• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಘಾಜಿಯಾಬಾದ್: ಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ

|

ಘಾಜಿಯಾಬಾದ್, ಮಾರ್ಚ್ 20: ಉತ್ತರ ಪ್ರದೇಶದ ಘಾಜಿಯಾಬಾದ್‌ನ ರೈಲ್ವೆ ನಿಲ್ದಾಣದಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ ತಗುಲಿರುವ ಘಟನೆ ಶನಿವಾರ ನಡೆದಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶನಿವಾರ ಶತಾಬ್ದಿ ಎಕ್ಸ್ ಪ್ರೆಸ್ ನ ಜನರೇಟರ್ ಮತ್ತು ಲಗ್ಗೇಜ್ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲ್ವೆ ಕಟ್ಟಡದಲ್ಲಿ ಭಾರಿ ಅಗ್ನಿ ಅನಾಹುತ: ರಕ್ಷಣೆಗಾಗಿ ತೆರಳಿದ್ದ 7 ಸಿಬ್ಬಂದಿ ಸಾವುರೈಲ್ವೆ ಕಟ್ಟಡದಲ್ಲಿ ಭಾರಿ ಅಗ್ನಿ ಅನಾಹುತ: ರಕ್ಷಣೆಗಾಗಿ ತೆರಳಿದ್ದ 7 ಸಿಬ್ಬಂದಿ ಸಾವು

ಬೆಂಕಿ ಹೊತ್ತಿಕೊಂಡಿರುವ ಬೋಗಿಯನ್ನು ಬೇರ್ಪಡಿಸಿದ ಬಳಿಕ 8-20ರ ಸುಮಾರಿಗೆ ರೈಲು ತನ್ನ ಗಮ್ಯಸ್ಥಾನಕ್ಕೆ ಪ್ರಯಾಣವನ್ನು ಬೆಳೆಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಳಗ್ಗೆ 6-45ರ ಸುಮಾರಿನಲ್ಲಿ ಈ ಘಟನೆ ನಡೆದಿದೆ. ನವದೆಹಲಿ- ಲಕ್ನೋ ಶತಾಬ್ದಿ ಎಕ್ಸ್ ಪ್ರೆಸ್ ಬೆಳಗ್ಗೆ 6-41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ಬಂದಾಗ ಜನರೇಟರ್ ಮತ್ತು ಲಗ್ಗೇಜ್ ಬೋಗಿಯೊಂದರಲ್ಲಿ ಹೊಗೆ ಕಾಣಿಸಿಕೊಂಡಿದೆ.

ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಹೊಗೆಯನ್ನು ನಿಯಂತ್ರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

English summary
A fire broke out in the generator car of Shatabdi Express at Ghaziabad railway station on Saturday morning. The coach has now been detached and the train has been dispatched on its way.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
loader
X