ಪಾನ್ ತಿನ್ನಲು ಐಸೋಲೇಶನ್ ವಾರ್ಡ್ನಿಂದ ತಪ್ಪಿಸಿಕೊಂಡ ರೋಗಿ
ಆಗ್ರಾ, ಜುಲೈ 14: ಪಾನ್ ಮಸಾಲ ಸೇವಿಸುವುದಕ್ಕಾಗಿ ಐಸೋಲೇಶನ್ ವಾರ್ಡ್ನಿಂದ ವೈದ್ಯರು ಹಾಗೂ ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಪಾನ್ ಮಸಾಲ ಪ್ರಿಯನಾಗಿದ್ದ ವ್ಯಕ್ತಿ ಕೊವಿಡ್ ಸೋಂಕಿನಿಂದ ಬಳಲುತ್ತಿದ್ದ. ಆತನನ್ನು ಆಗ್ರಾದ ಎಸ್ ಎನ್ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸತತ ಎರಡ್ಮೂರು ದಿನ ಪಾನ್ ಮಸಾಲ ಸೇವಿಸದೇ ಕಾರಣ ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯಿಂದ ಪರಾರಿಯಾದ ಕೊವಿಡ್ ರೋಗಿ ನೇರವಾಗಿ ಪಾನ್ ಆಂಗಡಿಗೆ ಹೋಗಿ ಪಾನ್ ತೆಗೆದುಕೊಂಡು, ಬಳಿಕ ಸ್ನೇಹಿತನ ಮನೆಗೆ ಹೋಗಿದ್ದಾನೆ. ಈ ವಿಚಾರ ತಿಳಿದ ಆಸ್ಪತ್ರೆ ಸಿಬ್ಬಂದಿ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮನೆಗೆ ಬಂದ ಸ್ನೇಹಿತನಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿಯದ ಕುಟುಂಬ ಉಪಚಾರ ಮಾಡಿತ್ತು. ಆದ್ರೀಗ, ಸ್ನೇಹಿತನ ಇಡೀ ಕುಟುಂಬ ಕ್ವಾರಂಟೈನ್ಗೆ ಒಳಗಾಗಿದೆ.
ಕೊವಿಡ್ ರೋಗಿಯನ್ನು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಬಂದ ಎನ್ ಎನ್ ಕಾಲೇಜಿನ ಸಿಬ್ಬಂದಿ, ಆತನನ್ನು ಪ್ರತ್ಯೇಕವಾಗಿರಿಸಿ, ಆ ವಾರ್ಡ್ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications