ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೋಯ್ಡಾದಲ್ಲಿ ಕೊರೊನಾ ಉಲ್ಬಣ: ಸೆಕ್ಷನ್ 144 ಜಾರಿ, ಮಾಸ್ಕ್‌ ಕಡ್ಡಾಯ

|
Google Oneindia Kannada News

ಗೌತಮ್ ಬುದ್ಧ ನಗರ ಮೇ 02: ದೇಶದಲ್ಲಿ ದಿನದಿಂದ ದಿನಕ್ಕೆ ಹೊಸ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ನೋಯ್ಡಾದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯ ಆಡಳಿತವು ಮೇ 1 ರಿಂದ ಮೇ 31 ರವರೆಗೆ ಇಡೀ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದೆ. ಆಡಳಿತದ ಈ ಆದೇಶದ ನಂತರ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಜನಸಂದಣಿ ಇರುವುದಿಲ್ಲ. ಇದಲ್ಲದೆ, ಗೌತಮ್ ಬುದ್ಧ ನಗರ ಜಿಲ್ಲೆಯ ಕಮಿಷನರ್ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿದ್ದಾರೆ. ಸಿಎಂ ಯೋಗಿ ಸೂಚನೆ ಮೇರೆಗೆ ಗೌತಮ್ ಬುದ್ಧನಗರ ಆಡಳಿತ ನಿರ್ಬಂಧ ಹೇರಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಡೆಸುವಂತಿಲ್ಲ

ಗೌತಮ್ ಬುದ್ಧನಗರದ ಪೊಲೀಸ್ ಆಯುಕ್ತರ ಕಚೇರಿಯ ಪ್ರಕಟಣೆ ಪ್ರಕಾರ, ಜಿಲ್ಲೆಯಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಉನ್ನತ ಅಧಿಕಾರಿಗಳ ಅನುಮತಿಯಿಲ್ಲದೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೆ ಪ್ರತಿಭಟನೆ ಅಥವಾ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನೀಡಲಾಗುವುದಿಲ್ಲ. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಪೂಜೆ ಮತ್ತು ಪ್ರಾರ್ಥನೆಗಳನ್ನು ಅನುಮತಿಸಲಾಗುವುದಿಲ್ಲ.

Corona Increase in Noida: Section 144 enforcement, Mask mandatory

ಶಾಲೆಗಳಲ್ಲಿ ಕೋವಿಡ್ ಪ್ರೋಟೋಕಾಲ್

ಆದೇಶದ ಪ್ರಕಾರ, ಶಾಲೆಗಳಲ್ಲಿ ನಡೆಯುತ್ತಿರುವ ಪರೀಕ್ಷೆಗಳ ಸಮಯದಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಲು ವಿಶೇಷ ಗಮನ ನೀಡಬೇಕು. ಜೊತೆಗೆ ಪರೀಕ್ಷೆಯಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸಬೇಕು. ಪರೀಕ್ಷಾ ಕೇಂದ್ರಗಳ ಆವರಣ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಉನ್ನತ ಅಧಿಕಾರಿಗಳ ಅನುಮತಿಯಿಲ್ಲದೆ ಯಾರಿಗೂ ಧ್ವನಿವರ್ಧಕ ಅಥವಾ ಅಂತಹ ಉಪಕರಣಗಳನ್ನು ಮಾರಾಟ ಮಾಡಲು ಅಥವಾ ಬಾಡಿಗೆಗೆ ನೀಡಲು ಅಂಗಡಿಯವರಿಗೆ ಅನುಮತಿ ನೀಡಲಾಗುವುದಿಲ್ಲ.

Corona Increase in Noida: Section 144 enforcement, Mask mandatory

ಯುಪಿಯ ಕೊರೊನಾ ಗ್ರಾಫ್

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 19,092 ಆಗಿದೆ. ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 269 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಗೌತಮ್ ಬುದ್ ನಗರದಲ್ಲಿ ಗರಿಷ್ಠ 117 ಹೊಸ ಪ್ರಕರಣಗಳು ಪತ್ತೆಯಾಗಿವೆ. ಗಾಜಿಯಾಬಾದ್‌ನಲ್ಲಿ 55, ಲಕ್ನೋದಲ್ಲಿ 26 ಮತ್ತು ಆಗ್ರಾದಲ್ಲಿ 15 ಹೊಸ ಪ್ರಕರಣಗಳಿವೆ. ರಾಜ್ಯದಲ್ಲಿ ಒಟ್ಟು 1587 ಸಕ್ರಿಯ ಪ್ರಕರಣಗಳಿದ್ದು 99 ರಷ್ಟು ಜನರು ಹೋಮ್ ಐಸೋಲೇಶನ್‌ನಲ್ಲಿದ್ದಾರೆ.

English summary
Section 144 has been issued in the entire Uttar Pradesh Gautam Buddha Nagar district from May 1 to May 31 due to the increasing number of corona cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X