ಯುಪಿಯಲ್ಲಿ ಕನಿಷ್ಠ 20 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಒತ್ತಾಯ
ಲಕ್ನೋ, ಜನವರಿ 11: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಟಿಕೆಟ್‌ಗಳನ್ನು ಅಂತಿಮಗೊಳಿಸಲು ಸಜ್ಜಾಗಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕೂಡಾ ಇಳಿಸುವಂತೆ ಪಕ್ಷದ ಅಲ್ಪಸಂಖ್ಯಾತ ಘಟಕವು ಕೇಂದ್ರ ನಾಯಕತ್ವವನ್ನು ಒತ್ತಾಯಿಸಿದೆ. ಉತ್ತರ ಪ್ರದೇಶದಲ್ಲಿ ಕನಿಷ್ಠ 20 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಎಂದು ಒತ್ತಾಯ ಮಾಡಿದ್ದಾರೆ.
"ಯುಪಿಯಲ್ಲಿ 2017 ರ ವಿಧಾನಸಭಾ ಚುನಾವಣೆಯಲ್ಲಿ, ಪಕ್ಷವು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಈ ಬಾರಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕನಿಷ್ಠ 20 ಅಭ್ಯರ್ಥಿಗಳನ್ನಾದರೂ ಕಣಕ್ಕೆ ಇಳಿಸುವಂತೆ ಆಗ್ರಹ ಮಾಡಿದೆ," ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖ್ಯಸ್ಥ ಜಮಾಲ್ ಸಿದ್ದಿಕಿ ಹೇಳಿದ್ದಾರೆ.
"ಗಣನೀಯ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಹಲವಾರು ಸ್ಥಾನಗಳಿವೆ. ನಾವು ಕಡಿಮೆ ಅಂತರದಿಂದ ಕಳೆದುಕೊಂಡಿರುವ ಹಲವು ಸ್ಥಾನಗಳಿವೆ. ಉದಾಹರಣೆಗೆ ಸಂಭಾಲ್, ಮೊರಾದಾಬಾದ್, ಮೀರತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರು ಇದ್ದಾರೆ," ಎಂದು ಹೇಳುವ ಮೂಲಕ ಈ ಕ್ಷೇತ್ರದಲ್ಲಿ ಮುಸ್ಲಿ ಅಭ್ಯರ್ಥಿಗಳನ್ನು ಇಳಿಸಿದ್ದರೆ ಗೆಲುವು ಸಾಧ್ಯವಿತ್ತು ಎಂದು ಪರೋಕ್ಷವಾಗಿ ನುಡಿದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಸ್ಲಿ ಅಭ್ಯರ್ಥಿ
"ಪಶ್ಚಿಮ ಬಂಗಾಳದಲ್ಲೂ ಪಕ್ಷವು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾವು ಈ ಬಾರಿ ಉತ್ತರ ಪ್ರದೇಶದ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸುತ್ತಿದ್ದೇವೆ. ನಾವು ಮುಸ್ಲಿಂ ಸಮುದಾಯದಿಂದ ಹೆಚ್ಚಿನ ಪ್ರಾತಿನಿಧ್ಯವನ್ನು ಬಯಸುತ್ತೇವೆ. ಇದು ಬಿಜೆಪಿ ಪಕ್ಷವು ಸಮಾಜದಲ್ಲಿ ಮುಂದುವರಿಯಲು ಸಹಾಯ ಮಾಡುತ್ತದೆ," ಎಂದು ಸಲಹೆ ನೀಡಿದ್ದಾರೆ.
ಅಲ್ಪಸಂಖ್ಯಾತ ಮೋರ್ಚಾದ ಲೆಕ್ಕಾಚಾರ ಹೀಗಿದೆ..
ಅಲ್ಪಸಂಖ್ಯಾತ ಮೋರ್ಚಾವು 100 ಸ್ಥಾನಗಳನ್ನು ಗುರುತಿಸಿದೆ, ಅದು ಶೇಕಡಾ 30 ರಷ್ಟು ಅಲ್ಪಸಂಖ್ಯಾತ ಜನಸಂಖ್ಯೆಯನ್ನು ಹೊಂದಿದೆ. 20 ರಷ್ಟು ಅಲ್ಪಸಂಖ್ಯಾತರ ಮತಗಳನ್ನು ಹೊಂದಿರುವ 140 ಸ್ಥಾನಗಳು ಸ್ಥಾನಗಳು ಇದೆ. ಶೇಕಡಾ 60-70 ರಷ್ಟು ಅಲ್ಪಸಂಖ್ಯಾತ ಜನಸಂಖ್ಯೆ ಇರುವ 40 ಸ್ಥಾನಗಳು ಇದೆ. "ಈ ಸ್ಥಾನಗಳಲ್ಲಿ ಹೆಚ್ಚಿನವು ಪಶ್ಚಿಮ ಉತ್ತರ ಪ್ರದೇಶ, ಅವಧ್ ಮತ್ತು ಬ್ರಜ್ ಪ್ರದೇಶಗಳಲ್ಲಿವೆ," ಎಂದು ನಾಯಕರು ಹೇಳಿದ್ದಾರೆ.
