ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಈ ಚಿತ್ರ ನೋಡಿ ಯೋಗಿಜಿಗೆ ತುಂಬಾ ನೋವಾಗಿದೆ ಎಂದು ತಿಳಿಯಿತು'

|
Google Oneindia Kannada News

ನವದೆಹಲಿ, ಅಕ್ಟೋಬರ್‌ 20: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಪೊಲೀಸರು ಸೆಲ್ಫಿ ಕ್ಲಿಕ್ಕಿಸಿರುವ ಚಿತ್ರ ವೈರಲ್ ಆಗಿದೆ. ''ಈ ಚಿತ್ರ ನೋಡಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರಿಗೆ ಬಹಳ ನೋವಾಗಿದೆ, ಸಿಟ್ಟಾಗಿದ್ದಾರೆ,'' ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ವ್ಯಂಗ್ಯವಾಡಿದ್ದಾರೆ.

ಪೊಲೀಸರು ತನ್ನೊಂದಿಗೆ ಫೋಟೋ ತೆಗಿಸಿಕೊಳ್ಳುವುದರ ಚಿತ್ರವನ್ನು ನೋಡಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸುತ್ತಿರಬಹುದು ಎಂದು ಕೂಡಾ ಕಾಂಗ್ರೆಸ್‌ ನಾಯಕಿ ಲೇವಡಿ ಮಾಡಿದ್ದಾರೆ.

ಪೊಲೀಸ್‌ ಕಸ್ಟಡಿ ಸಾವು ಪ್ರಕರಣ: ಆಗ್ರಾಕ್ಕೆ ತೆರಳುತ್ತಿದ್ದ ಪ್ರಿಯಾಂಕಾಗೆ ತಡೆಪೊಲೀಸ್‌ ಕಸ್ಟಡಿ ಸಾವು ಪ್ರಕರಣ: ಆಗ್ರಾಕ್ಕೆ ತೆರಳುತ್ತಿದ್ದ ಪ್ರಿಯಾಂಕಾಗೆ ತಡೆ

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, "ಯೋಗಿ ಜಿ ಈ ಚಿತ್ರವನ್ನು ನೋಡಿ ಬಹಳ ನೊಂದಿದ್ದಾರೆ ಎಂದು ನಾನು ಕೇಳಲ್ಪಟ್ಟೆ. ಈ ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೂ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ," ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Heard Yogi Jis So Hurt By This Pic says Priyanka Gandhi On Cops Selfie

"ಪೊಲೀಸರೊಂದಿಗೆ ಫೋಟೋ ತೆಗೆಯುವುದು ಅಪರಾಧ ಎಂದು ಆದರೆ ನನಗೆಯೇ ಶಿಕ್ಷೆ ವಿಧಿಸಬಹುದು. ಶ್ರಮಶೀಲ ಮತ್ತು ನಿಷ್ಠಾವಂತ ಮಹಿಳಾ ಪೊಲೀಸರ ಭವಿಷ್ಯವನ್ನು ಸರ್ಕಾರ ಕೆಡಿಸಬಾರದು," ಎಂದು ಕೂಡಾ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ವ್ಯಕ್ತಿಯೊಬ್ಬನ ಸಾವು ಸಂಭವಿಸಿದೆ ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಆ ಮೃತ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿಯಾಗಲು ಉತ್ತರ ಪ್ರದೇಶದ ಆಗ್ರಾಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ತಡೆದಿದ್ದು, ವಶಕ್ಕೆ ಪಡೆದಿದ್ದರು. ಈ ವೇಳೆ ಅಲ್ಲಿ ನೆರೆದಿದ್ದ ಪೊಲೀಸರು ಸೇರಿದಂತೆ ಹಲವಾರು ಮಂದಿ ಪ್ರಿಯಾಂಕ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ವಕೀಲರ ಹತ್ಯೆ: ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಾಗಿಲ್ಲ ಎಂದ ಪ್ರಿಯಾಂಕವಕೀಲರ ಹತ್ಯೆ: ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಾಗಿಲ್ಲ ಎಂದ ಪ್ರಿಯಾಂಕ

