• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹತ್ರಾಸ್ ಸಂತ್ರಸ್ತೆ ಕುಟುಂಬಸ್ಥರ ಬೇಡಿಕೆ ಮತ್ತು ಪ್ರಶ್ನೆಗಳ ಪಟ್ಟಿ

|

ಲಕ್ನೋ, ಅಕ್ಟೋಬರ್.04: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಶನಿವಾರ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಪ್ರಿಯಾಂಕಾ ಗಾಂಧಿ ಭೇಟಿ ಮಾಡಿ ಸಂತೈಸಿದ್ದಾರೆ.

ಕಳೆದ ಎರಡು ದಿನಗಳಿಂದ ಕಾಂಗ್ರೆಸ್ ನಾಯಕರು, ಟಿಎಂಸಿ ನಿಯೋಗ, ಮಾಧ್ಯಮಗಳಿಗೆ ಹತ್ರಾಸ್ ಗೆ ತೆರಳದಂತೆ ನಿರ್ಬಂಧ ವಿಧಿಸಲಾಗಿತ್ತು. ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರ ಭೇಟಿಗೆ ಅವಕಾಶ ನೀಡಿತ್ತು.

ಯಾವ ಶಕ್ತಿಯೂ ನಮ್ಮನ್ನು ತಡೆಯಲಾಗದು: ರಾಹುಲ್ ಗಾಂಧಿ

ಶನಿವಾರ ದಲಿತ ಕುಟುಂಬದ ಬಾಲಕಿ ಮೇಲೆ ನಡೆದ ದೌರ್ಜನ್ಯಕ್ಕೆ ನ್ಯಾಯ ಸಿಗುವವರೆಗೂ ಹೋರಾಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಸಂತ್ರಸ್ತೆ ಸಂಬಂಧಿಕರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಹತ್ರಾಸ್ ಸಂತ್ರಸ್ತೆಯ ಕುಟುಂಬ ಸದಸ್ಯರು ಪ್ರಿಯಾಂಕಾ ಗಾಂಧಿ ಎದುರು ಕೇಳಿರುವ ಪ್ರಶ್ನೆಗಳನ್ನು ಟ್ವೀಟ್ ಮೂಲಕ ಸರ್ಕಾರಕ್ಕೆ ತಲುಪಿಸಿದ್ದಾರೆ.

ಹತ್ರಾಸ್ ಕುಟುಂಬ ಸದಸ್ಯರು ಕೇಳಿರುವ ಪ್ರಶ್ನೆಗಳು

ಹತ್ರಾಸ್ ಕುಟುಂಬ ಸದಸ್ಯರು ಕೇಳಿರುವ ಪ್ರಶ್ನೆಗಳು

- ಸುಪ್ರೀಂಕೋರ್ಟ್ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು

- ಹತ್ರಾಸ್ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸುವುದರ ಜೊತೆಗೆ ಯಾವುದೇ ದೊಡ್ಡ ಹುದ್ದೆಗಳನ್ನು ನೀಡಬಾರದು.

- ನಮ್ಮ ಅನುಮತಿಯಿಲ್ಲದೇ ನಮ್ಮ ಮಗಳ ಮೃತದೇಹವನ್ನು ಏಕೆ ಸುಟ್ಟಿರಿ.

- ನಮಗೆ ಪದೇ ಪದೇ ಬೆದರಿಕೆ ಹಾಕುವುದು ಏಕೆ ಮತ್ತು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಏಕೆ?

- ಮಾನವೀಯ ದೃಷ್ಟಿಯಿಂದ ಶವಸಂಸ್ಕಾರದ ಚಿತೆಯನ್ನು ಸಂಗ್ರಹಿಸಲಾಗಿದೆ. ಆದರೆ ಆ ಅವಶೇಷಗಳು ನಮ್ಮ ಮಗಳ ಮೃತದೇಹದ್ದೇ ಎಂದು ನಾವು ಹೇಗೆ ನಂಬಬೇಕು.

ಕುಟುಂಬ ಸದಸ್ಯರಿಂದ ಮಾಹಿತಿ ಸಂಗ್ರಹಿಸಿದ ಎಸ್ಐಟಿ

ಕುಟುಂಬ ಸದಸ್ಯರಿಂದ ಮಾಹಿತಿ ಸಂಗ್ರಹಿಸಿದ ಎಸ್ಐಟಿ

ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕ್ಕೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸಂತ್ರಸ್ತೆ ಕುಟುಂಬ ಸದಸ್ಯರಿಂದ ವಿಶೇಷ ತನಿಖಾ ತಂಡವು ಈಗಾಗಲೇ ಹೇಳಿಕೆ ಸಂಗ್ರಹಿಸಿದೆ. ಎಸ್ಐಟಿ ಅಧಿಕಾರಿಗಳ ಎದುರಿಗೆ ನೀಡಿದ ಹೇಳಿಕೆಗಳನ್ನೇ ಕುಟುಂಬ ಸದಸ್ಯರು ತಮ್ಮೆದುರಿಗೆ ಹೇಳಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸಿಬಿಐ ಮತ್ತು ಎಸ್ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ

ಸಿಬಿಐ ಮತ್ತು ಎಸ್ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಕೇಂದ್ರ ತನಿಖಾ ತಂಡ(ಸಿಬಿಐ)ಕ್ಕೆ ಒಪ್ಪಿಸುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಸಂತ್ರಸ್ತೆ ಕುಟುಂಬ ಸದಸ್ಯರಿಗೆ ಸಿಬಿಐ ಅಥವಾ ಎಸ್ಐಟಿ ತಂಡಗಳ ತನಿಖೆಯಿಂದ ತಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿಲ್ಲ. ಸುಪ್ರೀಂಕೋರ್ಟ್ ಮೂಲಕವೇ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಂತ್ರಸ್ತೆಯ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಏನಿದು ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ? ಹತ್ರಾಸ್ ಅತ್ಯಾಚಾರ ಪ್ರಕರಣದ ಹಿನ್ನೆಲೆ ಏನು?

ಏನಿದು ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ? ಹತ್ರಾಸ್ ಅತ್ಯಾಚಾರ ಪ್ರಕರಣದ ಹಿನ್ನೆಲೆ ಏನು?

ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಸಪ್ಟೆಂಬರ್.29ರಂದು ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು. ಇದರ ಬೆನ್ನಲ್ಲೇ ಸಂತ್ರಸ್ತೆ ಕುಟುಂಬಸ್ಥರ ಭೇಟಿಗೆ ತೆರಳುತ್ತಿದ್ದ ನಾಯಕರನ್ನು ಉತ್ತರ ಪ್ರದೇಶ ಪೊಲೀಸರು ತಡೆ ಹಿಡಿದಿದ್ದರು. ಇದಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು.

English summary
Hathras Rape Case: Congress Leader Priyanka Gandhi Lists Demands And Questions Of The Victim's Family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X