'ಮೋದಿ ಸರ್ಕಾರ ನಂಬಲ್ಲ' ಎಂದ ಹುತಾತ್ಮ ಯೋಧನ ದುಃಖತಪ್ತ ಪತ್ನಿ
ಲಕ್ನೋ, ಫೆಬ್ರವರಿ 17 : ಪುಲ್ವಾಮಾದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಯೋಧ ಪ್ರದೀಪ್ ಸಿಂಗ್ ಅವರ ಪತ್ನಿ ನೀರಜ್ ಅವರು 'ನರೇಂದ್ರ ಮೋದಿ ಸರ್ಕಾರದ ಮೇಲೆ ನಂಬಿಕೆ ಇಲ್ಲ' ಎಂದು ದುಃಖತಪ್ತರಾಗಿ ಹೇಳಿದ್ದಾರೆ.
ಪುಲ್ವಾಮಾ ದಾಳಿ ನಡೆಯುವುದಕ್ಕೂ ಮುನ್ನ ಉತ್ತರ ಪ್ರದೇಶದ ಕಾನ್ಪುರದ ಕನೌಜ್ ಜಿಲ್ಲೆಯ ಅಜಾನ್ ಗ್ರಾಮದ ಹುತಾತ್ಮ ಯೋಧ ಪ್ರದೀಪ್ ಸಿಂಗ್ ಯಾದವ್ ಜತೆ ಅವರ ತಮ್ಮ ಪತ್ನಿ ನೀರಜಾ ಅವರು ಫೋನ್ ಮಾಡಿ ಮಾತನಾಡುತ್ತಿದ್ದರು.
ಪತ್ನಿಯೊಂದಿಗೆ ನಗು ನಗುತ್ತಾ ಮಾತನಾಡುತ್ತಿದ್ದಂತೆಯೇ ಎಸ್ ಯುವಿಯೊಂದು ಅನಾಮತ್ತಾಗಿ ಬಂದು ಅವರಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿತ್ತು. ಅಷ್ಟರಲ್ಲೇ ಪತ್ನಿಗೂ ಭಾರಿ ಸದ್ದು ಕಿವಿಗಪ್ಪಳಿಸಿದೆ. ನಂತರ ಫೋನ್ ಕಾಲ್ ಕಟ್ ಆಗಿದೆ. ಮೌನ, ಆತಂಕ, ಚಡಪಡಿಕೆಯ ನಂತರ ಗೊತ್ತಾಗಿದ್ದು, ತಮ್ಮ ಪತಿ ಹುತಾತ್ಮರಾದ ಘೋರ ಸುದ್ದಿ ಸಿಕ್ಕಿದೆ.

ಸಿಆರ್ ಪಿಎಫ್ ಕಂಟ್ರೋಲ್ ರೂಮಿನಿಂದ ಪ್ರದೀಪ್ ಸಿಂಗ್ ಹುತಾತ್ಮರಾಗಿರುವ ಸುದ್ದಿ ಸಿಕ್ಕಿದೆ. ನಂತರ ಇಂಡಿಯಾ ಟುಡೇ ಟಿವಿ ಜತೆ ಮಾತನಾಡಿದ ನೀರಜಾ ಅವರು, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ತ್ಯಾಗ, ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ, ನಾವು ಮೋದಿ ಹಾಗೂ ಅವರ ಸರ್ಕಾರವನ್ನು ಇನ್ಮುಂದೆ ನಂಬುವುದಿಲ್ಲ. ಈ ಹಿಂದೆ ಕೂಡಾ ಉಗ್ರರು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯ ಎಸಗಿದ್ದಾರೆ. ಆದರೆ, ಇನ್ನೂ ಭದ್ರತಾ ಪಡೆಗಳಿಗೆ ಯಾಕೆ ಮುಕ್ತ ಅಧಿಕಾರ ನೀಡಿಲ್ಲ. ನಮ್ಮ ಯೋಧರಲ್ಲಿ ಬಲವಿದ್ದರೂ, ಆದೇಶವಿಲ್ಲದೆ ಏನೂ ಮಾಡಲು ಸಾಧ್ಯವಾಗುತ್ತಿಲ್ಲ. ಕನಿಷ್ಟ ಕಲ್ಲು ಎಸೆಯುವ ದುರುಳರನ್ನು ಹತ್ತಿಕ್ಕಲು ಮುಕ್ತ ಅವಕಾಶವಿಲ್ಲ ಎಂದು ದುಃಖ ತೋಡಿಕೊಂಡಿದ್ದಾರೆ.
40 ದಿನಗಳ ರಜೆ ಮೇಲೆ ಊರಿಗೆ ಬಂದಿದ್ದ ನನ್ನ ಪತಿ ಫೆ.11ರಂದು ಸೇನೆಗೆ ಮರಳಿದ್ದರು. ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ನಡೆಸಿ ಅವರನ್ನು ಕೊಂದರೂ ನನ್ನ ಪತಿ ವಾಪಸ್ ಬರಲು ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ.
ಫೆ.14 ರಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಆವಂತಿಪೊರ ಎಂಬಲ್ಲಿ ಪಾಕ್ ಮೂಲದ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕ ಆದಿಲ್ ಅಹ್ಮದ್ ದಾರ್ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆಸಿದ ಪರಿಣಾಮ ಸಿಆರ್ ಪಿಎಫ್ ನ 44 ಯೋಧರು ಹುತಾತ್ಮರಾಗಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications