ನಿವೃತ್ತ ಪೊಲೀಸ್ ಅಧಿಕಾರಿ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ
ಲಕ್ನೋ, ಏ.13: ಯುವತಿ ಮೇಲೆ ನಾಲ್ಕು ಮಂದಿ ದುರುಳರು ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಲಕ್ನೋನ ಶಾಹಿದ್ ಪಥ್ ಪ್ರದೇಶದಲ್ಲಿ ನಡೆದಿದೆ.
ಅತ್ಯಾಚಾರದ ಬಳಿಕ ತಾಲಿಭಾಗ್ ರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದರು. ಆಕೆ ನಿವೃತ್ತ ಪೊಲೀಸ್ ಅಧಿಕಾರಿ ಮಗಳಾಗಿದ್ದಾಳೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಅತ್ಯಾಚಾರಿಯೊಬ್ಬನ ಹೆಸರು ಬಬ್ಲೂ, ಕಾಶಿರಾಮ್, ಗುಪ್ತಾ, ಹರೀಶ್ ಎಂಬುವವರು ಆಕೆಯನ್ನು ಕಾರಿನಲ್ಲಿ ಬಲವಂತವಾಗಿ ಎಳೆದುಕೊಂಡು ಹೋಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ.

ಸಂತ್ರಸ್ತೆಯ ತಂದೆ ಮಲಿಹಾಬಾದ್ ಮೂಲದವರಾಗಿದ್ದು, 2013ರಲ್ಲಿ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಿದ್ದರು. ಹಾಗೆಯೇ ಮಗಳಿಗೆ ಕೆಲಸ ಕೊಡಿಸುವಂತೆ ಆರೋಪಿಗಳಿಗೆ 50 ಸಾವಿರ ರೂ ನೀಡಿದ್ದರು.
ಆದರೆ ಒಂದು ವರ್ಷವಾದರೂ ಆಕೆಯ ಕೆಲಸ ಕೊಡಿಸಲು ಅವರಿಂದ ಸಾಧ್ಯವಾಗಲಿಲ್ಲ. ಹಾಗಾಗಿ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದರು. ಅದಕ್ಕೆ ಕೋಪಗೊಂಡ ಆರೋಪಿಗಳು ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.












Click it and Unblock the Notifications