ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸೇರ್ಪಡೆಗೊಂಡ ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್

|
Google Oneindia Kannada News

ಲಕ್ನೋ, ಜನವರಿ 19: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇಂದು ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕೆಲ ಕಾಲ ಕೇಸರಿ ಪಕ್ಷದ ಜೊತೆ ಸಂಪರ್ಕದಲ್ಲಿದ್ದರು. ಅಪರ್ಣಾ ಯಾದವ್ ಅವರು ಮುಲಾಯಂ ಸಿಂಗ್ ಅವರ ಎರಡನೇ ಪತ್ನಿ ಸಾಧನಾ ಗುಪ್ತಾ ಅವರ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ.

Recommended Video

ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ | Oneindia Kannada

ಅಪರ್ಣಾ ಯಾದವ್ ಅವರು, 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿ ಅಭ್ಯರ್ಥಿ ರೀಟಾ ಬಹುಗುಣ ಜೋಶಿ ವಿರುದ್ಧ 33,796 ಮತಗಳಿಂದ ಸೋಲು ಅನುಭವಿಸಿದ್ದರು.

ಸಮಾಜವಾದಿ ಪಕ್ಷದಿಂದ ಈಗಾಗಲೇ ಹಲವಾರು ಮಂದಿ ಪಕ್ಷಾಂತರ ಮಾಡಿದ್ದು, ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೇಲೆ ದುಷ್ಪರಿಣಾಮ ಬೀರಲಿದೆ.

Former UP CM Mulayam Singh Yadavs daughter-in-law Aparna joins BJP

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಅವರ ಕಿರಿಯ ಸೊಸೆ, ಶ್ರೀಮತಿ ಅಪರ್ಣ ಯಾದವ್ ಅವರು ಇಂದು ನವದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿಗೆ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಉತ್ತರ ಪ್ರದೇಶದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವರ ಉತ್ಸಾಹ-ಹುಮ್ಮಸ್ಸು ಉತ್ತರಪ್ರದೇಶದಲ್ಲಿ ಪಕ್ಷವನ್ನು ಇನಷ್ಟು ಬಲಿಷ್ಠಗೊಳಿಸಲು ಸಹಾಯವಾಗಲಿದೆ ಎಂದು ಶೋಭಾ ಕರಂದ್ಲಾಜೆಯವರು ಅಭಿಪ್ರಾಯ ಪಟ್ಟಿದ್ದಾರೆ

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಜನಪರ ಆಡಳಿತ ಹಾಗೂ ಬಿಜೆಪಿಯ ಸಿದ್ದಾಂತಗಳಿಂದ ಪ್ರಭಾವಿತರಾಗಿ ಬಿಜೆಪಿಯ ಸದಸ್ಯತ್ವನ್ನು ಸ್ವೀಕರಿಸಿರುವ ಶ್ರೀಮತಿ ಅಪರ್ಣ ಯಾದವ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಪಕ್ಷಕ್ಕೆ ಹಾರ್ದಿಕ ಸ್ವಾಗತವನ್ನು ಕೋರಿದ್ದಾರೆ.

ಇತ್ತೀಚೆಗೆ, ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಅವರು ಇತರ ಶಾಸಕರೊಂದಿಗೆ ತಮ್ಮ ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದರು.

Former UP CM Mulayam Singh Yadavs daughter-in-law Aparna joins BJP

ಸಮಾಜವಾದಿ ಪಕ್ಷದ ಕಿರಿಯ ಸೊಸೆ ಅಪರ್ಣಾ ಯಾದವ್ ಅವರು ಯಾವಾಗಲೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ಮೋದಿಯನ್ನು ಹೊಗಳುತ್ತಾರೆ. ರಾಮ ಮಂದಿರಕ್ಕೆ 11 ಲಕ್ಷ 11 ಸಾವಿರ ದೇಣಿಗೆ ಕೂಡ ನೀಡಿದ್ದಾರೆ. ಇದರೊಂದಿಗೆ ದತ್ತಾತ್ರೇಯ ಹೊಸಬಾಳೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವು ಸರ್ಕಾರಿ ಸಂಸ್ಥೆಯಾದಾಗ ಅವರೊಂದಿಗೆ ತಮ್ಮ ಫೋಟೋವನ್ನು ಸಹ ಹಂಚಿಕೊಂಡಿದ್ದರು.

ಅಪರ್ಣಾ ಯಾದವ್ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಾರೆ ಎಂಬ ಭರವಸೆಯ ಮೇರೆಗೆ ಬಿಜೆಪಿಗೆ ಸೇರಿದ್ದಾರೆ ಎಂದು ನಂಬಲಾಗಿದೆ. ಆದರೂ ಬಿಜೆಪಿ ಈ ಬಾರಿ ಅವರನ್ನು ಬೇರೆ ಕ್ಷೇತ್ರದಿಂದ ಕಣಕ್ಕಿಳಿಸಲು ಉತ್ಸುಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಪಂಜಾಬ್, ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇನ್ನೊಂದೆಡೆ ಅಖಿಲೇಶ್‌ ಯಾದವ್‌ ಹಲವು ಗೊಂದಲಗಳ ಬಳಿಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದ ಪ್ರತಿಯೊಂದು ಸ್ಥಾನದ ಮೇಲೆ ಕೇಂದ್ರೀಕರಿಸಲು ಆದ್ಯತೆ ನೀಡುವುದಾಗಿ ಅವರು ಈ ಹಿಂದೆಯೇ ಹೇಳಿದ್ದರು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಲೋಕಸಭೆಯ ಸಂಸದರಾಗಿದ್ದು, ಇದುವರೆಗೆ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಅವರ ಸ್ಥಾನವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

English summary
The Bharatiya Janata Party has inducted Mulayam Singh's daughter-in-law Aparna Yadav. She was in touch with the saffron party for some time. Aparna Yadav is the wife of Prateek Yadav, son of Mulayam Singh's second wife Sadhana Gupta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X