ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ: ತಲೆಗೆ ರಾಡ್‌ನಿಂದ ಹಲ್ಲೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 15: ಲಿಫ್ಟ್‌ಕೊಡುವ ನೆಪದಲ್ಲಿ ಸ್ನೇಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆಕೆ ಎಂಬಿಎ ವಿದ್ಯಾರ್ಥಿನಿಯಾಗಿದ್ದು, ಅತ್ಯಾಚಾರ ನಡೆಸಿದ ಬಳಿಕ ರಾಡ್‌ನಿಂದ ಆಕೆಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ.

ಪೊಲೀಸರಂತೆ ವೇಷ ಹಾಕಿಕೊಂಡು ಮಹಿಳೆ ಅತ್ಯಾಚಾರ ಮಾಡಿದ ಪಾಪಿಗಳು!ಪೊಲೀಸರಂತೆ ವೇಷ ಹಾಕಿಕೊಂಡು ಮಹಿಳೆ ಅತ್ಯಾಚಾರ ಮಾಡಿದ ಪಾಪಿಗಳು!

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಗ್ರಾಮವೊಂದರ ಬಳಿ ಎಸೆದು ಹೋಗಿದ್ದರು. ವಿದ್ಯಾರ್ಥಿನಿ ಈಗ ಗಂಭೀರ ಸ್ಥಿತಿಯಲ್ಲಿದ್ದು, ಆಕೆಯನ್ನು ಮೀರತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Gangrape On A Girl In Uttar Pradesh

ವಿದ್ಯಾರ್ಥಿನಿ ಮೀರತ್‌ನಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಗೆ ಬಸ್ ಮಿಸ್ ಆಗಿತ್ತು. ಆಗ ಕೆಲ ಪರಿಚಿತ ವಿದ್ಯಾರ್ಥಿಗಳು ಲಿಫ್ಟ್ ಕೊಡುವುದಾಗಿ ಹೇಳಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ನಂತರ ಆಕೆಯನ್ನು ಅಪಹರಿಸಿ ಬುಲಂದ್‍ಶಹರ್ ನ ಸೈನಾ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ರಾಡ್‍ನಿಂದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಸೈನಾ ಪೊಲೀಸ್ ಠಾಣೆ ಪ್ರದೇಶದ ಹಳ್ಳಿಯೊಂದರ ಬಳಿ ವಿದ್ಯಾರ್ಥಿನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಆಕೆಯನ್ನು ಮೀರತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಇತ್ತ ಕತ್ತಲಾದರೂ ಮನೆಗೆ ಬರಲಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ ಬಸ್ ನಿಲ್ದಾಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಕಾರಿನಲ್ಲಿ ಹೋಗಿರುವುದು ಖಚಿತವಾಗಿತ್ತು. ಬಳಿಕ ಕಾರು ಹೋದ ಮಾರ್ಗದಲ್ಲಿ ಪೊಲೀಸರು ಹುಡುಕಾಟ ನಡೆಸಿದಾಗ ಯುವತಿ ಬಿದ್ದಿರುವುದು ಕಾಣಿಸಿತ್ತು.

English summary
Gangraped Their Own Friend In Uttarpradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X