ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದರೆ ಯುಪಿ ಸರ್ಕಾರ ನೀಡುವ ನಗದು ಬಹುಮಾನ ಎಷ್ಟು ಗೊತ್ತಾ..?
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಬಿಜೆಪಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.
ಗೋರಖ್‌ಪುರ ಮಾರ್ಚ್ 14: ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡಿದೆ. ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಪದಕ ಗೆದ್ದವರಿಗೆ ನಗದು ಬಹುಮಾನದೊಂದಿಗೆ ಸನ್ಮಾನಿಸುವ ಮೂಲಕ ಪ್ರೋತ್ಸಾಹ ನೀಡುತ್ತದೆ.
ಭಾನುವಾರ ಸಂಸದ್ ಖೇಲ್ ಮಹಾಕುಂಭದ ಸಮಾರೋಪ ಸಮಾರಂಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಭಾಗವಹಿಸಿ ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಬಿಜೆಪಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.

'ರಾಜ್ಯದಲ್ಲಿ ಕ್ರೀಡೆಯ ಅಭಿವೃದ್ಧಿಗೆ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಇದರ ಅಂಗವಾಗಿ ಆಟದ ಮೈದಾನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರತಿ ಗ್ರಾಮಗಳಲ್ಲಿ ಜಿಮ್ ಆರಂಭಿಸಲಾಗಿದೆ. ಮಾತ್ರವಲ್ಲದೆ ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣ, ಮಿನಿ ಸ್ಟೇಡಿಯಂ ನಿರ್ಮಾಣ ಮಾಡಲಾಗಿದೆ. 1994ರ ನಂತರ ಕ್ರೀಡಾ ಹಾಸ್ಟೆಲ್‌ಗಳಿಗೆ ಹೆಚ್ಚು ಖರ್ಚು ಮಾಡಿಲ್ಲ. ಆದರೆ ಇದೀಗ ಬಿಜೆಪಿ ಸರಕಾರ ಈ ಕ್ರಮಗಳನ್ನು ಕೈಗೊಂಡಿದೆ' ಎಂದು ಸಿಎಂ ಯೋಗಿ ಹೇಳಿದರು.
'ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ ಕ್ರೀಡೆಗೆ ಉತ್ತೇಜನ ನೀಡಲು ಉತ್ತರ ಪ್ರದೇಶ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಸಾಕಷ್ಟು ಹಣವನ್ನು ಮೀಸಲಿಡಲಾಗಿದೆ. ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ' ಎಂದರು.

ಮಾತ್ರವಲ್ಲದೆ ತಮ್ಮ ಸರ್ಕಾರ ಕ್ರೀಡಾ ಪಟುಗಳಿಗೆ ಉಚಿತ ಎಸಿ 3 ದರ್ಜೆಯ ಪ್ರಯಾಣವನ್ನು ಒದಗಿಸುತ್ತಿದೆ. ದೇಶದ ಮೊದಲ ಪ್ರಮುಖ ಕ್ರೀಡಾ ವಿಶ್ವವಿದ್ಯಾಲಯ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯವನ್ನು ಮೀರತ್‌ನಲ್ಲಿ ಸ್ಥಾಪಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದರು.
ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ
ಬಹುಮುಖ್ಯವಾಗಿ ಒಲಿಂಪಿಕ್ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೂ ನಗದು ಬಹುಮಾನದ ಪ್ರೋತ್ಸಾಹಧನ ಹೆಚ್ಚಿಸಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು. ಪ್ರತಿ ಸಂಸದೀಯ ಕ್ಷೇತ್ರದಿಂದ 2000 ರಿಂದ 2500 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಎಲ್ಲಾ 80 ಲೋಕಸಭಾ ಕ್ಷೇತ್ರಗಳನ್ನು ನೋಡಿದರೆ ಈ ಸಂಖ್ಯೆ 2 ಲಕ್ಷಕ್ಕೆ ತಲುಪಲಿದೆ ಎಂದರು.
ಒಲಂಪಿಕ್ಸ್ ನ ಸಿಂಗಲ್ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂಪಾಯಿ, ಒಲಿಂಪಿಕ್ಸ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಯೋಗಿ ಹೇಳಿದರು.
ವಲಸೆಗೆ ಬ್ರೇಕ್, ಸಾಕಷ್ಟು ಉದ್ಯೋಗ ಸೃಷ್ಟಿ
ಸಂಸದ್ ಖೇಲ್ ಮಹಾಕುಂಭದ ಸಮಾರೋಪ ಸಮಾರಂಭದಲ್ಲಿ ಇನ್ನಷ್ಟು ವಿಷಯಗಳ ಬಗ್ಗೆ ಮಾತನಾಡಿದ ಯೋಗಿ, ಬೆಳೆಗಳನ್ನು ರಫ್ತು ಮಾಡಲು ಗೋರಖ್‌ಪುರದ ದಕ್ಷಿಣಾಚಲದಲ್ಲಿ ಜಲಮಾರ್ಗ ಸೌಲಭ್ಯವನ್ನು ನಿರ್ಮಿಸಲಾಗುವುದು ಎಂದಿದ್ದಾರೆ. ಜಲಮಾರ್ಗ ಕಾಮಗಾರಿ ಪೂರ್ಣಗೊಂಡ ಬಳಿಕ ಇಲ್ಲಿ ಬೆಳೆಯುವ ತರಕಾರಿಯನ್ನು ದೇಶದ ಇತರೆ ರಾಜ್ಯಗಳಿಗೆ ರಫ್ತು ಮಾಡಲಾಗುವುದು ಎಂದು ವಿವರಿಸಿದರು.
ಗೋರಖ್‌ಪುರದ ದಕ್ಷಿಣಾಚಲ ಪ್ರದೇಶದಿಂದ ಸಾಕಷ್ಟು ವಲಸೆ ವಲಸೆ ಹೋಗುತ್ತಿದ್ದರು ಆದರೆ ಧುರಿಯಾಪುರ, ಗೋಲಾ, ಸಿಕ್ರಿಗುಂಜ್ ಮತ್ತು ಖಜಾನಿ ಪ್ರದೇಶಗಳಲ್ಲಿ ಕೈಗಾರಿಕಾ ಟೌನ್‌ಶಿಪ್‌ಗಳು ಬರುವುದರಿಂದ ವಲಸೆ ನಿಲ್ಲುತ್ತದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಬೇರೆ ಪ್ರದೇಶಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದರು. ಕೈಗಾರಿಕಾ ಟೌನ್‌ಶಿಪ್ ಭೂಸ್ವಾಧೀನಕ್ಕೆ ಸರ್ಕಾರ ಈ ಬಜೆಟ್‌ನಲ್ಲಿ 200 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ನೆನಪಿಸಿದರು.












Click it and Unblock the Notifications