ಶಾಕಿಂಗ್; ಸಹೋದರಿಯ ಗುಪ್ತಾಂಗಕ್ಕೆ ಗುಂಡಿಕ್ಕಿ ಹತ್ಯೆ ಮಾಡಿದ ಸಹೋದರ!

ಲಕ್ನೋ, ಫೆಬ್ರವರಿ 17: ಹತ್ತೊಂಬತ್ತು ವರ್ಷದ ಯುವತಿಯೊಬ್ಬಳ ಗುಪ್ತಾಂಗಕ್ಕೆ ಗುಂಡು ಹೊಡೆದು ಕೊಲೆಗೈದಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಯಲ್ಲಿ ನಡೆದಿರುವುದು ವರದಿಯಾಗಿದೆ.

ಮೀರತ್ ಜಿಲ್ಲೆಯ ಸಾರ್ಧಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದೊಂದು ಮರ್ಯಾದಾ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವತಿ ಅನ್ಯ ಕೋಮಿನ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ವಿಷಯವೇ ಕೊಲೆಗೆ ಕಾರಣ ಎಂದು ತಿಳಿಸಿದ್ದು, ಯುವತಿಯ ಮನೆಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.

ದ್ವಿತೀಯ ಪಿಯುಸಿ ಓದುತ್ತಿರುವ ಸಹೋದರಿ, ಅನ್ಯ ಕೋಮಿನ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡ ಆಕೆಯ ಅಣ್ಣನೇ ಆಕೆಯ ಗುಪ್ತಾಂಗ ಹಾಗೂ ಎದೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾನೆ. ಆರಂಭದಲ್ಲಿ ಘಟನೆ ಬಗ್ಗೆ ಪೊಲೀಸರು ಮನೆಯವರನ್ನು ಪ್ರಶ್ನಿಸಿದಾಗ ದಾರಿತಪ್ಪಿಸುವ ಹೇಳಿಕೆ ನೀಡಿದ್ದರು.

Girl Shot Dead By Cousin In Uttar Pradesh

ಮರಣೋತ್ತರ ಪರೀಕ್ಷೆ ವರದಿ ಬಂದಾಗ ಯುವತಿಯ ಮನೆಯವರು ನೀಡಿದ್ದ ಹೇಳಿಕೆಗೂ, ವರದಿಗೂ ಸಂಬಂಧ ಇಲ್ಲದಿರುವುದು ಪತ್ತೆಯಾಗಿತ್ತು. ಕೊನೆಗೆ ಯುವತಿಯ ಸಹೋದರನನ್ನು ವಿಚಾರಿಸಿದಾಗ ಸತ್ಯ ಬಯಲಾಗಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಕುಮಾರ್ ಪಾಂಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+