6 ತಿಂಗಳಿನಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ

ಲಕ್ನೋ, ಫೆಬ್ರವರಿ 23 : ರಾಮಮಂದಿರ ನಿರ್ಮಾಣ ಕಾರ್ಯ ಆರು ತಿಂಗಳಿನಲ್ಲಿ ಆರಂಭವಾಗಲಿದೆ. 3.5 ವರ್ಷದಲ್ಲಿ ಮಂದಿರ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಯನ್ನು 6 ತಿಂಗಳಿನಲ್ಲಿ ಆರಂಭಿಸಲಾಗುತ್ತದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭೂಮಿ ಪೂಜೆ ಎಂದು ಮಾಡಬೇಕು ಎಂಬುದನ್ನು ಮುಂದಿನ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ.

'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌' ಮುಂದಿನ ಸಭೆ ಮಾರ್ಚ್ 3 ಮತ್ತು 4ರಂದು ನಡೆಯಲಿದೆ. ಟ್ರಸ್ಟ್ ಅಧ್ಯಕ್ಷರಾಗಿ ಗೋಪಾಲ ದಾಸ್‌ ನೇಮಕವಾಗಿದ್ದಾರೆ. ಈ ಸಭೆಯಲ್ಲಿಯೇ ಭೂಮಿ ಪೂಜೆ ದಿನಾಂಕ ನಿಗದಿಯಾಗಿದೆ.

Construction Ram Temple In Ayodhya In Six Months

"ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದರೆ ಮೂರರಿಂದ ಮೂರುವರೆ ವರ್ಷಗಳಲ್ಲಿ ಕಾಮಗಾರಿ ಮುಗಿಸಲಾಗುತ್ತದೆ. ಮಂದಿರ ನಿರ್ಮಾಣಕ್ಕೆ ಭಕ್ತರು ಈಗಲೂ ದೇಣಿಗೆ ನೀಡಬಹುದಾಗಿದೆ" ಎಂದು ಗೋಪಾಲ ದಾಸ್‌ ಹೇಳಿದ್ದಾರೆ.

ಗುಜರಾತ್‌ನ ಅಕ್ಷರಧಾಮ ದೇವಾಲಯವನ್ನು ಮೂರು ವರ್ಷಗಳಲ್ಲಿ ಕಟ್ಟಲಾಗಿದೆ. ಏಕತಾ ಪ್ರತಿಮೆಯನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ. ಮೂರುವರೆ ವರ್ಷಗಳಲ್ಲಿ ರಾಮಮಂದಿರ ನಿರ್ಮಾಣವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಮುಂದಿನ 15 ದಿನದಲ್ಲಿ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಮುಂದಿನ ಸಭೆಯನ್ನು ನಡೆಸಲಿದೆ. ಸಭೆಯಲ್ಲಿ ಮಂದಿನ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ.

ಫೆಬ್ರವರಿ 19ರಂದು ನಡೆದ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷರಾಗಿ ಗೋಪಾಲ್ ದಾಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಚಂಪತ್ ರೈರನ್ನು ಆಯ್ಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+