ಹಿಜಾಬ್ ವಿವಾದ: ಸಹೋದರಿಯರು ಹೋರಾಟದಲ್ಲಿ ಯಶಸ್ವಿಯಾಗಲಿ ಎಂದ ಓವೈಸಿ

ಲಕ್ನೋ, ಫೆಬ್ರವರಿ 9: ಕರ್ನಾಟಕದೆಲ್ಲೆಡೆ ಹಿಜಾಬ್ ವಿವಾದ ಉಲ್ಬಣಗೊಂಡಿದ್ದು, ಅದು ಹಿಂಸಾಚಾರ ರೂಪ ಪಡೆಯುತ್ತಿದೆ, ಇದರ ನಡುವೆ ಸಹೋದರಿಯರು ಹೋರಾಟದಲ್ಲಿ ಯಶಸ್ವಿಯಾಗಲಿ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಆಲ್ ಇಂಡಿಯಾ AIMIM ನಾಯಕ ಅಸಾದುದ್ದೀನ್ ಓವೈಸಿ ಜನರು ತಮ್ಮ ಮೇಲೆ ದ್ವೇಷ ಸಾಧಿಸುವ ಮತ್ತು ಗುಂಡಿನ ದಾಳಿ ನಡೆಸುವವರ ವಿರುದ್ಧ ನಿಲ್ಲಬೇಕು ಎಂದು ಕರೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣ ಸಂವಿಧಾನದ 15, 19 ಮತ್ತು 21 ನೇ ವಿಧಿಯ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದರು.

Hijab Row: Owaisi Urges Muslim Women To Stand Against Hatred And Bullets Being Fired

"ಗಡ್ಡ ಮತ್ತು ಟೋಪಿಯೊಂದಿಗೆ ಸಂಸತ್ತಿಗೆ ಹೋಗಬಹುದಾದರೆ, ಮುಸ್ಲಿಂ ಹುಡುಗಿಯರು ಹಿಜಾಬ್ ಅಥವಾ ನಿಖಾಬ್ ಧರಿಸಿ ಶಾಲೆಗೆ ಏಕೆ ಹೋಗಬಾರದು?" ಎಂದು ಪ್ರಶ್ನಿಸಿದ ಅಸಾದುದ್ದೀನ್ ಓವೈಸಿಯು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ಖಂಡಿಸಿದರು.

ಮುಂದುವರೆದು, ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ನಮ್ಮ ಸಹೋದರಿಯರು ತಮ್ಮ ಹೋರಾಟದಲ್ಲಿ ಯಶಸ್ವಿಯಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಕರ್ನಾಟಕದಲ್ಲಿ ಸಂವಿಧಾನದ 15, 19 ಮತ್ತು 21ರ ಘೋರ ಉಲ್ಲಂಘನೆಯಾಗುತ್ತಿದೆ. ಕರ್ನಾಟಕದ ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.
ದಾವಣಗೆರೆ ಜಿಲ್ಲೆಗೂ ಹಿಜಾಬ್ ಗದ್ದಲ ಹರಡಿಕೊಂಡಿದೆ. ಜಿಲ್ಲೆಯ ಹೊನ್ನಾಳಿ ಸರ್ಕಾರಿ ಪದವಿ ಕಾಲೇಜ್ ನಲ್ಲಿ ಹಿಜಾಬ್ ಧರಿಸುವುದನ್ನ ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲ್ ಹಾಕಿಕೊಡು ಬಂದಿದ್ದಾರೆ.

ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ಎರಡು ಗುಂಪುಗಳ ಜೊತೆ ಮಾತುಕತೆ ನಡೆಸಿ ಕಾಲೇಜುಗಳಲ್ಲಿ ಸಂಘರ್ಷ ಸರಿಯಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಕ್ಕೆ ಪೊಲೀಸರ ತಡೆ ಒಡ್ಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು, ಪೊಲೀಸರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ತರಗತಿಗೆ ಪ್ರವೇಶ ಮಾಡಿದ್ದಾರೆ. ಕೇಸರಿ ಶಾಲು ಹಾಕಿ ಬಂದಿದ್ದಕ್ಕೆ ಪ್ರಾಂಶುಪಾಲರ ಆಕ್ಷೇಪ ಕೇಳಿಬಂದಿದೆ. ಕಾಲೇಜಿಗೆ ಪೊಲೀಸರನ್ನು ಕರೆಸಿ ವಿದ್ಯಾರ್ಥಿಗಳಿಗೆ ವಾರ್ನಿಂಗ್ ಮಾಡಿಸಲಾಗಿದೆ.

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಉಡುಪಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಬುರ್ಖಾ ಧರಿಸಿ ಬಂದಿದ್ದ 22 ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಘಟನೆ ನಡೆದಿದೆ.

ಕೆಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದದ ಕಾವು ಹೆಚ್ಚಾಗಿದ್ದು, ಉಡುಪಿ, ಶಿವಮೊಗ್ಗ, ಬಾಗಲಕೋಟೆ ಮತ್ತು ಇತರ ಪ್ರದೇಶಗಳಲ್ಲಿನ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಬಿಗುವಿನ ವಾತಾವರಣ ಮುಂದುವರೆದಿದೆ. ಆದ ಕಾರಣ ರಾಜ್ಯಸರ್ಕಾರ ಮೂರು ದಿನಗಳ ಕಾಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಇನ್ನು ವರದಿಗಳ ಪ್ರಕಾರ, ದಾವಣಗೆರೆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂಸಾತ್ಮಕ ಘಟನೆಯಲ್ಲಿ ಹಲವಾರು ಪೊಲೀಸರು ಮತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು, ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+