ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: 10 ಮಂದಿ ದುರ್ಮರಣ

|
Google Oneindia Kannada News

ಲಕ್ನೋ, ಅಕ್ಟೋಬರ್ 14: ಸಿಲಿಂಡರ್ ಸ್ಫೋಟ ಸಂಭವಿಸಿದ್ದು ಎರಡಂತಸ್ತಿನ ಕಟ್ಟಡ ಕುಸಿದು 10 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಕಟ್ಟಡದ ಅವಶೇಷಗಳಡಿ 7 ಕ್ಕೂ ಹೆಚ್ಚು ಜನ ಸಿಲುಕಿದ್ದಾರೆ ಎನ್ನಲಾಗಿದೆ. ಈ ಘಟನೆ ಇಂದು ಬೆಳಗ್ಗೆ 7.30ರಲ್ಲಿ ಉತ್ತರಪ್ರದೇಶದ ಮಾವ್​ ಜಿಲ್ಲೆಯ ವಾಲೀದ್​ಪುರದಲ್ಲಿ ನಡೆದಿದೆ.

ಮಂಡ್ಯದ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ ಮಂಡ್ಯದ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ

ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸಹ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Cylinder Blast Buidling Collapse 10 died In Uttar Pradesh

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ತ್ವರಿತ ವೈದ್ಯಕೀಯ ನೆರವು ಒದಗಿಸಿ ಎಂದು ಸ್ಥಳೀಯ ಅಧಿಕಾರಿಗಳಿಗೆ, ಪೊಲೀಸರಿಗೆ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗಾಯಗೊಂಡಿರುವವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಅನಿಲ ಸೋರಿಕೆಯಿಂದಾಗಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಟ್ಟಡ ಕುಸಿದು 10 ಮಂದಿ ಮೃತಪಟ್ಟಿದ್ದಾರೆ. ತಕ್ಷಣ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಜನರನ್ನು ರಕ್ಷಿಸಲು ಮುಂದಾಗಿದ್ದಾರೆ.

ಎರಡಂತಸ್ತಿನ ಕಟ್ಟಡದಲ್ಲಿ 12ಕ್ಕೂ ಹೆಚ್ಚು ಮಂದಿ ಜನರಿದ್ದರು. ಅವರಲ್ಲಿ ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

English summary
Cylinder Blast 10 died In Uttar Pradesh, At least 10 people died and several others were injured after a two-storey building collapsed following a cylinder blast in Mau district of Uttar Pradesh. Several people are still feared trapped under the debris.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X