• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಮ್ಲಜನಕವಿಲ್ಲದೇ ರೋಗಿಗಳು ಸಾವನ್ನಪ್ಪುತ್ತಿರುವುದು ಯಾವ ನರಮೇಧಕ್ಕೂ ಕಡಿಮೆಯಲ್ಲ; ಹೈಕೋರ್ಟ್

|

ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ನರಮೇಧ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.

ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬಿಕ್ಕಟ್ಟನ್ನು ನೋಡಿಕೊಂಡು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ; ಸುಪ್ರೀಂಈ ಬಿಕ್ಕಟ್ಟನ್ನು ನೋಡಿಕೊಂಡು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ; ಸುಪ್ರೀಂ

ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕ್ವಾರಂಟೈನ್ ಕೇಂದ್ರಗಳ ಪರಿಸ್ಥಿತಿ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಹಾಗೂ ಅಜಿತ್ ಕುಮಾರ್ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ನರಮೇಧ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.

"ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.

English summary
Death of Covid patients due to non-supply of oxygen not less than genocide says Allahabad High court
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X