ಮನೆಯಿಂದಲೇ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಮುಜಾಫರ್‌ನಗರ, ಜೂನ್ 21: ಮನೆಯಿಂದಲೇ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ.

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮನೆಯ ಹೊರಗಡೆ ಬಾಲಕಿ ನಿಂತುಕೊಂಡಿರುವಾಗ ಬಂದು ಮೂರ್ನಾಲ್ಕು ಮಂದಿ ಸೇರಿ ಆಕೆಯ ಬಾಯಿ ಮುಚ್ಚಿ, ಕೈಕಾಲುಗಳನ್ನು ಕಟ್ಟಿ ಕರೆದೊಯ್ದಿದ್ದಾರೆ.

ತಿತವಿ ಪೊಲೀಸ್ ಠಾಣಾ ವ್ಯಾಪ್ತಿಯ ಬಘ್ರಾ ಗ್ರಾಮದ ಖಾಲಿ ಮನೆಯೊಂದರಲ್ಲಿ ಬಾಲಕಿ ಪತ್ತೆಯಾಗಿದ್ದು, ಆಕೆಯ ಕೈ ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

Girl raped by four men in Muzaffarnagar

ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬಘ್ರ ಪೊಲೀಸ್ ಔಟ್ ಪೋಸ್ಟ್ ಅಧಿಕಾರಿ ಜಿತೇಂದ್ರ ಪನ್ವಾರ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ನಾಲ್ವರು ಕಾಮುಕರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಣಾ ಅಧಿಕಾರಿ ಎಸ್ ಕುಮಾರ್ ಅವರು ತಿಳಿಸಿದ್ದಾರೆ. ಬಾಲಕಿಗೆ 16 ವರ್ಷ ವಯಸ್ಸಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+