ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕೊರೊನಾ ಕೇಸ್ ಎಷ್ಟು?

|
Google Oneindia Kannada News

ನವದೆಹಲಿ, ಮಾರ್ಚ್ 14: ಉತ್ತರಪ್ರದೇಶದಲ್ಲೂ ಕೊರೊನಾ (ಕೋವಿಡ್ 19) ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಶನಿವಾರಕ್ಕೆ ಒಟ್ಟು 13 ಕೊರೊನಾ ಸೋಂಕಿತ ಪ್ರಕರಣಗಳನ್ನು ದೃಡಪಡಿಸಲಾಗಿದೆ. ಈ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಗಂಭೀರವಾಗಿದ್ದು, ಮಾರ್ಚ್ 22 ರವರಗೆ ಇಡೀ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಆದೇಶ ಹೊರಡಿಸಿದ್ದಾರೆ. ಉತ್ತರಪ್ರದೇಶದಲ್ಲಿ ಕೊರೊನಾ ವೈರಸ್‌ ಸೋಂಕಿಗೆ 13 ಜನರು ತುತ್ತಾಗಿದ್ದಾರೆ. ಇದರಿಂದ ಉತ್ತರ ಪ್ರದೇಶ ಸರ್ಕಾರ ಗಂಭೀರವಾಗಿದ್ದು, ಪ್ರಮುಖ ನಗರಗಳಲ್ಲಿ ಮಾಲ್ ಹಾಗೂ ಚಿತ್ರಮಂದಿರಗಳನ್ನು ಸಹ ಮುಚ್ಚಲು ಆದೇಶ ಮಾಡಲಾಗಿದೆ.

ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು, ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಭಯಗೊಳ್ಳುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಮಾರ್ಚ್ 22 ರ ನಂತರ ಶಾಲಾ ಕಾಲೇಜುಗಳನ್ನು ಪುನಾರಾಂಭಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Coronavirus Cases Jumps In Uttar Pradesh

ಇದುವರೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಶನಿವಾರಕ್ಕೆ 83 ಏರಿಕೆಯಾಗಿದೆ.

English summary
Coronavirus Cases Jumps In Uttar Pradesh. Government orders to shutdown School and colleges in up.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X