ಗೋರಖಪುರ ಮಠದಲ್ಲೇ ಯೋಗಿ ಆದಿತ್ಯನಾಥ್ ಮೇಲೆ ದಾಳಿಗೆ ಪಾಕ್ ಉಗ್ರರ ಸ್ಕೆಚ್

ಲಕ್ನೋ, ಫೆ 14: ಪ್ರಬಲ ಹಿಂದುತ್ವ ಪ್ರತಿಪಾದಕ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸ್ಕೆಚ್ ಹಾಕಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಮಾಧ್ಯಮದವರ ಸೋಗಿನಲ್ಲಿ ಬಂದು, ಗೋರಖಪುರ ಮಠದಲ್ಲೇ ಯೋಗಿ ಆದಿತ್ಯನಾಥ್ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದು, ಭದ್ರತಾ ವ್ಯವಸ್ಥೆ ಹೆಚ್ಚಿಸುವಂತೆ ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆಗೆ ಸೂಚಿಸಿದೆ.

ನಾಥ ಪರಂಪರೆಯ ಗೋರಖನಾಥ್ ಮಠದ ಸಂತರಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ಸಂದರ್ಶನ ಮಾಡುವ ಸೋಗಿನಲ್ಲಿ ಬಂದು, ದಾಳಿ ನಡೆಸುವ ಪ್ಲಾನ್ ಹಾಕಿಕೊಳ್ಳಲಾಗಿದೆ ಎಂದು ಇಲಾಖೆ, ಉತ್ತರ ಪ್ರದೇಶ ಸರಕಾರಕ್ಕೆ ತಿಳಿಸಿದೆ.

Fresh Alert From IB: Possible Terror Attack On UP CM Yogi Adityanath

ಈ ಹಿನ್ನಲೆಯಲ್ಲಿ, ಸಿಎಂ ಯೋಗಿ ಆದಿತ್ಯನಾಥ್ ಅವರ ಪತ್ರಿಕಾಗೋಷ್ಠಿ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಭಾವಚಿತ್ರವನ್ನೊಳಗೊಂಡ ನೂತನ ಗುರುತಿನ ಚೀಟಿ ಹಂಚಿಕೆ ಮಾಡಲು, ಉತ್ತರಪ್ರದೇಶ ಪೊಲೀಸರು ನಿರ್ಧರಿಸಿದ್ದಾರೆ.

ಉಗ್ರರ ದಾಳಿಯ ಸಾಧ್ಯತೆಯ ಅಲರ್ಟ್ ಬಂದ ನಂತರ, ಗೋರಖಪುರ ಮಠಕ್ಕೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗಾಗಲೇ, ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ಯೋಗಿ ಆದಿತ್ಯನಾಥ್ ಗೆ Zಪ್ಲಸ್ ಭದ್ರತೆಯನ್ನು ನೀಡಲಾಗುತ್ತಿದೆ.

ಕಳೆದ ಆರು ತಿಂಗಳಲ್ಲಿ ಯೋಗಿ ಆದಿತ್ಯನಾಥ್ ಮೇಲೆ ದಾಳಿಯ ಸಾಧ್ಯತೆಯ ಬಗ್ಗೆ ಬಂದ ಎರಡನೇ ಎಚ್ಚರಿಕೆ ಇದಾಗಿದೆ. ಈ ಹಿಂದೆ, ಕಳೆದ ಆಗಸ್ಟ್ ತಿಂಗಳಲ್ಲೂ ಇದೇ ರೀತಿ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+