ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಇಲಿ ಸತ್ತು ಬಿದ್ದ ಊಟ!

|
Google Oneindia Kannada News

ಲಕ್ನೋ, ಡಿಸೆಂಬರ್.03: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಈಗಲೇ ಪೋಷಕರು ಹಿಂದೂ-ಮುಂದೂ ನೋಡುತ್ತಾರೆ. ಉಳ್ಳವರ ಮಕ್ಕಳೆಲ್ಲ ಖಾಸಗಿ ಶಾಲೆಗಳಲ್ಲೇ ಡೊನೇಷನ್ ಕೊಟ್ಟು ಗುಣಮಟ್ಟದ ಶಿಕ್ಷಣ ಪಡೆಯುತ್ತಾರೆ.

ಸರ್ಕಾರ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವೇ ಉತ್ತಮವಾಗಿಲ್ಲ ಎಂಬ ಆರೋಪ ಪದೇ ಪದೆ ಕೇಳಿ ಬರುತ್ತಿರುತ್ತದೆ. ಇದರ ನಡುವೆ ಇತ್ತೀಚಿಗೆ ಬೆಳಕಿಗೆ ಬಂದ ಘಟನೆ ಪೋಷಕರಷ್ಟೇ ಅಲ್ಲ, ಸ್ವತಃ ಮಕ್ಕಳನ್ನೂ ಬೆಚ್ಚಿ ಬೀಳುವಂತೆ ಮಾಡಿದೆ.

ಅಯೋಧ್ಯೆಯಲ್ಲಿ ಹಸುಗಳಿಗೂ ಬ್ಲೇಜರ್ :ಯಾಕೆ ಈ ನಿರ್ಧಾರ? ಅಯೋಧ್ಯೆಯಲ್ಲಿ ಹಸುಗಳಿಗೂ ಬ್ಲೇಜರ್ :ಯಾಕೆ ಈ ನಿರ್ಧಾರ?

ಹೌದು, ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆ ಪಚೆಂದಾದ ಮುಸ್ತಫಾಬಾದ್ ಪ್ರದೇಶದಲ್ಲಿರುವ ಸರ್ಕಾರ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟಕ್ಕೆ ಕುಳಿದ ವಿದ್ಯಾರ್ಥಿಗಳೇ ಶಾಕ್ ಆಗಿದ್ದಾರೆ. ಏಕೆಂದರೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಡಸಿದ ಊಟದಲ್ಲಿ ಸತ್ತು ಬಿದ್ದ ಇಲಿಯೊಂದು ಪತ್ತೆಯಾಗಿದೆ. ಈ ಘಟನೆ ಪೋಷಕರನ್ನು ಮತ್ತಷ್ಟು ಕೆರಳಿಸಿದೆ.

Dead Mouse Found In A Midday Meal In A Govt School In Muzaffarnagar.

ಡಿಸೆಂಬರ್.03ರಂದು ಮಧ್ಯಾಹ್ನ ವಿದ್ಯಾರ್ಥಿಗಳಿಗೆ ನೀಡಿರುವ ಊಟದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಈ ಆಹಾರ ಸೇವಿಸಿದ ಕೆಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Dead Mouse Found In A Midday Meal In A Govt School In Muzaffarnagar.

ಜನ ಕಲ್ಯಾಣ ಸೇವಾ ಸಮಿತಿ ಎಂಬ ಎನ್ ಜಿಓ ಸಂಸ್ಥೆಯು ಪ್ರಾಥಮಿಕ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಸರಬರಾಜು ಮಾಡುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಸತೀಶ್ ದ್ವಿವೇದಿ, ಪ್ರಾಥಮಿಕ ವಿಚಾರಣೆ ನಡೆಸಿದ್ದು ಎನ್ ಜಿಓ ಸಂಸ್ಥೆ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಸಂಪೂರ್ಣ ತನಿಖೆ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

English summary
Dead Mouse Found In A Midday Meal In A Govt School In Muzaffarnagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X