ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದ ಅಪರಾಧಿಯ ತಂದೆಯಿಂದ ಚುನಾವಣಾ ಪ್ರಚಾರ
ಲಕ್ನೋ, ಫೆಬ್ರವರಿ 19: 2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದ ಅಪರಾಧಿಯಾಗಿ ತಂದೆ ಎಸ್‌ಪಿ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷವು ಭಯೋತ್ಪಾದಕರನ್ನು ರಕ್ಷಿಸುತ್ತಿದೆ, 2008ರ ಸರಣಿ ಸ್ಫೋಟದಲ್ಲಿ 56 ಮಂದಿ ಮೃತಪಟ್ಟು, 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ದೋಷಿಗಳ ಪೈಕಿ 38 ಜನರಿಗೆ ಭಾರತೀಯ ದಂಡ ಸಂಹಿತೆ 302ನೇ ವಿಧಿ (ಹತ್ಯೆ), 120ಬಿ (ಕ್ರಿಮಿನಲ್ ಸಂಚು), ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಗಲ್ಲು ಶಿಕ್ಷೆ ವಿಧಿಸಲಾಗಿದ್ದರೆ, 11 ಜನರಿಗೆ ಕ್ರಿಮಿನಲ್ ಸಂಚು ಮತ್ತು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಜೊತೆಗೆ 48 ದೋಷಿಗಳಿಗೆ ಒಟ್ಟು 2.85 ಲಕ್ಷ ಮತ್ತು ಓರ್ವ ದೋಷಿಗೆ 2.88 ಲಕ್ಷ ರು. ದಂಡ ವಿಧಿಸಲಾಗಿದೆ. ಅಲ್ಲದೆ ಘಟನೆಯಲ್ಲಿ ಮಡಿದವರಿಗೆ ತಲಾ 1 ಲಕ್ಷ ರು., ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರು. ಮತ್ತು ಸಾಮಾನ್ಯ ಗಾಯಕ್ಕೆ ತುತ್ತಾದವರಿಗೆ ತಲಾ 25,000 ರು.ಗಳ ಪರಿಹಾರವನ್ನು ನ್ಯಾಯಾಲಯ ಪ್ರಕಟಿಸಿದೆ.
ನ್ಯಾಯಾಲಯದ ತೀರ್ಪು ಐತಿಹಾಸಿಕವೆಂದು ಹೇಳಿದ ಅವರು, ಜೀವಾವಧಿ ಶಿಕ್ಷೆಗೆ ಗುರಿಯಾದ 38 ಮಂದಿಯಲ್ಲಿ ಒಬ್ಬರು ಅಜಂಗಢದ ಸಂಜರಪುರದವರು ಎಂದು ಹೇಳಿದ್ದಾರೆ.
ಈ ಭಯೋತ್ಪಾದಕನ ತಂದೆ ಸಮಾಜವಾದಿ ಪಕ್ಷದೊಂದಿಗೆ ನಂಟು ಹೊಂದಿದ್ದಾರೆ, ವಿಧಾನಸಭಾ ಚುನಾವಣೆಯಲ್ಲಿ ಎಸ್‌ಪಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂದರು.
ಇಂಡಿಯನ್ ಮುಜಾಹಿದೀನ್ ಸಂಘಟನೆಯ ಉಗ್ರರು 2008ರ ಜು.26ರಂದು 70 ನಿಮಿಷಗಳ ಅವಧಿಯಲ್ಲಿ ಅಹಮದಾಬಾದ್ ನಗರದ ಸರ್ಕಾರಿ ಆಸ್ಪತ್ರೆ, ಬಸ್ ಸೇರಿದಂತೆ 21 ಕಡೆ ಸರಣಿ ಸ್ಫೋಟ ನಡೆಸಿದ್ದರು. ಘಟನೆಯಲ್ಲಿ 56 ಜನರು ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2002ರ ಗೋಧ್ರೋತ್ತರ ದಂಗೆಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿತ್ತು ಎಂದು ಉಗ್ರರು ವಿಚಾರಣೆ ವೇಳೆ ಹೇಳಿಕೊಂಡಿದ್ದರು.
ಅಹಮದಾಬಾದ್ ಕ್ರೈಂ ಬ್ರಾಂಚ್‌ನ ಅಧಿಕಾರಿಗಳ ತಂಡ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಿ ದೋಷಾರೋಪ ಪಟ್ಟಿಸಲ್ಲಿಸಿತ್ತು. ನಂತರದ ದಿನಗಳಲ್ಲಿ ಒಟ್ಟು 9 ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಿದ್ದರು. ಈ ಪೈಕಿ 2017ರಲ್ಲಿ ವಿಚಾರಣೆ ಹೊಣೆ ವಹಿಸಿಕೊಂಡ ನ್ಯಾ.ಎ.ಆರ್.ಪಟೇಲ್ ಇದೀಗ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣ ಸಂಬಂಧ ಒಟ್ಟು ಇಂಡಿಯನ್ ಮುಜಾಹಿದೀನ್ ಸಂಘಟನೆಗೆ ಸೇರಿದ 77 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಓರ್ವ ಮಾಫಿ ಸಾಕ್ಷಿಯಾಗಿ ಬದಲಾಗಿದ್ದ. ಉಳಿದ 76 ಜನರ ಪೈಕಿ 49 ಜನರನ್ನು ದೋಷಿಗಳೆಂದು ಫೆ.8ರಂದು ನ್ಯಾಯಾಲಯ ಘೋಷಿಸಿತ್ತು. 28 ಜನರನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಕಾರಣ ಬಿಡುಗಡೆ ಮಾಡಿತ್ತು.
14 ವರ್ಷಗಳ ಹಿಂದೆ ಗುಜರಾತಿನ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಿ 56 ಮಂದಿಯನ್ನು ಬಲಿ ಪಡೆದಿದ್ದ ಪ್ರಕರಣ ಸಂಬಂಧ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ 38 ಜನರಿಗೆ ವಿಶೇಷ ನ್ಯಾಯಾಲಯವೊಂದು ಶುಕ್ರವಾರ ಗಲ್ಲು ಶಿಕ್ಷೆ ವಿಧಿಸಿದೆ. ಇದೇ ವೇಳೆ, 11 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ.
'ಇದೊಂದು ಅಪರೂಪದಲ್ಲಿ ಅಪರೂಪದ ಪ್ರಕರಣ' ಎಂದು ಬಣ್ಣಿಸಿರುವ ನ್ಯಾಯಾಲಯ, ತನ್ನ 7 ಸಾವಿರ ಪುಟಗಳ ತೀರ್ಪಿನಲ್ಲಿ 38 ಜನರನ್ನು ಸಾಯುವವರೆಗೂ ನೇಣಿಗೇರಿಸಬೇಕು ಮತ್ತು 11 ಜನರು ಅಜೀವ ಜೀವಾವಧಿ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ. ಇದರೊಂದಿಗೆ ಘಟನೆ ನಡೆದ 14 ವರ್ಷಗಳ ಬಳಿಕ ಸಂತ್ರಸ್ತರಿಗೆ ನ್ಯಾಯ ಸಿಕ್ಕಂತಾಗಿದೆ.












Click it and Unblock the Notifications