10 ದಿನಗಳ ಅಂತರದಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ

ಲಕ್ನೋ, ಆಗಸ್ಟ್ 25: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕಳೆದ ಹತ್ತು ದಿನಗಳ ಅಂತರದಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

Recommended Video

      Pakistanಕ್ಕೆ ಎಲ್ಲಾ ವಿಚಾರದಲ್ಲೂ ಸಾಥ್ ನೀಡಲು ಮುಂದಾದ China | Oneindia Kannada

      ಮಂಗಳವಾರ ಸಂಜೆ 17 ವರ್ಷದ ಬಾಲಕಿಯ ಮೃತದೇಹ ದೊರೆತಿದೆ. ಬಾಲಕಿಯನ್ನು ಚೂಪಾದ ಆಯುಧದಿಂದ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಕುತ್ತಿಗೆಯನ್ನು ಕೊಯ್ದಿದ್ದಾರೆ. ಗ್ರಾಮದಿಂದ 200 ಮೀಟರ್ ದೂರದಲ್ಲಿ ದೇಹ ಪತ್ತೆಯಾಗಿದೆ.

      ಮರಣೋತ್ತರ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

      Girl Raped, Killed In Uttar Pradesh Second Such Incident In 10 Days

      ಸೋಮವಾರ ಸ್ಕಾಲರ್‌ಶಿಪ್ ಅರ್ಜಿಯನ್ನು ತುಂಬಲು ನಗರಕ್ಕೆ ಹೋಗಿದ್ದಳು, ಆಕೆ ವಾಪಸ್ ಮನೆಗೆ ಬಂದಿರಲಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ಹೊರಟಿದ್ದಳು, ಯಾರ ಮೇಲೆ ಸಂಶಯಪಡಬೇಕು ತಿಳಿಯುತ್ತಿಲ್ಲ ಎಂದು ಪೋಷಕರು ಹೇಳಿದ್ದಾರೆ.

      ಕಳೆದ 10 ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಆಗಸ್ಟ್ 15 ರಂದು ಬಾಲಕಿಯೊಬ್ಬಳನ್ನು ಅಪಹರಿಸಲಾಗಿತ್ತು, ಬಳಿಕ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಕಣ್ಣುಗಳನ್ನು ಕಿತ್ತಿದ್ದರು, ನಾಲಿಗೆಯನ್ನು ಕತ್ತರಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಇದ್ಯಾವುದೂ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+