ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ನಟ ರವಿ ಕಿಶನ್
ಲಕ್ನೋ, ಮಾರ್ಚ್ 27: 2017ರಲ್ಲಿ ಭಾರತೀಯ ಜನತಾ ಪಕ್ಷ ಸೇರಿದ ಜನಪ್ರಿಯ ಭೋಜ್ ಪುರಿ ನಟ ರವಿ ಕಿಶನ್ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಆದರೆ, ಯಾವ ಕ್ಷೇತ್ರದಿಂದ ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಯಾವ ಕ್ಷೇತ್ರ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ನಾನು ಸ್ಪರ್ಧೆಗೆ ಸಿದ್ಧ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತಿಳಿಸಿದ್ದೇನೆ ಎಂದರು.
ನರೇಂದ್ರ ಮೋದಿ ಕುರಿತ 'ತು ಜೀತ್ ಕೇ ಲಿಯೇ ಬನಾ' ಎಂಬ ಹಾಡನ್ನು ಅರ್ಪಣೆ ಮಾಡಿ ಮಾತನಾಡಿದರು. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ಮ್ಯೂಸಿಕ್ ವಿಡಿಯೋ ಬಿಡುಗಡೆ ಮಾಡಿದರು.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಡು ಜಾನ್ ಪುರ್ ಕ್ಷೇತ್ರದಿಂದ ಸ್ಪರ್ಧಿಸಿದ ರವಿ ಕಿಶನ್ ಗೆ ಕೇವಲ 4% ಮತಗಳು ಸಿಕ್ಕಿತ್ತು. ನಂತರ ಬಿಜೆಪಿ ಸೇರಿ, ಮೋದಿ ಪರ ಪ್ರಚಾರ ಕೈಗೊಂಡರು. ಏಪ್ರಿಲ್ 11ರಿಂದ ಮೇ 19ರ ತನಕ ಏಳು ಹಂತಗಳಲ್ಲಿ ಉತ್ತರಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರಬರಲಿದೆ.












Click it and Unblock the Notifications