ಬೈಕ್ ಒಂದು ಸವಾರರು ಏಳು ಜನ: ವಿಡಿಯೋ
ಗಾಜಿಯಾಬಾದ್ ಆಗಸ್ಟ್ 05: ಟ್ರಾಫಿಕ್ ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಅದೆಷ್ಟೇ ಪ್ರಯತ್ನಪಟ್ಟರೂ ಕ್ರಮಗಳನ್ನು ಕೈಗೊಂಡರೂ ಜನ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಲೇ ಇರುತ್ತಾರೆ. ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಯುಪಿಯ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ. ಇದೀಗ ಮತ್ತೊಮ್ಮೆ ಗಾಜಿಯಾಬಾದ್‌ನ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಒಂದು ಬೈಕ್ ಮೇಲೆ ಒಂದಲ್ಲ ಎರಡಲ್ಲ ಬರೋಬ್ಬರಿ 7 ಮಂದಿ ಯುವಕರು ಸವಾರಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡು 24 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಗಾಜಿಯಾಬಾದ್‌ನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಾಪ್ ವಿಹಾರ್ ರಸ್ತೆಯಲ್ಲಿ ಈ ವಿಡಿಯೋ ಸೆರೆಹಿಡಿಯಲಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಏಳು ಜನ ಯುವಕರು ರಸ್ತೆಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಯುವಕರು ನಡುರಸ್ತೆಯಲ್ಲಿ ಬೈಕ್ ಓಡಿಸುತ್ತಲೇ ಇದ್ದರು. ಯುವಕರು ಬಹಿರಂಗವಾಗಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಬೈಕ್ ಹಿಂದೆ ಓಡುತ್ತಿದ್ದ ಮತ್ತೊಬ್ಬ ಬೈಕ್ ಸವಾರ ಈ ಯುವಕರನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ವೈರಲ್ ಆದ ವಿಡಿಯೋವನ್ನು ಅರಿತು ಪೊಲೀಸರು ಆರೋಪಿ ಯುವಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
#गाजियाबाद
— Zuber Akhtar (@Zuber_Akhtar1) August 3, 2022
एक बाईक पर 7 युवक सवार।
हादसे को न्यौता देते इन युवाओं को ना अपनी जान की परवाह है ना ही सड़क पर चल रहे दूसरे लोगो की।
वायरल वीडियो प्रताप विहार इलाके का बताया जा रहा है।@Uppolice #ViralVideo pic.twitter.com/92o8KsbJP4
ಏಳು ಮಂದಿ ಯುವಕರು ಬೈಕ್ ಚಲಾಯಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು 24 ಸಾವಿರ ರೂ. ದಂಡ ವಿಧಿಸಲಾಗಿದೆ. ಟ್ರಾಫಿಕ್ ಎಸ್‌ಪಿ ರಮಾನಂದ್ ಕುಶ್ವಾಹ ಪ್ರಕಾರ, ಬೈಕ್ ಅನ್ನು ನಿಯಮ ಪಾಲಿಸಿ ಓಡಿಸಬೇಕಿದ್ದು, ಈ ರೀತಿ 7 ಆಸನದ ಕಾರಿನಂತೆ ಬೈಕ್ ಓಡಿಸಿದರೆ ಭಾರೀ ದಂಡ ತೆರಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೋಟಾರ್ ಸೈಕಲ್‌ನಲ್ಲಿ ಇಬ್ಬರು ಕುಳಿತುಕೊಳ್ಳಲು ಆಸನವಿದೆ. ಸಂಚಾರಿ ನಿಯಮದ ಪ್ರಕಾರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚು ಜನರು ಕುಳಿತುಕೊಳ್ಳುವುದು ನಿಯಮಕ್ಕೆ ವಿರುದ್ಧವಾಗಿದೆ. ಹಾಗೆ ಮಾಡಿದರೆ ದಂಡ ಪಾವತಿಸಬೇಕು. ಆದರೂ ನಿಯಮ ಉಲ್ಲಂಘಿಸಲು ಜನ ಹಿಂಜರಿಯುವುದಿಲ್ಲ. ಅಂತಹ ಜನರು ತನಗೆ ಮತ್ತು ರಸ್ತೆಯ ಇತರ ಚಾಲಕರಿಗೆ ಅಪಾಯಕಾರಿ ಎಂದು ಹೇಳಿದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications