ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Gyanvapi Mosque : ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್- ಸೆ.22ಕ್ಕೆ ವಿಚಾರಣೆ

|
Google Oneindia Kannada News

ಲಕ್ನೋ ಸೆಪ್ಟೆಂಬರ್ 12: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಜಿಲ್ಲಾ ಕೋರ್ಟ್‌ನಿಂದ ಮಹತ್ವದ ಆದೇಶ ಹೊರಬಿದ್ದಿದೆ. ಹಿಂದೂಗಳ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಹಿಂದೂ ಮಹಿಳೆಯರ ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ ಎಂದು ಕೋರ್ಟ್ ಹೇಳಿದ್ದು, ಸೆಪ್ಟೆಂಬರ್ 22ಕ್ಕೆ ಹಿಂದೂಗಳ ಅರ್ಜಿ ವಿಚಾರಣೆ ನಡೆಯಲಿದೆ.

ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜೆ ಸಲ್ಲಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ನ್ಯಾಯಾಧೀಶರ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಕಾಶಿ, ಮಥುರಾ ದೇವಸ್ಥಾನಗಳನ್ನು ಹಿಂದೂಗಳ ವಶಕ್ಕೆ ಪಡೆದುಕೊಳ್ಳುತ್ತೇವೆ: ವಿಎಚ್‌ಪಿ ಕಾಶಿ, ಮಥುರಾ ದೇವಸ್ಥಾನಗಳನ್ನು ಹಿಂದೂಗಳ ವಶಕ್ಕೆ ಪಡೆದುಕೊಳ್ಳುತ್ತೇವೆ: ವಿಎಚ್‌ಪಿ

ಇಂದು ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯದ ಆದೇಶ ನೀಡಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದೇ ಇರಲು ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನ್ಯಾಯಾಲದ ಸುತ್ತಲೂ ಬಿಗಿಭದ್ರತೆಯನ್ನು ಏರ್ಪಡಿಸಲಾಗಿದೆ. ನ್ಯಾಯಾಲಯದ ತೀರ್ಪಿಗೂ ಮುನ್ನ ವಾರಣಾಸಿಯಲ್ಲಿ ನಿಷೇಧಾಜ್ಞೆಗಳನ್ನು ಬಿಗಿಗೊಳಿಸಲಾಗಿದೆ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಜಿಲ್ಲೆಯ ಗಡಿ ಪ್ರದೇಶಗಳು, ಹೋಟೆಲ್‌ಗಳು, ಅತಿಥಿ ಗೃಹಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

Gnanavapi Mosque case: Court granted application of Hindus- Hearing on September 22

ವಾರಣಾಸಿ ಜಿಲ್ಲಾ ಕೋರ್ಟ್‌ನಿಂದ ಮಹತ್ವದ ಆದೇಶ ನೀಡಿದ್ದು ಹಿಂದೂಗಳ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಇದರಿಂದ ಹಿಂದೂ ಅರ್ಜಿದಾರರಿಗೆ ಮೊದಲ ಹಂತದ ಗೆಲುವು ಸಿಕ್ಕಿದೆ. ಪೂಜೆಗೆ ಅವಕಾಶ ನೀಡೋ ಬಗ್ಗೆ ಅರ್ಜಿ ವಿಚಾರಣೆ ಮಾಡಲು ಅರ್ಜಿ ಅರ್ಹವಾಗಿದೆ ಎಂದು ಕೋರ್ಟ್ ಹೇಳಿದೆ. ಹಿಂದೂ ಮಹಿಳೆಯರ ಅರ್ಜಿ ಯೋಗ್ಯವಾಗಿದೆ ಎಂದು ಕೋರ್ಟ್ ಹೇಳಿದೆ. ಶೃಂಗಾರ ಗೌರಿ ಪೂಜೆಗೆ ಅವಕಾಶ ಕೊಡಿ ಎಂದು ಮಹಿಳೆಯರು ಕೋರಿದ ಅರ್ಜಿ ಸೆಪ್ಟೆಂಬರ್ 22ಕ್ಕೆ ವಿಚಾರಣೆಯಾಗಲಿದೆ. ಇದರ ವಿರುದ್ಧ ಮಸೀದಿ ಪರ ವಕೀಲರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ತಿಳಿದು ಬಂದಿದೆ.

English summary
The Senior Judicial District Court of Varanasi today passed its verdict in a case filed by five Hindu women seeking the right to worship inside the city's Gnanavapi Mosque, adjacent to the famous Kashi Vishwanath Temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X