ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಯಾವತಿ ಕೆಂಡಾಮಂಡಲ, ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ

|
Google Oneindia Kannada News

ಲಕ್ನೋ, ಜೂನ್ 24: ಲೋಕಸಭೆ ಚುನಾವಣೆಯ ನಂತರ ಸಮಾಯವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.

ಇತ್ತೀಚೆಗಷ್ಟೆ ಎಸ್ಪಿ ಜೊತೆ ಮೈತ್ರಿ ಕಡಿದುಕೊಳ್ಳುವ ಸೂಚನೆ ನೀಡಿದ್ದ ಬಿಎಸ್ಪಿ ನಾಯಕಿ ಮಾಯಾವತಿ, ಇದೀಗ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸಮಾಜವಾದಿ ಪಕ್ಷದ 'ಸೈಕಲ್‌' ಪಂಕ್ಚರ್ ಮಾಡಿ 'ಬೈ ಬೈ' ಎಂದ ಮಾಯಾವತಿ ಸಮಾಜವಾದಿ ಪಕ್ಷದ 'ಸೈಕಲ್‌' ಪಂಕ್ಚರ್ ಮಾಡಿ 'ಬೈ ಬೈ' ಎಂದ ಮಾಯಾವತಿ

"ಚುನಾವಣೆಯ ಫಲಿತಾಂಶ ಬಂದ ಬಳಿಕವೂ ಅಖಿಲೇಶ್ ಯಾದವ್ ನನಗೊಂದು ಫೋನ್ ಸಹ ಮಾಡಲಿಲ್ಲ. ನಾನು ಅವರಿಗಿಂತ ಹಿರಿಯಳಾದರೂ ಅವರಿಗೆ ಫೋನ್ ಮಾಡಿ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದೆ. ಅಖಿಲೇಶ್ ಕುಟುಂಬಸ್ಥರೇ ಸೋತ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆದರೆ ಫಲಿತಾಂಶದ ನಂತರ ನನ್ನೊಂದಿಗೆ ಮಾತನಾಡುವಂತೆ ನನ್ನ ಪಕ್ಷದ ಸದಸ್ಯರೇ ಅಖಿಲೇಶ್ ಅವರಲ್ಲಿ ಮನವಿ ಮಾಡಿಕೊಂಡರೂ, ಅವರು ಅದಕ್ಕೆ ಒಪ್ಪಲಿಲ್ಲ" ಎಂದು ಮಾಯಾವತಿ ಆಕ್ರೋಶ ವ್ಯಕ್ತಪಡಿಸಿದರು.

Did not even call after election results: Mayawati blames Akhilesh Yadav

ಉತ್ತರ ಪ್ರದೇಶದಲ್ಲಿ ನಡೆಯಲಿರುವ 11 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

ಮೈತ್ರಿಗೆ ಗುಡ್ ಬೈ ಎಂದ ಮಾಯಾವತಿ: ಮೌನ ಮುರಿದ ಅಖಿಲೇಶ್ಮೈತ್ರಿಗೆ ಗುಡ್ ಬೈ ಎಂದ ಮಾಯಾವತಿ: ಮೌನ ಮುರಿದ ಅಖಿಲೇಶ್

17 ಕೋಟಿ ರೂ. ತಾಜ್ ಕಾರಿಡಾರ್ ಪ್ರಕರಣದಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ನನ್ನನ್ನು ಸಿಲುಕಿಸಲು ಪ್ರಯತ್ನಿಸಿದ್ದರು ಎಂದು ಇದೇ ಸಂದರ್ಭದಲ್ಲಿ ಮಾಯಾವತಿ ಎಸ್ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಮೇಲೂ ಆರೋಪ ಮಾಡಿದರು.

ಲೋಕಸಭೆ ಚುನಾವಣೆ, ಮತ್ತು ಅದಕ್ಕೂ ಮುನ್ನ ನಡೆದಿದ್ದ ವಿಧಾನಸಭೆ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಂಡಿದ್ದ ಎಸ್ಪಿ, ಬಿಎಸ್ಪಿ ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ದೋಸ್ತಿ ಕಡಿದುಕೊಳ್ಳುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ ಬಿಎಸ್ಪಿ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಎಸ್ಪಿ 5 ಸ್ಥಾನಗಳಲ್ಲಿ ಜಯಗಳಿಸಿದೆ.

English summary
Akhilesh Yadav did not even call after Lol Sabha election results 2019, Mayawati blames Akhilesh Yadav,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X