ಮೂಲಗಳ ಪ್ರಕಾರ, ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗಿದ್ದರೂ ಸಹ ಪಶ್ಚಿಮ ಯುಪಿಯಲ್ಲಿ ಸಮಸ್ಯೆಗಳನ್ನು ಎದುರಿಸುವ ಬಗ್ಗೆ ಪಕ್ಷವು ಚಿಂತಿಸುತ್ತಿದೆ. ಉತ್ತರ ಪ್ರದೇಶದ ಒಟ್ಟು ಜನಸಂಖ್ಯೆಯ ಸುಮಾರು 19 ಪ್ರತಿಶತದಷ್ಟು ಮುಸ್ಲಿಮರು ಇದ್ದಾರೆ. 2017 ರಲ್ಲಿ ಕಡಿಮೆ ಅಂತರದಿಂದ ಸೋತ ಸಮುದಾಯದ ಪ್ರಾಬಲ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸಲು ಬಿಜೆಪಿ ಈಗಾಗಲೇ ಯೋಜನೆಯನ್ನು ರೂಪಿಸಿದೆ. "ಬಲ ಸ್ಥಾನ"ದಿಂದ ಹೆಚ್ಚಿನ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಅವರು ವಿಜಯಶಾಲಿಯಾಗಬಹುದು ಎಂದು ಪಶ್ಚಿಮ ಬಂಗಾಳದ ಅನುಭವವನ್ನು ಉಲ್ಲೇಖ ಮಾಡುತ್ತಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖ್ಯಸ್ಥ ಜಮಾಲ್ ಸಿದ್ದಿಕಿ ಅಭಿಪ್ರಾಯಿಸಿದ್ದಾರೆ. "ನಮ್ಮ ಮುಸ್ಲಿಂ ಅಭ್ಯರ್ಥಿಗಳು (ಬಂಗಾಳದಲ್ಲಿ) ಒಂದು ಸ್ಥಾನವನ್ನು ಗೆಲ್ಲದಿದ್ದರೂ, ಎರಡು ಸ್ಥಾನಗಳಲ್ಲಿ, ನಾವು ಕಠಿಣ ಸ್ಪರ್ಧೆಯನ್ನು ನೀಡಿದ್ದೇವೆ. ಅಸ್ಸಾಂನಲ್ಲಿಯೂ ನಾವು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ," ಎಂದಿದ್ದಾರೆ.
ಬಿಜೆಪಿಯು ಈಗ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮತಕ್ಕಾಗಿ ಬಲೆ ಬೀಸುತ್ತಿದೆ. ನಿರಂತರವಾಗಿ ಬಹುಸಂಖ್ಯಾತರ ಧಾರ್ಮಿಕ ವಿಚಾರವನ್ನು ಮುಂದಿಟ್ಟುಕೊಂಡು ಪಕ್ಷವನ್ನು ಕಟ್ಟುತ್ತಾ ಬಂದಿರುವ ಬಿಜೆಪಿಯು ಕಾಲಕ್ಕೆ ತಕ್ಕೆ ಬದಲಾಗಲು ಮುಂದಾದಂತೆ ಕಾಣುತ್ತಿದೆ. ಬಿಜೆಪಿ ಸರ್ಕಾರವು ಮುಸ್ಲಿಮರಿಗಾಗಿ "ಕೌಶಲ್ಯಯುತ ಕೈ" (ಹೋನರ್ ಹಾತ್) ಎಂಬ ಕಲಾತ್ಮಕ ಶಿಬಿರವನ್ನು ಆಯೋಜನೆ ಮಾಡಿದೆ. ಮುಖ್ಯವಾಗಿ ಹಿಂದುಳಿದ ವರ್ಗದ ಮುಸ್ಲಿಮರು ಇರುವ ಪ್ರದೇಶವಾದ ಗೋರಾಕ್‌ಪುರ ಹಾಗೂ ಅಲಹಾಬಾದ್‌ನಲ್ಲಿ ಈ ಶಿಬಿರವನ್ನು ಆಯೋಜನೆ ಮಾಡಲಾಗಿದೆ. (ಒನ್‌ಇಂಡಿಯಾ ಸುದ್ದಿ)
Recommended Video
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications