ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏರ್‌ ಶೋ ಸ್ಥಳಾಂತರಕ್ಕೆ ಬಿಜೆಪಿ ಉತ್ತರಿಸಲಿ: ಎಚ್ಡಿಕೆ ಕಿಡಿ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 13: ಏರ್ ಶೋವನ್ನು ಬೆಂಗಳೂರಿನಿಂದ ಲಖ್ನೌಗೆ ಸ್ಥಳಾಂತರಿಸುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಈ ಕುರಿತು ಕೇಂದ್ರ ಸರ್ಕಾರದ ಬಳಿ ಉತ್ತರ ಕೇಳಿದ್ದಾರೆ.

ಬೆಂಗಳೂರಿನಲ್ಲಿ 1996ರಿಂದ ಏರ್‌ಶೋ ಪ್ರದರ್ಶನ ಆಯೋಜಿಸಲಾಗುತ್ತಿದೆ. ಆದರೆ, ಈ ಬಾರಿ ಲಕ್ನೋಗೆ ಸ್ಥಳಾಂತರ ಮಾಡುತ್ತಿರುವ ಕ್ರಮ ಸರಿಯಲ್ಲ. ಕೇಂದ್ರ ಸರ್ಕಾರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದ್ದಾರೆ.

ಏರ್ ಶೋ ಸ್ಥಳಾಂತರದ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!ಏರ್ ಶೋ ಸ್ಥಳಾಂತರದ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

ಉತ್ತರ ಪ್ರದೇಶದಲ್ಲಿ ಹೆಚ್ಚಿನ ಲೋಕಸಭಾ ಸ್ಥಾನಗಳಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏರ್‌ ಶೋವನ್ನು ಲಕ್ನೋಗೆ ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸುತ್ತಿದೆ. ಆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಲು ಹೊರಟಿದೆ. ಇದು ಸರಿಯಲ್ಲ. ಬೆಂಗಳೂರಿನಲ್ಲಿ ಏರ್‌ ಶೋಕ್ಕೆ ಎಲ್ಲ ರೀತಿಯ ಮೂಲ ಸೌಕರ್ಯಗಳಿವೆ. ಆದರೆ, ಏರ್‌ ಶೋ ಸ್ಥಳಾಂತರ ಬಗ್ಗೆ ಕೇಂದ್ರದಿಂದ ಇದುವರೆಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದರು.

HDK urges BJP should answer on air show shift from Bengaluru

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏರ್ ಶೋವನ್ನು ಏಕಾಏಕಿ ಲಖನೋಗೆ ಸ್ಥಳಾಂತರ ಮಾಡಲಾಗಿದೆ. ಲಖನೌನಲ್ಲಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರವಿರುವುದರಿಂದ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ. ಏರ್ ಶೋ ನಡೆಸಲು ಬೆಂಗಳೂರು ಸಶಕ್ತ ಸ್ಥಳವಾಗಿತ್ತು. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಬದ್ಧ, ಎಚ್ಡಿಕೆ ಮಹತ್ವದ ನಡೆ ಉತ್ತರ ಕರ್ನಾಟಕ ಅಭಿವೃದ್ಧಿಗೆ ಬದ್ಧ, ಎಚ್ಡಿಕೆ ಮಹತ್ವದ ನಡೆ

ಮೂರುದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಮಾಡಿ ಇಲ್ಲಿಯ ಕೆಲವಷ್ಟು ಸಮಸ್ಯೆಗಳ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಬೇಕೆಂದುಕೊಂಡಿದ್ದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಳ್ಳಲು ಆಗುತ್ತಿಲ್ಲ. ಚುನಾವಣೆ ನಂತರ ಪ್ರವಾಸ ಕೈಗೊಳ್ಳುತ್ತೇನೆ ಎಂದ ಕುಮಾರಸ್ವಾಮಿ, ಕೆ ಶಿಫ್ ಕಚೇರಿಯನ್ನ ಹಾಸನಕ್ಕೆ ಸ್ಥಳಾಂತರ ಮಾಡಿದ್ದು ಆಯಾ ಇಲಾಖೆಗೆ ಬಿಟ್ಟಿದ್ದು ಎಂದು ಸಮಜಾಯಿಷಿ ನೀಡಿದರು.

English summary
Chief minister H.D.Kumaraswamy has urged BJP to answer about 22nd international air show shifting from Bangalore to Lucknow of Uttar Pradesh eyeing on upcoming parliament poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X