ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

5 ಜಿಲ್ಲೆಗಳಿಗೆ ಲಾಕ್‌ಡೌನ್: ಹೈಕೋರ್ಟ್ ಆದೇಶ ನಿರಾಕರಿಸಿದ ಸಿಎಂ ಯೋಗಿ

|
Google Oneindia Kannada News

ಅಲಹಾಬಾದ್, ಏಪ್ರಿಲ್ 20: ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.

ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.

ಭಾರತದಲ್ಲಿ ಒಂದೇ ದಿನ 31 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆಭಾರತದಲ್ಲಿ ಒಂದೇ ದಿನ 31 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್‌ಪುರದಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು.

 COVID-19: Allahabad HC Orders Week-Long Lockdown In 5 Cities, Uttar Pradesh Government Refuses

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.

ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿನ ಕ್ವಾರಂಟೈನ್ ಕೇಂದ್ರಗಳ ಸ್ಥಿತಿ ಹಾಗೂ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಐದು ನಗರಗಳಲ್ಲಿ ಲಾಕ್‌ಡೌನ್‌ಗೆ ಆದೇಶಿಸಿತ್ತು.

English summary
Amid a surge in coronavirus cases, the Allahabad High Court on Monday directed the Uttar Pradesh government to impose a week-long lockdown in Lucknow, Allahabad, Kanpur Nagar, Varanasi and Gorakhpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X