಮೂಕಪ್ರೇಕ್ಷಕನಾದ ಕಾಂಗ್ರೆಸ್

ಚುನಾವಣೆ ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದ ಸಲ್ಮಾನ್, ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ತಜ್ಞರ ಶಿಫಾರಸಿನ ಮೇರೆಗೆ ತಯಾರಿಸಲಾಗುವುದಿಲ್ಲ. ಇದು ಸ್ಥಳೀಯ ಜನರ ಸಾಮಾನ್ಯ ಸಮಸ್ಯೆಗಳನ್ನು ಒಳಗೊಂಡಿರುತ್ತದೆ. ಈ ಪ್ರಣಾಳಿಕೆ ತಮ್ಮದೇ ಎಂದು ಅವರು ಹೇಳಬಹುದು ಎಂದರು.
ಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧೆಯ ಕಾರಣದಿಂದ ರಂಗೇರಿರುವ ಭವಾನಿಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಕಾಂಗ್ರೆಸ್ ಮತ್ತೆ ಮೂಕಪ್ರೇಕ್ಷಕನಾಗುತ್ತಿದೆ.

ಮತ ವಿಭಜನೆಯಿಂದ ಮತ್ತೆ ಬಿಜೆಪಿ ಮೇಲುಗೈ ಆಗುವುದನ್ನು ತಪ್ಪಿಸುವ ಸಲುವಾಗಿ, ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ.

ರಾಷ್ಟ್ರೀಯ ರಾಜಕಾರಣದಲ್ಲಿ ಇದು ಬಿಜೆಪಿ ವಿರೋಧಿ ನಡೆಯಾಗಿ ಕಾಣಿಸಿದರೂ ಪಶ್ಚಿಮ ಬಂಗಾಳದಲ್ಲಿ ಇದು ಕಾಂಗ್ರೆಸ್‌ನ ಅಸ್ತಿತ್ವಕ್ಕೆ ಮತ್ತೊಂದು ಪೆಟ್ಟು ನೀಡುವ ಕ್ರಮವಾಗಿದೆ. ಈಗಾಗಲೇ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಆಗಿದೆ.

ಆದರೆ ಈ ಉಪಚುನಾವಣೆಯಿಂದ ಹಿಂದೆ ಸರಿಯುವ ನಡೆಯು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕೆಡಿಸುವ ಕ್ರಮವಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ.

ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಎಡರಂಗದ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

 ಕಾಂಗ್ರೆಸ್ ಮೈತ್ರಿ ಇಲ್ಲ

ಕಾಂಗ್ರೆಸ್ ಮೈತ್ರಿ ಇಲ್ಲ

ನಾವು ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ನಮ್ಮ ಕಾರ್ಯಕರ್ತರು ಪ್ರತಿಯೊಂದು ಕ್ಷೇತ್ರಕ್ಕೂ ತೆರಳಿ ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರ ಇತ್ಯರ್ಥಗೊಂಡ ಬಳಿಕ 2022ರಲ್ಲಿಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುವುದು ಎಲ್ಲಾ ರಾಜಕೀಯ ಪಕ್ಷಗಳಿಗೆ ಮಹತ್ವದ್ದಾಗಿದೆ.

 ಅಯೋಧ್ಯೆಯಿಂದ ಚುನಾವಣಾ ಪ್ರಚಾರ

ಅಯೋಧ್ಯೆಯಿಂದ ಚುನಾವಣಾ ಪ್ರಚಾರ

ಅಯೋಧ್ಯೆಯನ್ನೇ ಚುನಾವಣಾ ಪ್ರಚಾರದ ಆರಂಭದ ಸ್ಥಳವನ್ನಾಗಿ ಮಾಡಿಕೊಂಡಿವೆ. ಬಿಜೆಪಿ, ಸಮಾಜವಾದಿ ಪಕ್ಷ, ಬಿಎಸ್‌ಪಿ ಈಗಾಗಲೇ ಮುಂದಿನ ಚುನಾವಣೆಗಾಗಿ ಪ್ರಚಾರವನ್ನು ಆರಂಭಿಸಿವೆ.

ಇಷ್ಟು ಮಾತ್ರವಲ್ಲದೇ, ರಾಜ್ಯ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಲಿರುವ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷ, ಕುಂದಾ ಕ್ಷೇತ್ರದ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ನೇತೃತ್ವದ ಜನಸತ್ತಾ ಲೋಕತಾಂತ್ರಿಕ ದಳ ಕೂಡ ಅಲ್ಲಿಂದಲೇ ಪ್ರಚಾರ ನಡೆಸಲು ಮುದಾಗಿದೆ.

