ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ರಾಸ್ ಅತ್ಯಾಚಾರ: ಎಲ್ಲ 4 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್

|
Google Oneindia Kannada News

ಲಕ್ನೋ, ಡಿಸೆಂಬರ್ 18: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೇ ನಡೆದಿಲ್ಲ ಎಂದು ಈ ಮುಂಚೆ ಉತ್ತರ ಪ್ರದೇಶ ಪೊಲೀಸರು ಹೇಳಿಕೆ ನೀಡಿದ್ದರು.

ಆದರೆ, ಸಂತ್ರಸ್ತೆಯ ಮೇಲೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಹೇಳಿದೆ. ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ವಿಶೇಷ ವರದಿಯನ್ನು ಸಲ್ಲಿಸಿದ್ದು, ಅದರಲ್ಲಿ ಅತ್ಯಾಚಾರ ಪ್ರಕರಣದ ಸೆಕ್ಷನ್ 376 ಡಿ, ಕೊಲೆ ಪ್ರಕರಣದ ಸೆಕ್ಷನ್ 302, ಸೆಕ್ಷನ್ 354 ಹಾಗೂ ಸೆಕ್ಷನ್ 376 ಎಗಳ ಅಡಿ ಪ್ರಕರಣಗಳನ್ನು ದಾಖಲಿಸಿರುವುದಾಗಿ ತಿಳಿಸಿದೆ.

ಆ ಫೋಟೊ ಹತ್ರಾಸ್ ಸಂತ್ರಸ್ತೆಯದ್ದಲ್ಲ ನನ್ನ ಪತ್ನಿಯದ್ದು: ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿಆ ಫೋಟೊ ಹತ್ರಾಸ್ ಸಂತ್ರಸ್ತೆಯದ್ದಲ್ಲ ನನ್ನ ಪತ್ನಿಯದ್ದು: ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ

ಎಲ್ಲ ನಾಲ್ವರು ಆರೋಪಿಗಳನ್ನು ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿದೆ ಎಂದು ಆರೋಪಿಗಳ ಪರ ವಕೀಲ ಮುನ್ನಾ ಸಿಂಗ್ ಪುಂಧಿರ್ ಹೇಳಿದ್ದಾರೆ. ವಿಶೇಷ ಎಸ್‌ಸಿ-ಎಸ್‌ಟಿ ನ್ಯಾಯಾಲಯಕ್ಕೆ ಸಿಬಿಐ ತನ್ನ ವರದಿಯನ್ನು ಸಲ್ಲಿಸಿದೆ.

 Hathras Gangrape Case: CBI Files Chargesheet Against All 4 Accused

19 ವರ್ಷದ ದಲಿಯ ಯುವತಿಯ ಮೇಲೆ ಸೆಪ್ಟೆಂಬರ್ 14ರಂದು ಹತ್ರಾಸ್‌ನಲ್ಲಿ ಮೇಲ್ವರ್ಗದ ನಾಲ್ವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ತೀವ್ರ ಗಾಯಗೊಂಡ ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆ ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಸೆಪ್ಟೆಂಬರ್ 30ರ ರಾತ್ರಿ ಆಕೆಯ ಮೃತದೇಹವನ್ನು ತಂದಿದ್ದ ಪೊಲೀಸರು, ತರಾತುರಿಯಲ್ಲಿ ತಾವೇ ಆಕೆಯ ಅಂತ್ಯಸಂಸ್ಕಾರ ನಡೆಸಿದ್ದರು. ಇದು ಭಾರಿ ವಿವಾದ ಸೃಷ್ಟಿಸಿತ್ತು. ಆದರೆ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲಿಲ್ಲ ಎಂಬ ಕುಟುಂಬದವರ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದರು.

ಹತ್ರಾಸ್ ಅತ್ಯಾಚಾರ ಪ್ರಕರಣ: ಸುಪ್ರೀಂನಲ್ಲಿ ಹೊಸ ಪಿಐಎಲ್ ದಾಖಲುಹತ್ರಾಸ್ ಅತ್ಯಾಚಾರ ಪ್ರಕರಣ: ಸುಪ್ರೀಂನಲ್ಲಿ ಹೊಸ ಪಿಐಎಲ್ ದಾಖಲು

ಆರೋಪಿಗಳಾದ ಸಂದೀಪ್, ಲವಕುಶ್, ರವಿ ಮತ್ತು ರಾಮು ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅವರ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ.

English summary
CBI in its chargesheet against all 4 accused of Hathras case said, victim was gangraped and murdered.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X