ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ರಾಸ್ ಅತ್ಯಾಚಾರ ಪ್ರಕರಣದ ಹತ್ತಾರು ಮುಖಗಳು: ಪೊಲೀಸ್, ಕುಟುಂಬ, ರಾಜಕೀಯ

|
Google Oneindia Kannada News

ಅಂದು ಸೆಪ್ಟೆಂಬರ್ 14 ಯುವತಿ ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಜಮೀನಿಗೆ ತೆರಳಿದ್ದ ಸಮಯ.

ಈ ವೇಳೆ ನಾಲ್ವರು ಕಾಮುಕರು ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಅಷ್ಟೇ ಅಲ್ಲದೆ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನುಮೂಳೆಯನ್ನು ಮುರಿದು ಗಂಭೀರವಾಗಿ ಗಾಯಗೊಳಿಸಿದ್ದರು.

ಬಳಿಕ ಆಕೆಯ ತಾಯಿ ಸ್ಥಳೀಯರ ಸಾಯದಿಂದ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಎರಡು ವಾರಗಳ ಸತತ ನೋವು ಅನುಭವಿಸಿದ ಸಂತ್ರಸ್ತ ಯುವತಿ ಮಂಗಳವಾರ ಕೊನೆಯುಸಿರೆಳೆದಿದ್ದಳು.

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವುಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು

ಇದಾದ ಬಳಿಕವೇ ನಡೆದಿದ್ದು ಮತ್ತಷ್ಟು ಕಣ್ಣೀರುಬರಿಸುವ ಘಟನೆ, ಪೋಷಕರಿಗೆ ಮಗಳ ಮುಖವನ್ನು ನೋಡಲು ಅವಕಾಶವನ್ನೇ ಪೊಲೀಸರು ಮಾಡಿಕೊಡಲಿಲ್ಲ, ಆಸ್ಪತ್ರೆ ಎದುರು ತಾಯಿ ಅಂಗಲಾಚಿ ಬೇಡಿಕೊಳ್ಳುತ್ತಿದ್ದರೂ ಕಿವುಡು ಕಿವಿಗಳಿಗೆ ಅದು ಕೇಳಿಸಲೇ ಇಲ್ಲ. ಮಧ್ಯರಾತ್ರಿ 2.30ರ ವೇಳೆಗೆ ಪೊಲೀಸರೇ ಆಕೆಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಹತ್ರಾಸ್ ಅತ್ಯಾಚಾರ ಕೇಸ್: ರಾತ್ರಿ 2.30ಕ್ಕೆ ಸಂತ್ರಸ್ತೆ ಅಂತ್ಯಕ್ರಿಯೆಹತ್ರಾಸ್ ಅತ್ಯಾಚಾರ ಕೇಸ್: ರಾತ್ರಿ 2.30ಕ್ಕೆ ಸಂತ್ರಸ್ತೆ ಅಂತ್ಯಕ್ರಿಯೆ

ಬಳಿಕ ಆಕೆಯ ನಾಲಿಗೆಯನ್ನು ಕತ್ತರಿಸಿರಲಿಲ್ಲ, ಬೆನ್ನುಮೂಳೆಯೂ ಮುರಿದಿರಲಿಲ್ಲ, ಮೈಮೇಲೆ ಗಾಯವೇ ಇರಲಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದು ಪೋಷಕರನ್ನು ಮತ್ತಷ್ಟು ನೋವಲ್ಲಿ ನೂಕಿದಂತಾಗಿತ್ತು. ಇದೀಗ ಪೋಷಕರು ಮಗಳನ್ನೂ ಕಳೆದುಕೊಂಡು, ಆಕೆಯನ್ನು ಅಂತಿಮವಾಗಿ ನೋಡಲೂ ಆಗದೆ ಅಸಹಾಯಕತೆಯಿಂದ ನಿಂತಿದ್ದಾರೆ.

 ಡಿಎಂ, ಎಸ್‌ಪಿ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ

ಡಿಎಂ, ಎಸ್‌ಪಿ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ

ಒಂದೆಡೆ ಮಗಳಿಗೆ ಹೀಗಾಯಿತಲ್ಲ ಎಂಬ ನೋವು ಮತ್ತೊಂದೆಡೆ ಅಂತಿಮವಾಗಿ ಆಕೆಯನ್ನು ನೋಡಲು ಅವಕಾಶ ಮಾಡಿಕೊಟ್ಟಿಲ್ಲ, ನಮಗೆ ಹೇಳದೆಯೇ ಮಧ್ಯರಾತ್ರಿ ಸಂತ್ಯಕ್ರಿಯೆ ಮಾಡಿದ್ದೇಕೆ ಎಂಬುದು ಕುಟುಂಬದ ಪ್ರಶ್ನೆಯಾಗಿದೆ. ಡಿಎಂ,ಎಸ್‌ಪಿ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ.

ಮಗಳ ಮೂಳೆಗಳು ಮುರಿದಿರಲಿಲ್ಲ ಮತ್ತು ಆಕೆಯ ದೇಹದ ಮೇಲೆ ಯಾವುದೇ ಗಾಯದ ಗುರತು ಇರಲಿಲ್ಲ ಎಂದು ಡಿಎಂ, ಎಸ್.ಪಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಮ್ಮ ಮನೆಯ ಮಗಳಿಗೆ ಈ ರೀತಿ ಆಗಿದ್ರೆ ನೀವು ಸುಮ್ಮನೆ ಇರ್ತಿದ್ದೀರಾ? ದಲಿತ ಬಡ ಕುಟುಂಬದ ಮಗಳ ಆಗಿದಕ್ಕೆ ಪ್ರಕರಣ ಮುಚ್ಚಿ ಹಾಕ್ತೀರಾ ಎಂದು ಸಂತ್ರಸ್ತೆ ತಾಯಿ ಆಕ್ರೋಶ ಹೊರ ಹಾಕಿದ್ದಾರೆ.

