ನಾನು ಉತ್ತರಪ್ರದೇಶ ಸಿಎಂ ಅಭ್ಯರ್ಥಿಯಲ್ಲ; ಉಲ್ಟಾ ಹೊಡೆದ ಪ್ರಿಯಾಂಕಾ ಗಾಂಧಿ

ನವದೆಹಲಿ, ಜನವರಿ 22: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಹೇಳಿಕೆಯನ್ನು ಶನಿವಾರ ಹಿಂತೆಗೆದುಕೊಂಡಿದ್ದಾರೆ.

ತಾವು ಶುಕ್ರವಾರ ನೀಡಿದ ಹೇಳಿಕೆಯು ಉತ್ಪ್ರೇಕ್ಷೆಯ ಹೇಳಿಕೆ ಆಗಿತ್ತು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪಷ್ಟನೆ ನೀಡಿದರು. ಸುದ್ದಿಗಾರರು ಉತ್ತರ ಪ್ರದೇಶ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಬಗ್ಗೆ ಕೇಳಿದ್ದಾಗ 'ನಾನೇ ಸಿಎಂ ಅಭ್ಯರ್ಥಿ' ಎಂಬ ಅರ್ಥ ಬರುವಂತೆ ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿದ್ದರು. ಅದು ರಾಷ್ಟ್ರ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು.

"ನಾನು ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಎಂದು ಹೇಳುತ್ತಿಲ್ಲ, ನೀವೆಲ್ಲರೂ ಒಂದೇ ಪ್ರಶ್ನೆಯನ್ನು ಮತ್ತೆ ಮತ್ತೆ ಕೇಳುತ್ತಿರುವುದರಿಂದ, ಎಲ್ಲೆಡೆ ನನ್ನ ಮುಖವನ್ನು ನೀವು ನೋಡಬಹುದು ಎಂದು ಸಿಟ್ಟಿನಿಂದ ಹೇಳಿದ್ದೇನೆ," ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದರು.

I Am Not a Uttar Pradesh CM Candidate Says Priyanka Gandhi

ಉತ್ತರ ಪ್ರದೇಶದಲ್ಲಿ ಚುನಾವಣೋತ್ತರ ಮೈತ್ರಿಯ ಸಾಧ್ಯತೆಗಳ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, "ಬಿಜೆಪಿಗೆ ಬಾಗಿಲು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದೆ, ಆದರೆ ಇತರ ಪಕ್ಷಗಳಿಗೆ ಮುಕ್ತವಾಗಿದೆ ಎಂದರು.

ಉತ್ತರಪ್ರದೇಶ ಸೇರಿದಂತೆ ಈ ದೇಶದಲ್ಲಿ ಸರ್ಕಾರ ಮತ್ತು ದೊಡ್ಡ ಉದ್ಯಮಿಗಳ ಲಾಭ ಪಡೆಯುವ ಕೆಲವೇ ಕೆಲವು ಸ್ನೇಹಿತರು ಇದ್ದಾರೆ. ಉಳಿದವರೆಲ್ಲರೂ ಬಹಳ ನೋವಿನಲ್ಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದರು.

ಉತ್ತರಪ್ರದೇಶದಲ್ಲಿ ಶೇಕಡಾವಾರು ನಿರುದ್ಯೋಗಿಗಳ ಬಗ್ಗೆ ನಾವು ಏಕೆ ಮಾತನಾಡಬಾರದು? ಸರ್ಕಾರ ಶಿಕ್ಷಣಕ್ಕೆ ಖರ್ಚು ಮಾಡುತ್ತಿರುವ ಬಜೆಟ್‌ ಬಗ್ಗೆ ನಾವೇಕೆ ಮಾತನಾಡಬಾರದು? ಉತ್ತರಪ್ರದೇಶದ ಪ್ರಗತಿಗೆ ಸಂಬಂಧವಿಲ್ಲದ ಪ್ರಶ್ನೆಗಳನ್ನು ನಾವು ಏಕೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದರು.

I Am Not a Uttar Pradesh CM Candidate Says Priyanka Gandhi

ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಉತ್ತರಪ್ರದೇಶ ಚುನಾವಣೆಗೆ ಸಂಬಂಧಿಸಿದಂತೆ ಹೊಸ ಸಂಚಲನದ ಹೇಳಿಕೆಯೊಂದು ಕೇಳಿಬಂದಿತ್ತು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದರು.

ಉತ್ತರಪ್ರದೇಶದ ಯುವ ಸಮುದಾಯದ ಮಂದಿಗೆ ಉದ್ಯೋಗ ನೀಡುವ ಕುರಿತಾದ ಪ್ರಣಾಳಿಕೆ ಬಿಡುಗಡೆ ಮಾಡಿದ ವೇಳೆ ಮಾತನಾಡಿದ್ದ ಪ್ರಿಯಾಂಕಾ ಗಾಂಧಿ, ಬಿಜೆಪಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮುಂದಿಟ್ಟಿದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಹೇಳಿಕೆ ನೀಡಿದ್ದರು.

'ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ನೀವು ಬೇರೆ ಯಾವುದಾದರೂ ಮುಖವನ್ನು ಕಾಣುತ್ತೀರಾ?' ಎಂದು ಪ್ರಶ್ನೆ ಮಾಡಿದ್ದರು. ಆ ಬಗ್ಗೆ ಮತ್ತಷ್ಟು ಪ್ರಶ್ನಿಸಿದಾಗ 'ನೀವು ನನ್ನ ಮುಖವನ್ನು ನೋಡಬಹುದು? ಕಾಣುವುದಿಲ್ಲವೇ?' ಎಂದು ಪ್ರಶ್ನಿಸಿದರು. ಈ ಹೇಳಿಕೆಯಿಂದ ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಪ್ರಿಯಾಂಕಾ ಗಾಂಧಿ ಮತ್ತೆ ಸುದ್ದಿ ಮಾಡಿದ್ದರು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಪ್ರಚಾರವನ್ನು ಮುನ್ನಡೆಸುತ್ತಿರುವ ಮತ್ತು ಎಲ್ಲಾ ಸಂವಹನಗಳಲ್ಲಿ ಪಕ್ಷದ ಮುಖವಾಗಿರುವ ಶ್ರೀಮತಿ ಗಾಂಧಿ ವಾದ್ರಾ ಅವರು ಪುನರಾವರ್ತಿಸಿದರು: "ನೀವು ನನ್ನ ಮುಖವನ್ನು ನೋಡುತ್ತೀರಿ, ಅಲ್ಲವೇ?"

ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಚೊಚ್ಚಲ ಚುನಾವಣೆಯ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ, ಆ ಪ್ರಶ್ನೆಯನ್ನು ಕೇಳಿದಾಗ ಅವರು ಹೇಳಿದ್ದು ಹೀಗೆ. "ಇನ್ನೂ ಯಾವುದನ್ನೂ ನಿರ್ಧರಿಸಲಾಗಿಲ್ಲ, ನಾವು ಮಾಡಿದಾಗ ನಾವು ನಿಮಗೆ ತಿಳಿಸುತ್ತೇವೆ ಎಂದು. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಖ್ಯಮಂತ್ರಿಯಾಗಲು ಅಸೆಂಬ್ಲಿ ಚುನಾವಣೆಯನ್ನು ಗೆಲ್ಲಬೇಕಾಗಿಲ್ಲ ಎಂಬುದನ್ನು ಗಮನಾರ್ಹ ಸಂಗತಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+