ಸಾಮೂಹಿಕ ಅತ್ಯಾಚಾರ ಆರೋಪ; ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್
ಲಕ್ನೋ, ಫೆಬ್ರವರಿ 19 : ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹಿಳೆಯನ್ನು ಒಂದು ತಿಂಗಳ ಕಾಲ ಹೋಟೆಲ್‌ನಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟು ಸಹಚರರ ಜೊತೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಆರೋಪ ಮೇಲೆ ದೂರು ದಾಖಲಾಗಿತ್ತು.
ಬಿಜೆಪಿ ಶಾಸಕ ರವೀಂದ್ರನಾಥ್ ತ್ರಿಪಾಠಿ ಮತ್ತು ಅವರ 6 ಸಹಚರರ ವಿರುದ್ಧ 40 ವರ್ಷದ ಮಹಿಳೆ ದೂರು ನೀಡಿದ್ದಳು. 2017ರಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಫೆಬ್ರವರಿ 10ರಂದು ದೂರು ನೀಡಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಬದನ್ ಸಿಂಗ್ ಈ ಕುರಿತು ಹೇಳಿಕೆ ನೀಡಿದ್ದು, "2017ರಲ್ಲಿ ರವೀಂದ್ರನಾಥ್ ತ್ರಿಪಾಠಿ ಮತ್ತು ಆತನ 6 ಸಹಚರರು ಒಂದು ತಿಂಗಳ ಕಾಲ ಹೋಟೆಲ್‌ನಲ್ಲಿ ಕೂಡಿ ಹಾಕಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ" ಎಂದು ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರದಿಂದ ತಾನು ಗರ್ಭಿಣಿ ಆಗಿದ್ದೆ. ಬಲವಂತದಿಂದ ನನ್ನ ಗರ್ಭಪಾತ ಮಾಡಿಸಿದ್ದಾರೆ ಎಂದು ಸಹ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಈ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಎಎಸ್‌ಪಿ ರವೀಂದ್ರ ವರ್ಮಗೆ ತನಿಖೆಯ ಹೊಣೆಯನ್ನು ವಹಿಸಲಾಗಿದೆ. ಶಾಸಕ ಸೇರಿದಂತೆ ಒಟ್ಟು 7 ಜನರ ವಿರುದ್ಧ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲು ಮಾಡಲಾಗುತ್ತದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.












Click it and Unblock the Notifications