ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಮಧ್ಯರಾತ್ರಿ ಹತ್ರಾಸ್ ಸಂತ್ರಸ್ತೆ ಅಂತ್ಯಕ್ರಿಯೆಗೆ ಕೋರ್ಟ್ ಅನುಮತಿ"

|
Google Oneindia Kannada News

ಲಕ್ನೋ, ಅಕ್ಟೋಬರ್.12: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬದ ಸದಸ್ಯರು ಸೋಮವಾರ ಅಲಹಾಬಾದ್ ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾದರು.

19 ವರ್ಷದ ಮೃತ ಸಂತ್ರಸ್ತೆಯ ತಂದೆ, ತಾಯಿ, ಮೂವರು ಸಹೋದರರನ್ನು ಬಿಗಿ ಪೊಲೀಸ್ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲಾಗಿತ್ತು. ಸೋಮವಾರ ವಿಚಾರಣೆ ನಡೆಸಿದ ನ್ಯಾ. ಪಂಕಜ್ ಮಿಥಲ್ ಮತ್ತು ರಜನ್ ರಾಯ್ ನೇತೃತ್ವದ ಪೀಠವು ನವೆಂಬರ್.02ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿತು. ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್, ಸೂಪರಿಟೆಂಡೆಂಟ್ ಆಫ್ ಪೊಲೀಸ್ ಜೊತೆಗೆ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾನೂನು ಸುವ್ಯವಸ್ಥೆಯ ಡಿಜಿಪಿ ಕೂಡಾ ಕೋರ್ಟ್ ಗೆ ಹಾಜರಾಗಿದ್ದರು.

ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆ ಆರಂಭಿಸಿದ ಸಿಬಿಐ ತಂಡಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆ ಆರಂಭಿಸಿದ ಸಿಬಿಐ ತಂಡ

"ಮಧ್ಯರಾತ್ರಿ ಸಂತ್ರಸ್ತೆಯ ಅಂತ್ಯ ಸಂಸ್ಕಾರ ನೆರವೇರಿಸುವುದಕ್ಕೆ ಕೋರ್ಟ್ ನಿಂದಲೇ ಅನುಮತಿ ಪಡೆದುಕೊಳ್ಳಲಾಗಿತ್ತು. ಅದನ್ನು ಹೊರತಾಗಿ ಸರ್ಕಾರದಿಂದ ಯಾವುದೇ ಒತ್ತಡಗಳು ಬಂದಿರಲಿಲ್ಲ" ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಕೋರ್ಟ್ ನಲ್ಲಿ ಹೇಳಿಕೆ ನೀಡಿದರು.

Hathras Victims Family And UP Govt Officials Attended Before HC: Next Hearing On Nov.02

ಹಿರಿಯ ಅಧಿಕಾರಿಗಳಿಗೆ ಕೋರ್ಟ್ ಸಮನ್ಸ್:

ಉತ್ತರ ಪ್ರದೇಶದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹತ್ರಾಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೋರ್ಟ್ ಸಮನ್ಸ್ ನೀಡಿದ್ದು, ಮುಂದಿನ ನವೆಂಬರ್.02ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ

ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಸಪ್ಟೆಂಬರ್.29ರಂದು ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.

English summary
Hathras Victims Family And UP Govt Officials Attended Before Allahabad HC: Next Hearing On Nov.02.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X