• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್‌ಐಆರ್

|

ಲಕ್ನೋ, ಅಕ್ಟೋಬರ್ 2: ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಲು ಪ್ರಯತ್ನಸಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರಾಹುಲ್ ಮತ್ತು ಪ್ರಿಯಾಂಕಾ ವಿರುದ್ಧ ಸೆಕ್ಷನ್ 144 ಹಾಗೂ ಸಾಂಕ್ರಾಮಿಕ ಪಿಡುಗು ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬದವರನ್ನು ಭೇಟಿ ಮಾಡಲು ತೆರಳುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಗಾ ಗಾಂಧಿ ಅವರನ್ನು ಯಮುನಾ ಎಕ್ಸ್‌ಪ್ರೆಸ್‌ ವೇನದಲ್ಲಿ ತಡೆದಿದ್ದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಅವರ ವಾಹನಗಳನ್ನು ತಡೆಯಲಾಗಿತ್ತು. ಇದರಿಂದ ರಾಹುಲ್ ಹಾಗೂ ಪ್ರಿಯಾಂಕಾ ಇತರೆ ಕಾಂಗ್ರೆಸ್ ಮುಖಂಡರ ಜತೆ ಹತ್ರಾಸ್‌ಗೆ ನಡೆದುಕೊಂಡೇ ಹೋಗುವುದಾಗಿ ಹೇಳಿದ್ದರು. ಮೆರವಣಿಗೆ ತೆರಳುವ ಸಂದರ್ಭದಲ್ಲಿ ಅವರನ್ನು ಪುನಃ ಅಡ್ಡಗಟ್ಟಿದ ಪೊಲೀಸರು ಸೆಕ್ಷನ್ 144ರ ಅಡಿ ವಶಕ್ಕೆ ಪಡೆದುಕೊಂಡಿದ್ದರು.

ಸಿಆರ್‌ಪಿಸಿ ಸೆಕ್ಷನ್ 144ರ ಉಲ್ಲಂಘನೆಯಡಿ ಹಾಗೂ ಸಾಂಕ್ರಾಮಿಕ ಪಿಡುಗು ಕಾಯ್ದೆಯ ಉಲ್ಲಂಘನೆ ಅಡಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರೆ ಅಪರಿಚಿತ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಗೌತಮ ಬುದ್ಧ ನಗರ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ತಿಳಿಸಿದ್ದಾರೆ.

ಗುರುವಾರ ಸಂಜೆ ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅತಿಥಿ ಗೃಹ ಒಂದರಲ್ಲಿ ಕೆಲ ಕಾಲ ಇರಿಸಿದ್ದರು. ನಂತರ ಬಿಡುಗಡೆ ಮಾಡಿ ಉತ್ತರ ಪ್ರದೇಶ ಪೊಲೀಸರ ಬೆಂಗಾವಲಿನಲ್ಲಿ ದೆಹಲಿಗೆ ಕರೆದೊಯ್ಯಲಾಗಿದೆ.

English summary
Hathras Gangrape case: Uttar Pradesh police have registered FIR against Rahul Gandhi and Priyanka Gandhi Vadra under IPC Section 144 and Pandemic act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X