ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಸಿಗದೆ ನೂರಾರು ಮಂದಿ ಸಾವು: ಒಪ್ಪಿಕೊಂಡ ಬಿಜೆಪಿ ಶಾಸಕ
ಲಕ್ನೋ, ಜುಲೈ 28: ಕೊರೊನಾ ಎರಡನೇ ಅಲೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ.
ಹಲವು ದಿನಗಳಿಂದ ಪ್ರತಿಪಕ್ಷಗಳು ಸೇರಿದಂತೆ ಹಲವು ಮಂದಿ ಇದೇ ಆರೋಪ ಮಾಡಿದ್ದರು. ಆದರೆ ಬಿಜೆಪಿ ಅದನ್ನು ತಳ್ಳಿ ಹಾಕಿತ್ತು. ಇದೀಗ ಬಿಜೆಪಿ ಶಾಸಕರೊಬ್ಬರು ಇದೇ ಹೇಳಿಕೆ ನೀಡಿದ್ದು, ಬಿಜೆಪಿಯೇ ಒಪ್ಪಿಕೊಂಡಂತಾಗಿದೆ.
ಬಿಜೆಪಿಯ ಗೋಪಾಮೌ ಶಾಸಕ ಶ್ಯಾಮ್ ಪ್ರಕಾಶ್ ಅವರು ಪತ್ರಕರ್ತ ಆನಂದ್ ಮಿಶ್ರಾ ಅವರ ಫೇಸ್‌ಬುಕ್ ವಾಲ್ ನಲ್ಲಿ ಈ ರೀತಿಯಲ್ಲಿ ಬರೆದಿದ್ದಾರೆ.

ಈ ವಿಷಯ ಎತ್ತಿದ ಕೆಲ ಶಾಸಕರ ನ್ಯೂಸ್ ಪೇಪರ್ ಕಟ್ಟಿಂಗ್ ಅನ್ನು ಆನಂದ್ ಮಿಶ್ರಾ ಪೋಸ್ಟ್ ಮಾಡಿದ್ದರು. ನೀವು ಹೇಳುತ್ತಿರುವುದು ನಿಜ, ನಿಮ್ಮ ಅಭಿಪ್ರಾಯವನ್ನು ಒಪ್ಪುತ್ತೇನೆ.
ಆಕ್ಸಿಜನ್ ಕೊರತೆಯಿಂದ ನೂರಾರು ಜನರು ಸಾವನ್ನಪ್ಪಿದ್ದಾರೆ. ಶಾಸಕ ರಾಜ್ ಕುಮಾರ್ ಅಗರ್ ವಾಲ್ ಸೇರಿದಂತೆ ಯಾರೂ ಕೂಡಾ ಲಕ್ಷಾಂತರ ಕುಟುಂಬಗಳ ನೋವನ್ನು ನೋಡಲಿಲ್ಲ ಎಂದು ಶಾಸಕ ಬರೆದಿದ್ದರು.
ಅಗರ್ ಲಾಲ್ ಸಾಂಡಿಲಾದ ಬಿಜೆಪಿ ಶಾಸಕ, ಕೋವಿಡ್ ಎರಡನೇ ಅಲೆ ವೇಳೆಯಲ್ಲಿ ಇವರ ಪುತ್ರ ಸಾವನ್ನಪ್ಪಿದ್ದರು. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವುದಾಗಿ ಆರೋಪ ಮಾಡಲಾಗಿತ್ತು. ಆದಾಗ್ಯೂ, ಸೋಮವಾರ ಫೇಸ್ ಬುಕ್‌ನಲ್ಲಿ ಬರೆಯಲಾದ ವಿಷಯ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ಯಾಮ್ ಪ್ರಕಾಶ್, ಉತ್ತರ ಪ್ರದೇಶದ ಬಗ್ಗೆ ಬರೆದಿಲ್ಲ ಎಂದು ಹೇಳಿಕೆ ನೀಡಿದ್ದರು.
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಬಗ್ಗೆ ಯಾವುದೇ ವರದಿಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿಲ್ಲ ಎಂದು ಕಳೆದ ವಾರವಷ್ಟೇ ರಾಜ್ಯಸಭೆಯಲ್ಲಿ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತೀ ಪ್ರವೀಣ್ ಪವಾರ್ ಲಿಖಿತ ಹೇಳಿಕೆ ನೀಡಿದ್ದರು. ಈ ಹಿಂದೆ ಕೂಡಾ ಎರಡನೇ ಅಲೆ ಅಸಮರ್ಪಕ ನಿರ್ವಹಣೆ ಕುರಿತಂತೆ ಬಿಜೆಪಿ ಮುಖಂಡರು ದೂರಿದ್ದರು.
ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಬಗ್ಗೆ ರಾಜ್ಯಗಳು ಯಾವುದೇ ವರದಿ ನೀಡಿಲ್ಲ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದ ಮಾರನೇ ದಿನವೇ ಅದೇ ಪಕ್ಷದ ಶಾಸಕ ಈ ರೀತಿಯ ಹೇಳಿಕೆ ನೀಡಿರುವುದು ಪಕ್ಷಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications