ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ಶವವಾಗಿ ಪತ್ತೆ
ಪ್ರಯಾಗ್‌ರಾಜ್, ಜುಲೈ 27: ಆಸ್ಪತ್ರೆಯಿಂದ ನಾಪತ್ತೆಯಾಗಿದ್ ಕೊರೊನಾ ಸೋಂಕಿತ ಮರುದಿನ ಪೊದೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.57 ವರ್ಷದ ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಓಡಿ ಹೋಗುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
Recommended Video
ಆಸ್ಪತ್ರೆಯಲ್ಲಿ ವ್ಯಕ್ತಿಯನ್ನು ದಾಖಲಿಸಿ ಕೇವಲ ಒಂದು ದಿನವಾಗಿತ್ತು. ಭಾನುವಾರ ಸಂಜೆ ಆಸ್ಪತ್ರೆಯಿಂದ 500 ಮೀಟರ್ ದೂರದಲ್ಲಿರುವ ಪೊದೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಆಸ್ಪತ್ರೆಯಲ್ಲಿ ಕಿರುಕುಳ ಅನುಭವಿಸಿದ್ದಕ್ಕಾಗಿ ಆಸ್ಪತ್ರೆಯಿಂದ ಓಡಿ ಹೋಗಿದ್ದರು. ಆಸ್ಪತ್ರೆಯ ನಿರ್ಲಕ್ಷ್ಯವೇ ಕೊರೊನಾ ಸೋಂಕಿತರ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದರು. ಆದರೆ ಆಸ್ಪತ್ರೆ ಆರೋಪವನ್ನು ತಳ್ಳಿ ಹಾಕಿದೆ.

ಅವರನ್ನು ಪ್ರಯಾಗ್‌ರಾಜ್‌ನ ಸ್ವರೂಪ್ ರಾಣಿ ನೆಹರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅವರಿಗೆ ಉಸಿರಾಟದ ತೊಂದರೆಯಿತ್ತು.ಆತ ಆಸ್ಪತ್ರೆಯಿಂದ ಹೋಗುವ ಸ್ವಲ್ಪ ಹೊತ್ತಿನ ಮೊದಲು ಮನೆಗೆ ಕರೆ ಮಾಡಿದ್ದ, ನನ್ನ ನಾಲಿಗೆ ಒಣಗುತ್ತಿದೆ.
ವೆಂಟಿಲೇಟರ್‌ನಿಂದಾಗಿ ತೊಂದರೆಯಾಗುತ್ತಿದೆ. ಈ ವಿಷಯವನ್ನು ಇಲ್ಲಿದ್ದವರಿಗೆ ತಿಳಿಸಲು ಸಾಕಷ್ಟು ಪ್ರಯತ್ನ ಪಟ್ಟೆ ಆದರೆ ಯಾರೂ ಕೂಡ ನನ್ನ ಮಾತು ಕೇಳಲು ಸಿದ್ಧರಿರಲಿಲ್ಲ ಎನ್ನುವ ಆಡಿಯೋ ಕ್ಲಿಪ್ ಒಂದನ್ನು ಬಿಡುಗಡೆ ಮಾಡಿದ್ದಾರೆ.
ಸಂಜೆ 4.30ರ ವೇಳೆಗೆ ಕೊವಿಡ್ ವಾರ್ಡ್ ಗೇಟ್‌ನಿಂದ ಆತ ಹೊರಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು.ಅವರಿಗೆ ಉಸಿರಾಟದ ತೊಂದರೆ ಇತ್ತು, ಜ್ವರವೂ ಕೂಡ ಬಂದಿತ್ತು, ಗುಣಮುಖರಾಗುತ್ತಿದ್ದರು, ಆದರೆ ಏಕೆ ಆಸ್ಪತ್ರೆಯಿಂದ ಓಡಿಹೋಗಿದ್ದರೂ ಕಾರಣ ತಿಳಿಯುತ್ತಿಲ್ಲ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.












Click it and Unblock the Notifications