ಪ್ರಧಾನಿ ನರೇಂದ್ರ ಮೋದಿ 2020 ಆ.5ರಂದು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪದೇ ಪದೆ ಅಯೋಧ್ಯೆಗೆ ಭೇಟಿ ನೀಡಿ, ದೇಗುಲ ಕಾಮಗಾರಿ ಮತ್ತು ಇತರೆಅಂಶಗಳ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

 ಬಿಎಸ್‌ಪಿ ಮೈತ್ರಿಯೂ ಇಲ್ಲ

ಬಿಎಸ್‌ಪಿ ಮೈತ್ರಿಯೂ ಇಲ್ಲ

ಇದರ ಜತೆಗೆ ಬಿಜೆಪಿ ಸೆ.5ರಂದು ಪ್ರಬುದ್ಧ ಸಮ್ಮೇಳನ ಎಂಬ ಶೀರ್ಷಿಕೆಯೊಂದಿಗೆ ಬುದ್ಧಿಜೀವಿಗಳ ಸಮಾವೇಶ ಏರ್ಪಡಿಸಿತ್ತು.ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಯಾವುದೇ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ, ವಿಪಕ್ಷಗಳು ರಚಿಸಲು ಉದ್ದೇಶಿಸಿರುವ ಒಕ್ಕೂಟಕ್ಕೆ ಷರತ್ತುಗಳನ್ನು ಮುಂದಿಟ್ಟಿಕೊಂಡು ಬೆಂಬಲ ಸೂಚಿಸಲಿದೆ ಎಂದು ಬಿಎಸ್‌ಪಿಯ ರಾಜ್ಯಸಭಾ ಸದಸ್ಯ ಸತೀಶ್‌ಚಂದ್ರ ಮಿಶ್ರಾ ಹೇಳಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಕೆಲವೊಂದು ಮಸೂದೆಗಳ ಬಗ್ಗೆ ಸರ್ಕಾರದ ಪರವಾಗಿ ಬೆಂಬಲ ನೀಡಿದ್ದರ ಬಗ್ಗೆ ಸಮಜಾಯಿಶಿ ನೀಡಿದ ಸತೀಶ್‌ಚಂದ್ರ ದೇಶದ ಮತ್ತು ಜನರ ಹಿತಾಸಕ್ತಿಗಳನ್ನು ಆಮೂಲಾಗ್ರವಾಗಿ ಅಧ್ಯಯನ ನಡೆಸಿದ ಬಳಿಕ ಸಂಸತ್‌ನಲ್ಲಿ ಮಸೂದೆಗಳಿಗೆ ಬೆಂಬಲ ನೀಡಿದ್ದೇವೆ ಎಂದು ಹೇಳಿದ್ದರು.

 ಉತ್ತರ ಪ್ರದೇಶದಲ್ಲಿ ಮೆರವಣಿಗೆ

ಉತ್ತರ ಪ್ರದೇಶದಲ್ಲಿ ಮೆರವಣಿಗೆ

2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ತೃತೀಯ ರಂಗ ರಚನೆ ನಿಟ್ಟಿನಲ್ಲಿ ಜಿಂಧ್‌ನಲ್ಲಿ ಇಂಡಿಯನ್ ನ್ಯಾಷನಲ್ ಲೋಕದಳ ನಾಯಕ ಓಂ ಪ್ರಕಾಶ್ ಚೌಟಾಲಾ ಸೆ.25ಕ್ಕೆ ಬೃಹತ್ ಮೆರವಣಿಗೆ ನಡೆಸಲಿದ್ದಾರೆ.

ಆ ಕಾರ್ಯಕ್ರಮದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗವಹಿಸುತ್ತಿಲ್ಲ, ಬಿಹಾರದಲ್ಲಿ ಪ್ರವಾಹ ಮತ್ತು ಕೊರೊನಾ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಸಂಚಾಲಕರಾಗಿ ಸತತ ಮೂರನೇ ಬಾರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಯ್ಕೆಯಾಗಿದ್ದಾರೆ. ದೆಗಲಿಯಲ್ಲಿ ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪಕ್ಷದ ನಾಯಕ ಪಂಕಜ್ ಗುಪ್ತಾ ಅವರನ್ನು ಕಾರ್ಯದರ್ಶಿ ಮತ್ತು ಎನ್‌ಡಿ ಗುಪ್ತಾ ಅವರನ್ನು ಖಜಾಂಚಿಯನ್ನಾಗಿ ಮಾಡಲಾಗಿದೆ.

English summary
The Congress would not form alliance with any party and contest the upcoming Uttar Pradesh Assembly election under the leadership of Priyanka Gandhi Vadra, said former Union minister Salman Khurshid on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X