 ಕುಟುಂಬದವರನ್ನು ಮನೆಯಲ್ಲಿಯೇ ಕೂಡಿಹಾಕಲಾಗಿತ್ತು

ಕುಟುಂಬದವರನ್ನು ಮನೆಯಲ್ಲಿಯೇ ಕೂಡಿಹಾಕಲಾಗಿತ್ತು

ಮಂಗಳವಾರ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರು ತಡರಾತ್ರಿ ಮಾಡಿದ್ದರು. ಈ ವೇಳೆ ಕುಟುಂಬಸ್ಥರು ಮನೆಯಲ್ಲಿ ಕೂಡಿ ಹಾಕಲಾಗಿತ್ತು ಎನ್ನಲಾಗಿದೆ.

ಅತ್ಯಾಚಾರಕ್ಕೆ ಸಾಕ್ಷಿ ಇಲ್ಲ, ನಾಲಿಗೆ ತುಂಡುಮಾಡಿಲ್ಲ: ಹತ್ರಾಸ್ ಪೊಲೀಸರ ಹೇಳಿಕೆಅತ್ಯಾಚಾರಕ್ಕೆ ಸಾಕ್ಷಿ ಇಲ್ಲ, ನಾಲಿಗೆ ತುಂಡುಮಾಡಿಲ್ಲ: ಹತ್ರಾಸ್ ಪೊಲೀಸರ ಹೇಳಿಕೆ

 ಬೆಳಗಿನ ಜಾವ 2.30ಕ್ಕೆ ಯುವತಿಯ ಅಂತ್ಯಕ್ರಿಯೆ

ಬೆಳಗಿನ ಜಾವ 2.30ಕ್ಕೆ ಯುವತಿಯ ಅಂತ್ಯಕ್ರಿಯೆ

ನಸುಕಿನ ಜಾವ 2.30ರ ಸುಮಾರಿಗೆ ಯುವತಿಯ ಅಂತ್ಯಕ್ರಿಯೆ ನಡೆಸಲಾಗಿದೆ. ಈ ವೇಳೆ ಪೊಲೀಸರು ಮಾತ್ರ ಸ್ಥಳದಲ್ಲಿದ್ದರು. ಪತ್ರಕರ್ತರಿಗೂ ನಿರ್ಬಂಧ ಹೇರಿದ್ದರು. ಮೃತದೇಹ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪೊಲೀಸರು ಕ್ಯಾರೇ ಎನ್ನದೇ ತಾವೇ ಎಲ್ಲ ಕಾರ್ಯಗಳನ್ನು ಮುಗಿಸಿಬಿಟ್ಟರು ಎಂದು ಗದ್ಗದಿತರಾದರು. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಜೈಲಿಗಟ್ಟಲಾಗಿದ್ದು, ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 ಯುವತಿಯ ನಾಲಿಕೆ ಕತ್ತರಿಸಿರಲಿಲ್ಲ

ಯುವತಿಯ ನಾಲಿಕೆ ಕತ್ತರಿಸಿರಲಿಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಆಕೆಯ ದೇಹದಲ್ಲಿ ಯಾವುದೇ ಗುರುತುಗಳು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ನಾಲಿಗೆಯನ್ನು ತುಂಡು ಮಾಡಲಾಗಿದೆ ಎಂಬ ವರದಿಗಳು ಕೂಡ ಸುಳ್ಳು ಎಂದು ಹೇಳಿದರು. 'ಹತ್ರಾಸ್ ಅಥವಾ ಅಲಿಗಡದ ವೈದ್ಯರಾಗಲೀ ಲೈಂಗಿಕ ದೌರ್ಜನ್ಯ ನಡೆದ ಲಕ್ಷಣಗಳನ್ನು ದೃಢಪಡಿಸಿಲ್ಲ. ವಿಧಿವಿಜ್ಞಾನ ನೆರವಿನೊಂದಿಗೆ ವೈದ್ಯರು ಈ ವಿಷಯವನ್ನು ತನಿಖೆ ಮಾಡಿದ್ದಾರೆ. ಸಂತ್ರಸ್ತೆಯ ಖಾಸಗಿ ಅಂಗಗಳಲ್ಲಿ ಅತ್ಯಾಚಾರದ ಕುರುಹುಗಳು ಕಂಡುಬಂದಿಲ್ಲ' ಎಂದು ತಿಳಿಸಿದ್ದಾರೆ.

 ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹ

ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹ

ಹತ್ರಾಸ್ ಘಟನೆಗೆ ಸಂಬಂಧಿಸಿದಂತೆ ಇಡೀ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ದೋಷಿಗಳನ್ನು ಗಲ್ಲಿಗೇರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ವಿಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ರಸ್ತೆಗೆ ಇಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿವೆ.

English summary
All you need to know about the Hathras gang rape case in Kannada. A 19-year-old Dalit woman was brutally raped.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X