• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಪ್ರದೇಶದಲ್ಲಿ ತಿಂಗಳಿಗೆ 2 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ

|

ಲಕ್ನೋ, ಮೇ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆಗೆ ಕೊರತೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಇಷ್ಟರಲ್ಲೇ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸುವುದಕ್ಕೆ ಪ್ರಾರಂಭಿಸಲಾಗುತ್ತಿದೆ.

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ಬುಲಂದ್‌ಶಹರ್‌ನಲ್ಲಿ ಇರುವ ಭಾರತ್ ಇಮ್ಯುನಾಲಾಜಿಕಲ್ ಆಂಡ್ ಬಯೋಲಾಜಿಕಲ್ ಕಾರ್ಪೋರೇಷನ್ ಲಿಮಿಟೆಡ್(BIBCOL)ನಲ್ಲಿ ಲಸಿಕೆ ಉತ್ಪಾದನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ.

ಮಹಾನಗರಗಳಿಂದ ಹಳ್ಳಿಗಳಿಗೆ ಶಿಫ್ಟ್ ಆಗುತ್ತಿರುವ ಕೊರೊನಾವೈರಸ್!ಮಹಾನಗರಗಳಿಂದ ಹಳ್ಳಿಗಳಿಗೆ ಶಿಫ್ಟ್ ಆಗುತ್ತಿರುವ ಕೊರೊನಾವೈರಸ್!

ಸಾರ್ವಜನಿಕ ವಲಯದ ಉದ್ಯಮವು ಪ್ರತಿ ತಿಂಗಳು 2 ಕೋಟಿ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸಲಿದೆ. ಕೊರೊನಾವೈರಸ್ ಲಸಿಕೆ ಉತ್ಪಾದನೆಗಾಗಿ ಕೇಂದ್ರ ಸರ್ಕಾರವು BIBCOL ಸಂಸ್ಥೆಗೆ 30 ಕೋಟಿ ರೂಪಾಯಿ ಹಣವನ್ನು ಒದಗಿಸುತ್ತಿದೆ. ಬುಲಂದ್‌ಶಹರ್‌ನ BIBCOL ಅನ್ನು1989ರಲ್ಲಿ ಸ್ಥಾಪಿಸಲಾಗಿದ್ದು, ಪೋಲಿಯೋ ಲಸಿಕೆ ಸೇರಿದಂತೆ ಇತರೆ ರೋಗನಿರೋಧಕಗಳನ್ನು ಉತ್ಪಾದಿಸಲಾಗುತ್ತದೆ.


ಕೊರೊನಾವೈರಸ್ ಲಸಿಕೆಯ ಕೊರತೆ ಸೃಷ್ಟಿ:

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವ ಸೃಷ್ಟಿಯಾಗಿದೆ. ಅಗತ್ಯ ಪ್ರಮಾಣದ ಲಸಿಕೆಯನ್ನು ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 18-44 ವಯೋಮಾನದ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ಹಲವು ರಾಜ್ಯಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬುಧವಾರ ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಕೊವ್ಯಾಕ್ಸಿನ್ ಲಸಿಕೆ ಖಾಲಿ ಆಗಿರುವ ಕಾರಣ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮುಂದಿನ ನಾಲ್ಕು ದಿನಗಳವರೆಗೆ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಕೂಡಾ 18-44 ವರ್ಷದವರಿಗೆ ಲಸಿಕೆ ನೀಡುವುದರಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕರ್ನಾಟಕದಲ್ಲೂ ಸಹ ಮುಂದಿನ ಆದೇಶದವರೆಗೂ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೊವಿಡ್-19 ಲಸಿಕೆ ನೀಡುವುದಕ್ಕೆ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

English summary
Covaxin Production Starts in UP’s Bulandshahr to Reach High Demand of Vaccine Doses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X