• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಸೋನಿಯಾ,ರಾಹುಲ್ ಭೇಟಿ: ಸೆಕ್ಷನ್ 144 ಜಾರಿ

|

ಲಕ್ನೋ, ಅಕ್ಟೋಬರ್ 1: ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

20 ವರ್ಷದ ದಲಿತ ಯುವತಿಯನ್ನು ಹುಲ್ಲು ತರಲು ಅಮ್ಮನೊಂದಿಗೆ ತೆರಳಿದ್ದ ವೇಳೆ ಸೆಪ್ಟೆಂಬರ್ 14 ರಂದು ನಾಲ್ವರು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರವಸಗಿದ್ದರು. ಅತ್ಯಾಚಾರವೆಸಗಿದ್ದಲ್ಲದೆ, ನಾಲಿಗೆ ಕೊಯ್ದು, ಬೆನ್ನುಮೂಳೆ ಮುರಿದ್ದರು, ಮೈತುಂಬಾ ಗಾಯಗಳಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು

ಬಳಿಕ ಪೊಲೀಸರು ಕುಟುಬದವರನ್ನು ಮನೆಯಲ್ಲಿಯೇ ಕೂಡ ಹಾಕಿ, ಮಗಳ ಮುಖವನ್ನೂ ನೋಡಲು ಬಿಡದೆ ಪೊಲೀಸರು ಮಧ್ಯರಾತ್ರಿ 2.30ರ ವೇಳೆ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಇದಕ್ಕೆ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು, ಹಲವೆಡೆ ಪ್ರತಿಭಟನೆ ನಡೆಯುತ್ತಿದೆ.

ಇದೀಗ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆಗಮಿಸುತ್ತಿರುವ ಕಾರಣ ಆ ಜಿಲ್ಲೆಯನ್ನು ಪೂರ್ತಿಯಾಗಿ ಸೀಲ್‌ಡೌನ್ ಮಾಡಲಾಗಿದೆ.

ಹತ್ರಾಸ್ ಅತ್ಯಾಚಾರ ಕೇಸ್: ರಾತ್ರಿ 2.30ಕ್ಕೆ ಸಂತ್ರಸ್ತೆ ಅಂತ್ಯಕ್ರಿಯೆ

ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ

ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ

ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿ ಮೂವರೂ ಕೂಡ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲಿದ್ದು, ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹತ್ರಾಸ್ ಗಡಿಯನ್ನು ಬಂದ್ ಮಾಡಲಾಗಿತ್ತು, ಸೆಕ್ಷನ್ 144 ಜಾರಿ ಮಾಡಲಾಗಿದೆ.

ಹತ್ರಾಸ್ ಪ್ರಕರಣ ಎಸ್‌ಐಟಿ ತನಿಖೆಗೆ ಆದೇಶ

ಹತ್ರಾಸ್ ಪ್ರಕರಣ ಎಸ್‌ಐಟಿ ತನಿಖೆಗೆ ಆದೇಶ

ಭಾರಿ ಚರ್ಚೆಗೆ ಗ್ರಾಸವಾಗಿರುವ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿಶೇಷ ತನಿಖಾ ದಳಕ್ಕೆ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.ಮೂವರನ್ನು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ದಳ ಪ್ರಕರಣದ ತನಿಖೆ ನಡೆಸಲಿದೆ.ಈ ವಿಶೇಷ ದಳದಲ್ಲಿ ಉತ್ತರ ಪ್ರದೇಶ ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿಬ್ಬರು ಹಿರಿಯ ಅಧಿಕಾರಿಗಳು ಇದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಯೋಗಿ ಆದಿತ್ಯನಾಥ್‌ ಮಾಹಿತಿ ನೀಡಿದ್ದಾರೆ. ತನಿಖೆ ನಡೆಸಿದ 7 ದಿನದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಅತ್ಯಾಚಾರಕ್ಕೆ ಸಾಕ್ಷಿ ಇಲ್ಲ, ನಾಲಿಗೆ ತುಂಡುಮಾಡಿಲ್ಲ: ಹತ್ರಾಸ್ ಪೊಲೀಸರ ಹೇಳಿಕೆ

ಹತ್ರಾಸ್‌ನಲ್ಲಿ ಮತ್ತೊಂದು ಅತ್ಯಾಚಾರ

ಹತ್ರಾಸ್‌ನಲ್ಲಿ ಮತ್ತೊಂದು ಅತ್ಯಾಚಾರ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ ಕಾಮುಕರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆ ಲಖನೌನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಹತ್ರಾಸ್ ಯುವತಿಯದ್ದು ಸಾವಲ್ಲ, ಹತ್ಯೆ

ಹತ್ರಾಸ್ ಯುವತಿಯದ್ದು ಸಾವಲ್ಲ, ಹತ್ಯೆ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. 'ನಿರ್ದಯಿ ಸರ್ಕಾರದಿಂದ ಅಮಾಯಕ ಹೆಣ್ಣು ಮಗಳ ಹತ್ಯೆ'ಯಾಗಿದೆ ಎಂದು ಟೀಕಿಸಿದ್ದಾರೆ. ಸಪ್ಟೆಂಬರ್.19ರಂದು ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿಯ ಕತ್ತು ಹಿಸುಕಿ, ನಾಲಗೆಯನ್ನು ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಮಂಗಳವಾರ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು.

English summary
Amid outrage over the death of the 19-year-old Dalit woman, who was allegedly gangraped by four upper-caste men in UP’s Hathras, section 144 has been imposed in the district and the borders have been sealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X