ಇನ್ನು ಈ ಚಿತ್ರದಲ್ಲಿ ಹಲವಾರು ಪೊಲೀಸ್‌ ಮಹಿಳೆಯರು ಫೋಟೋ ತೆಗೆಸಿಕೊಳ್ಳಲು ಮುಗಿ ಬಿದ್ದಿರುವುದು ಕಂಡು ಬಂದಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕಿ ಫೋಟೋಗೆ ಫೋಸ್‌ ನೀಡುತ್ತಾ ನಗೆ ಬೀರಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್‌ ನಾಯಕಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಲಕ್ನೋದಿಂದ ಆಗ್ರಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತಡೆಯಲಾಗಿದ್ದು ಪೊಲೀಸರು ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಬಳಿಕ ಪ್ರಿಯಾಂಕಾ ಗಾಂಧಿಯನ್ನು ಬಿಡುಗಡೆ ಮಾಡಿ ಮೃತರ ಕುಟುಂಬಸ್ಥರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್‌ ಅಧಿಕಾರಿಗಳು, "ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಳಿ ಯಾವುದೇ ಅನುಮತಿ ಪತ್ರ ಇಲ್ಲದ ಕಾರಣದಿಂದಾಗಿ ನಾವು ತಡೆದಿದ್ದೇವೆ," ಎಂದು ತಿಳಿಸಿದ್ದರು. ಈ ಕುರಿತಾಗಿ ಟ್ವೀಟ್‌ ಮಾಡಿದ್ದ ಪ್ರಿಯಾಂಕಾ ವಾದ್ರಾ, "ಪೊಲೀಸ್‌ ಕಸ್ಡಡಿಯಲ್ಲಿ ಅರುಣ್‌ ವಾಲ್ಮೀಕಿಯ ಸಾವು ಸಂಭವಿಸಿದೆ. ಅರುಣ್‌ನ ಕುಟುಂಬ ನ್ಯಾಯವನ್ನು ಬಯಸಿದೆ. ನಾನು ಆ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದೆ. ಆದರೆ ಉತ್ತರ ಪ್ರದೇಶ ಸರ್ಕಾರಕ್ಕೆ ಇದರಲ್ಲಿ ಯಾಕೆ ಭಯ?. ನನ್ನನ್ನು ಯಾಕೆ ತಡೆಯಲಾಗಿದೆ," ಎಂದು ಪ್ರಶ್ನೆ ಮಾಡಿದ್ದರು.

ಉತ್ತರ ಪ್ರದೇಶದಲ್ಲಿ ಇಂತಹ ಘಟನೆ ಇದು ಎರಡನೇ ಬಾರಿಗೆ ನಡೆದಿದೆ. ಈ ಹಿಂದೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಈ ಮೃತ ರೈತರ ಕುಟುಂಬಸ್ಥರನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಲಖಿಂಪುರ ಖೇರಿಗೆ ತೆರಳಿದ್ದ ಸಂದರ್ಭದಲ್ಲಿ ಪೊಲೀಸರು ಪ್ರಿಯಾಂಕ ವಾದ್ರಾರನ್ನು ತಡೆದು ಬಂಧನ ಮಾಡಿದ್ದರು. ಈ ವಿಚಾರದಲ್ಲಿ ಕಾಂಗ್ರೆಸ್‌ ಪ್ರತಿಭಟನೆಗಳನ್ನು ನಡೆಸಿದ್ದವು. ಅಕ್ಟೋಬರ್‌ 4 ರಂದು ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಬುಧವಾರ ಸೀತಾಪುರ ಗೆಸ್ಟ್‌ ಹೌಸ್‌ನಿಂದ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಕಾಂಗ್ರೆಸ್‌ ನಾಯಕರುಗಳಾದ ಪ್ರಿಯಾಂಕ ಹಾಗೂ ರಾಹುಲ್‌ ಮೃತ ರೈತರ ಕುಟುಂಬಸ್ಥರನ್ನು ಭೇಟಿಯಾಗಿದ್ದರು.

(ಒನ್‌ಇಂಡಿಯಾ ಸುದ್ದಿ)

English summary
Heard Yogi Ji's So Hurt By This Pic says Priyanka Gandhi On Cops Selfie.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X